Ezekiel 41:4 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆಮೇಲೆ ಆ ಪುರುಷನು ಕೋಣೆಯ ಉದ್ದವನ್ನು ಅಳತೆ ಮಾಡಿದನು. ಅದು ಇಪ್ಪತ್ತು ಮೊಳ ಉದ್ದ, ಇಪ್ಪತ್ತು ಮೊಳ ಅಗಲವಾಗಿತ್ತು. ‘ಇದು ಮಹಾ ಪವಿತ್ರಸ್ಥಳ’ ಎಂದು ಅವನು ನನಗೆ ತಿಳಿಸಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅದರ ಕೋಣೆಗಳ ಉದ್ದವು ಇಪ್ಪತ್ತು ಮೊಳಗಳೂ, ಅಗಲವು ಇಪ್ಪತ್ತು ಮೊಳಗಳೂ ಇದ್ದವು. ಆಗ ಅವನು ನನಗೆ, “ಇದು ಮಹಾಪರಿಶುದ್ಧ ಸ್ಥಳ” ಎಂದು ಹೇಳಿದನು.
Kannada BSI Bible 2016
ಹೀಗೆ ಅವನು ಅದರ ಉದ್ದ ಇಪ್ಪತ್ತು ಮೊಳವೆಂದೂ ಅಗಲ ಇಪ್ಪತ್ತು ಮೊಳವೆಂದೂ ದೇವಾ ಲಯದ ಮುಂದೆ ಅಳೆದನು; ಇದೇ ಮಹಾಪರಿಶುದ್ಧ ಸ್ಥಳ ಎಂದು ಅವನು ನನಗೆ ಹೇಳಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ದ್ವಾರದ ಪಕ್ಕದ ಗೋಡೆಗಳ ಅಗಲ ಏಳೇಳು ಮೊಳ, ಗರ್ಭಗೃಹದ ಉದ್ದ ಇಪ್ಪತ್ತು ಮೊಳ, ಅಗಲ ಇಪ್ಪತ್ತು ಮೊಳ ಇದ್ದವು; ಆಗ ಅವನು ನನಗೆ - ಇದು ಮಹಾಪರಿಶುದ್ಧಸ್ಥಳವೆಂದು ಹೇಳಿದನು.
Kannada Bible (KNCL) BSI 2016
ದ್ವಾರದ ಪಕ್ಕದ ಗೋಡೆಗಳ ಅಗಲ ಮೂರುವರೆ ಮೂರುವರೆ ಮೀಟರ್, ಗರ್ಭ ಗೃಹದ ಉದ್ದ ಹತ್ತು ಮೀಟರ್, ಅಗಲ ಹತ್ತು ಮೀಟರ್ ಇದ್ದವು. ಆಗ ಅವನು ನನಗೆ, “ಇದು ಮಹಾಪರಿಶುದ್ಧ ಸ್ಥಳ,” ಎಂದು ಹೇಳಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವನು ಒಳಗಿನ ಪರಿಶುದ್ಧಸ್ಥಳದ ಉದ್ದವನ್ನು ಅಳೆದನು; ಅದು ಸುಮಾರು ಹತ್ತು ಮೀಟರ್ ಆಗಿತ್ತು; ಅದರ ಅಗಲವು ಮುಖ್ಯ ಸಭಾಂಗಣದ ಕೊನೆಯವರೆಗೂ ಸುಮಾರು ಹತ್ತು ಮೀಟರ್ ಆಗಿತ್ತು. ಅವನು ನನಗೆ, “ಇದು ಅತ್ಯಂತ ಪವಿತ್ರ ಸ್ಥಳವಾಗಿದೆ” ಎಂದು ಹೇಳಿದನು.