Ezekiel 41:6 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆ ಕೋಣೆಗಳು ಒಂದರ ಮೇಲೊಂದು ಮೂರು ಅಂತಸ್ತಿನಲ್ಲಿದ್ದವು. ಪ್ರತಿ ಅಂತಸ್ತಿನಲ್ಲಿ ಮೂವತ್ತು ಕೊಠಡಿಗಳಿದ್ದವು. ಆಲಯದ ಗೋಡೆಯು ಮೆಟ್ಟಿಲು ಮೆಟ್ಟಿಲುಗಳಾಗಿ ಕಟ್ಟಲ್ಪಟ್ಟಿತ್ತು. ಪಕ್ಕದ ಕೋಣೆಗಳು ಈ ಮೆಟ್ಟಿಲುಗಳ ಮೇಲೆ ಆಧಾರಗೊಂಡಿದ್ದವು. ಅವು ಆಲಯದ ಗೋಡೆಯನ್ನು ಆಧಾರ ಮಾಡಿಕೊಂಡಿರಲಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆ ಕೊಠಡಿಗಳು ಒಂದರ ಮೇಲೊಂದು ಮೂರು ಅಂತಸ್ತು ಆಗಿದ್ದವು; ಒಂದೊಂದು ಅಂತಸ್ತಿನಲ್ಲಿ ಮೂವತ್ತು ಕೊಠಡಿಗಳಿದ್ದವು; ದೇವಸ್ಥಾನದ ಗೋಡೆಯು ಮೆಟ್ಟಿಲುಗಳಿಂದ ಕಟ್ಟಲ್ಪಟ್ಟಿತ್ತು. ಗೋಡೆಯಲ್ಲಿ ರಂಧ್ರವಿಲ್ಲದೆ ಆ ಮೆಟ್ಟಿಲುಗಳೇ ಸುತ್ತಣ ಕೊಠಡಿಗಳ ತೊಲೆಗಳಿಗೆ ಆಧಾರವಾಗಿದ್ದವು. ಆದರೆ ಮನೆಯ ಗೋಡೆಗೆ ಯಾವ ಆಧಾರವಿರಲಿಲ್ಲ.
Kannada BSI Bible 2016
ಆ ಪಾರ್ಶ್ವದ ಕೊಠಡಿಗಳು ನೂರು ಇದ್ದವು. ಒಂದರ ಮೇಲೆ ಒಂದರಂತೆ ಮೂವತ್ತು ಅಂತಸ್ತು ಇದ್ದವು; ಅವರು ಹಿಡಿಯಲ್ಪಡುವ ಹಾಗೆ ಪಾರ್ಶ್ವದ ಕೊಠಡಿಗಳಿಗಾಗಿ ಇರುವ ಆಲಯವನ್ನು ಹೊಂದಿದ ಗೋಡೆಯಲ್ಲಿ ಸುತ್ತ ಲಾಗಿ ಸೇರಿಸಲ್ಪಟ್ಟಿದ್ದವು. ಆದರೆ ಮನೆಯ ಗೋಡೆಯಲ್ಲಿ ಹಿಡಿಸಲ್ಪಡಲಿಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ಆ ಕೊಠಡಿಗಳು ಒಂದರ ಮೇಲೊಂದು ಮೂರಂತಸ್ತಾಗಿದ್ದವು; ಒಂದೊಂದು ಅಂತಸ್ತಿನಲ್ಲಿ ಮೂವತ್ತು ಮೂವತ್ತಿದ್ದವು; ದೇವಸ್ಥಾನದ ಗೋಡೆಯು ಮೆಟ್ಲು ಮೆಟ್ಲಾಗಿ ಕಟ್ಟಲ್ಪಟ್ಟಿತ್ತು. ಗೋಡೆಯಲ್ಲಿ ತೂತಿಲ್ಲದೆ ಆ ಮೆಟ್ಲುಗಳೇ ಸುತ್ತಣ ಕೊಠಡಿಗಳ ತೊಲೆಗಳಿಗೆ ಅಧಾರವಾಗಿದ್ದವು.
Kannada Bible (KNCL) BSI 2016
ಆ ಕೊಠಡಿಗಳು ಒಂದರ ಮೇಲೆ ಮೇಲೊಂದು ಮೂರಂತಸ್ತಾಗಿದ್ದವು. ಒಂದೊಂದು ಅಂತಸ್ತಿನಲ್ಲಿ ಮೂವತ್ತು ಮೂವತ್ತು ಕೊಠಡಿಗಳಿದ್ದವು. ದೇವಸ್ಥಾನದ ಗೋಡೆಯನ್ನು ಮೆಟ್ಟಲು ಮೆಟ್ಟಲಾಗಿ ಕಟ್ಟಲಾಗಿತ್ತು. ಗೋಡೆಯಲ್ಲಿ ತೂತಿಲ್ಲದೆ ಆ ಮೆಟ್ಟಲುಗಳೇ ಸುತ್ತಣ ಕೊಠಡಿಗಳ ತೊಲೆಗಳಿಗೆ ಆಧಾರವಾಗಿದ್ದವು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆ ಕೊಠಡಿಗಳು ಒಂದರ ಮೇಲೊಂದು ಮೂರು ಅಂತಸ್ತಾಗಿದ್ದವು; ಒಂದೊಂದು ಅಂತಸ್ತಿನಲ್ಲಿ ಮೂವತ್ತು ಮೂವತ್ತು ಕೊಠಡಿಗಳಿದ್ದವು. ಪಕ್ಕದ ಕೋಣೆಗಳಿಗೆ ಆಧಾರವಾಗಿ ದೇವಾಲಯದ ಗೋಡೆಯ ಸುತ್ತಲೂ ಮುಂಚಾಚಿರುವಿಕೆಗಳು ಇದ್ದವು. ಇದರಿಂದಾಗಿ ಪೋಷಕ ಭಾಗಗಳನ್ನು ದೇವಾಲಯದ ಗೋಡೆಯೊಳಗೆ ಸೇರಿಸಲಾಗಿಲ್ಲ.