Ezekiel 41:7 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಪ್ರತಿ ಅಂತಸ್ತು ಅದರ ಕೆಳಗಿನ ಅಂತಸ್ತಿಗಿಂತ ಅಗಲವಾಗಿದ್ದವು. ಆಲಯದ ಸುತ್ತ ಇದ್ದ ಕೋಣೆಗಳ ಗೋಡೆಗಳು ಮೇಲಕ್ಕೆ ಹೋದಂತೆ ಕಿರಿದಾಗಿದ್ದವು. ಹೀಗೆ ಕೊನೆ ಅಂತಸ್ತಿನ ಕೋಣೆಗಳು ಕೆಳಗಣ ಕೋಣೆಗಳಿಗಿಂತ ಹೆಚ್ಚು ಅಗಲವಾಗಿದ್ದವು. ಮಧ್ಯ ಅಂತಸ್ತಿನ ಮೂಲಕ ಒಂದು ನಿಚ್ಚಣಿಕೆಯು ಕೆಳಗಿನ ಅಂತಸ್ತಿನಿಂದ ಕೊನೆಯ ಅಂತಸ್ತಿನವರೆಗೆ ಹೋಗಿತ್ತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಸುತ್ತಣ ಅಂತಸ್ತುಗಳು ಮೇಲೆ ಹೋದ ಹಾಗೆಲ್ಲಾ ಆಯಾ ಕೊಠಡಿಗಳ ಅಗಲವು ಹೆಚ್ಚುತ್ತಾ ಬಂದಿತು. ಅವು ದೇವಸ್ಥಾನವನ್ನು ಸುತ್ತಿಕೊಂಡು ಮೇಲೆ ಹೋದ ಹಾಗೆಲ್ಲಾ ಅದನ್ನು ಬಿಗಿಯಾಗಿ ತಬ್ಬಿಕೊಂಡಂತೆ ಕಟ್ಟಲ್ಪಟ್ಟಿತ್ತು. ಹೀಗೆ ಮೇಲಿನ ಅಂತಸ್ತುಗಳು ದೇವಸ್ಥಾನದ ಕಡೆಗೆ ಅಗಲವಾಗುತ್ತಾ ಬಂದವು. ಕೆಳಗಿನ ಅಂತಸ್ತಿನಿಂದ ಮಧ್ಯದ ಅಂತಸ್ತಿನ ಮಾರ್ಗವಾಗಿ ಮೇಲಿನ ಅಂತಸ್ತಿಗೆ ಹತ್ತುತ್ತಿದ್ದರು.
Kannada BSI Bible 2016
ಸುತ್ತಣ ಅಂತಸ್ತುಗಳು ಮೇಲೆ ಮೇಲೆ ಹೋದ ಹಾಗೆ ಆಯಾ ಕೊಠಡಿಗಳ ಅಗಲವು ಹೆಚ್ಚುತ್ತಾ ಬಂದಿತು; ಅವು ಮನೆಯನ್ನು ಸುತ್ತಿಕೊಂಡು ಮೇಲೆ ಮೇಲೆ ಹೋದಹಾಗೆಲ್ಲಾ ಅದನ್ನು ಬಿಗಿಯಾಗಿ ಹಿಡಿದು ಕೊಂಡಂತೆ ಇದ್ದವು; ಹೀಗೆ ಮೇಲಿನ ಅಂತಸ್ತುಗಳು ಮನೆಯ ಕಡೆಗೆ ಅಗಲವಾಗುತ್ತಾ ಬಂದವು; ಕೆಳ ಗಿನ ಅಂತಸ್ತಿನಿಂದ ಮಧ್ಯದ ಅಂತಸ್ತಿನ ಮಾರ್ಗವಾಗಿ ಮೇಲಿನ ಅಂತಸ್ತಿಗೆ ಹತ್ತುತ್ತಿದ್ದವು.
Kannada BSI JV (ಕನ್ನಡ ಸತ್ಯವೇದವು J.V. (BSI))
ಸುತ್ತಣ ಅಂತಸ್ತುಗಳು ಮೇಲೆ ಮೇಲೆ ಹೋದ ಹಾಗೆಲ್ಲಾ ಆಯಾ ಕೊಠಡಿಗಳ ಅಗಲವು ಹೆಚ್ಚುತ್ತಾ ಬಂತು; ಅವು ದೇವಸ್ಥಾನವನ್ನು ಸುತ್ತಿಕೊಂಡು ಮೇಲೆ ಮೇಲೆ ಹೋದ ಹಾಗೆಲ್ಲಾ ಅದನ್ನು ಬಿಗಿಬಿಗಿಯಾಗಿ ತಬ್ಬಿಕೊಂಡಂತೆ ಇದ್ದವು. ಹೀಗೆ ಮೇಲುಮೇಲಿನ ಅಂತಸ್ತುಗಳು ದೇವಸ್ಥಾನದ ಕಡೆಗೆ ಅಗಲವಾಗುತ್ತಾ ಬಂದವು; ಕೆಳಗಣ ಅಂತಸ್ತಿನಿಂದ ನಡುವಣ ಅಂತಸ್ತಿನ ಮಾರ್ಗವಾಗಿ ಮೇಲಣ ಅಂತಸ್ತಿಗೆ ಹತ್ತುತ್ತಿದ್ದರು.
Kannada Bible (KNCL) BSI 2016
ಸುತ್ತಣ ಅಂತಸ್ತುಗಳು ಮೇಲೆ ಮೇಲೆ ಹೋದಹಾಗೆಲ್ಲಾ ಆಯಾ ಕೊಠಡಿಗಳ ಅಗಲವು ಹೆಚ್ಚುತ್ತಾ ಬಂದಿತು; ಅವು ದೇವಸ್ಥಾನವನ್ನು ಸುತ್ತಿಕೊಂಡು ಮೇಲೆ ಮೇಲೆ ಹೋದಹಾಗೆಲ್ಲಾ ಅದನ್ನು ಬಿಗಿಬಿಗಿಯಾಗಿ ತಬ್ಬಿಕೊಂಡಂತೆ ಇದ್ದವು. ಹೀಗೆ ಮೇಲು ಮೇಲಿನ ಅಂತಸ್ತುಗಳು ದೇವಸ್ಥಾನದ ಕಡೆಗೆ ಅಗಲವಾಗುತ್ತಾ ಬಂದವು; ಕೆಳಗಣ ಅಂತಸ್ತಿನಿಂದ ನಡುವಣ ಅಂತಸ್ತಿನ ಮಾರ್ಗವಾಗಿ ಮೇಲಣ ಅಂತಸ್ತಿಗೆ ಹತ್ತುತ್ತಿದ್ದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಸುತ್ತಣ ಅಂತಸ್ತುಗಳು ಮೇಲೆ ಮೇಲೆ ಹೋದ ಹಾಗೆ ಆಯಾ ಕೊಠಡಿಗಳ ಅಗಲವು ಹೆಚ್ಚುತ್ತಾ ಬಂದಿತು. ಅವು ಮನೆಯನ್ನು ಸುತ್ತಿಕೊಂಡು ಮೇಲೆ ಮೇಲೆ ಹೋದ ಹಾಗೆಲ್ಲಾ ಅದನ್ನು ಬಿಗಿಯಾಗಿ ಹಿಡಿದುಕೊಂಡಂತೆ ಇದ್ದವು; ಹೀಗೆ ಮೇಲಿನ ಅಂತಸ್ತುಗಳು ಮನೆಯ ಕಡೆಗೆ ಅಗಲವಾಗುತ್ತಾ ಬಂದವು; ಕೆಳಗಿನ ಅಂತಸ್ತಿನಿಂದ ಮಧ್ಯದ ಅಂತಸ್ತಿನ ಮಾರ್ಗವಾಗಿ ಮೇಲಿನ ಅಂತಸ್ತಿಗೆ ಹತ್ತುತ್ತಿದ್ದವು.