Ezekiel 42:19 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅನಂತರ ಪಶ್ಚಿಮದ ಭಾಗಕ್ಕೆ ಹೋಗಿ ಅಲ್ಲಿ ಅಳೆದನು. ಅದು ಐನೂರು ಮೊಳ ಉದ್ದವಿತ್ತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಪಶ್ಚಿಮಕ್ಕೆ, ಗೋಡೆಯ ಕಡೆಗೆ ತಿರುಗಿಕೊಂಡು ಅಳತೆ ಕೋಲಿನಿಂದ ಐನೂರು ಕೋಲು ಅಳೆದನು.
Kannada BSI Bible 2016
ಅವನು ಪಶ್ಚಿಮದ ಕಡೆಗೆ ತಿರುಗಿ ಅಳತೆಯ ಕೋಲಿನಿಂದ ಐನೂರು ಕೋಲೆಂದು ಅಳೆದನು.ಅವನು ನಾಲ್ಕೂ ಕಡೆಗಳಿಂದ ಅಳೆದನು; ಪರಿಶುದ್ಧ ಸ್ಥಳವನ್ನೂ ಅಪವಿತ್ರ ವಾದ ಸ್ಥಳವನ್ನೂ ಪ್ರತ್ಯೇಕ ಪಡಿಸುವ ಹಾಗೆ ಅದಕ್ಕೆ ಸುತ್ತಲಾಗಿ ಐನೂರು ಕೋಲು ಉದ್ದವಾದಂತ ಮತ್ತು ಐನೂರು ಕೋಲು ಅಗಲವಾದಂತ ಗೋಡೆ ಇತ್ತು.
Kannada BSI JV (ಕನ್ನಡ ಸತ್ಯವೇದವು J.V. (BSI))
ಪಡುವಣ ಗೋಡೆಯ ಕಡೆಗೆ ತಿರುಗಿಕೊಂಡು ಅಳತೇಕೋಲಿನಿಂದ ಐನೂರು ಕೋಲಳೆದನು.
Kannada Bible (KNCL) BSI 2016
ದಕ್ಷಿಣ ದಿಕ್ಕಿನಲ್ಲಿ ಉದ್ದಕ್ಕೂ ಅಳತೇಕೋಲಿನಿಂದ ಐನೂರು ಕೋಲಳೆದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವನು ಪಶ್ಚಿಮದ ಕಡೆಗೆ ತಿರುಗಿ ಅಳತೆಯ ಕೋಲಿನಿಂದ ಸುಮಾರು 265 ಮೀಟರ್ ಎಂದು ಅಳೆದನು.