Ezekiel 42:20 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆಲಯದ ಸುತ್ತಲೂ ಇದ್ದ ನಾಲ್ಕು ಗೋಡೆಗಳನ್ನು ಅಳೆದನು. ಆ ಗೋಡೆ ಐನೂರು ಮೊಳ ಉದ್ದವಿದ್ದು ಐನೂರು ಮೊಳ ಅಗಲವಿತ್ತು. ಅದು ಪವಿತ್ರಸ್ಥಳವನ್ನೂ ಬೇರೆ ಸ್ಥಳವನ್ನೂ ಙೇರ್ಪಡಿಸಿತ್ತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಲಯವನ್ನು ನಾಲ್ಕು ಕಡೆಗಳಲ್ಲಿಯೂ ಅಳೆದನು. ಪವಿತ್ರವಾದ ಮತ್ತು ಅಪವಿತ್ರವಾದ ಪ್ರದೇಶಗಳನ್ನು ವಿಂಗಡಿಸುವುದಕ್ಕೆ ಐನೂರು ಕೋಲು ಉದ್ದವಾದ ಮತ್ತು ಐನೂರು ಕೋಲು ಅಗಲವಾದ ಗೋಡೆ ಇತ್ತು.
Kannada BSI Bible 2016
ಅವನು ನಾಲ್ಕೂ ಕಡೆಗಳಿಂದ ಅಳೆದನು; ಪರಿಶುದ್ಧ ಸ್ಥಳವನ್ನೂ ಅಪವಿತ್ರ ವಾದ ಸ್ಥಳವನ್ನೂ ಪ್ರತ್ಯೇಕ ಪಡಿಸುವ ಹಾಗೆ ಅದಕ್ಕೆ ಸುತ್ತಲಾಗಿ ಐನೂರು ಕೋಲು ಉದ್ದವಾದಂತ ಮತ್ತು ಐನೂರು ಕೋಲು ಅಗಲವಾದಂತ ಗೋಡೆ ಇತ್ತು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಲಯವನ್ನು ನಾಲ್ಕು ಪಾರ್ಶ್ವಗಳಲ್ಲಿಯೂ ಅಳೆದನು; ಪರಿಶುದ್ಧವಾದ ಮತ್ತು ಅಪರಿಶುದ್ಧವಾದ ಪ್ರದೇಶಗಳನ್ನು ವಿಂಗಡಿಸುವದಕ್ಕೆ ಐನೂರಳತೇ ಕೋಲುದ್ದದ ಐನೂರಳತೇ ಕೋಲಗಲದ ಗೋಡೆಯು ಸುತ್ತುಮುತ್ತಲಿತ್ತು.
Kannada Bible (KNCL) BSI 2016
ಆಲಯವನ್ನು ನಾಲ್ಕು ಪಾರ್ಶ್ವಗಳಲ್ಲಿಯೂ ಅಳೆದನು; ಪರಿಶುದ್ಧವಾದ ಮತ್ತು ಅಪರಿಶುದ್ಧವಾದ ಪ್ರದೇಶಗಳನ್ನು ವಿಂಗಡಿಸುವುದಕ್ಕೆ ಐನೂರಳತೇ ಕೋಲುದ್ದದ, ಐನೂರಳತೇ ಕೋಲಗಲದ ಗೋಡೆ ಸುತ್ತಮುತ್ತಲಿತ್ತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವನು ನಾಲ್ಕು ಕಡೆಗಳಿಂದ ಅಳೆದನು. ಪರಿಶುದ್ಧವಾದ ಮತ್ತು ಅಪರಿಶುದ್ಧವಾದ ಸ್ಥಳವನ್ನೂ ಪ್ರತ್ಯೇಕಪಡಿಸುವ ಹಾಗೆ ಅದಕ್ಕೆ ಸುತ್ತಲು ಸುಮಾರು 265 ಮೀಟರ್ ಉದ್ದ ಮತ್ತು ಸುಮಾರು 265 ಮೀಟರ್ ಗೋಡೆ ಇತ್ತು.