Ezekiel 42:6 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
See verse 5
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಕೋಣೆಗಳು ಮೂರು ಅಂತಸ್ತಾಗಿದ್ದವು. ಹೊರಗಿನ ಅಂಗಳದ ಕೋಣೆಗಳಿಗೆ ಇದ್ದಂತೆ ಈ ಕೋಣೆಗಳಿಗೆ ಪಡಸಾಲೆಗಳಿರಲಿಲ್ಲ. ಆದುದರಿಂದ ನೆಲದಿಂದ ಎತ್ತರದಲ್ಲಿದ್ದ ಮೇಲಿನ ಕೋಣೆಗಳು ಕೆಳಗಿನ ಮತ್ತು ಮಧ್ಯದ ಕೋಣೆಗಳಿಗಿಂತ ಚಿಕ್ಕದಾಗಿದ್ದವು.
Kannada BSI Bible 2016
ಇವು ಮೂರು ಅಂತಸ್ತು ಗಳಾಗಿದ್ದವು; ಆದರೆ ಅಂಗಳದ ಕಂಬಗಳ ಹಾಗೆ ಇವುಗಳಿಗೆ ಕಂಬಗಳಿರಲಿಲ್ಲ; ಆದದರಿಂದ ನೆಲಕ್ಕೆ ಎತ್ತರದಲ್ಲಿನ ಮೇಲಣ ಕೋಣೆಗಳು ಕೆಳಗಿನ ಮತ್ತು ಮಧ್ಯದ ಕೋಣೆಗಳಿಗೆ ಚಾಚಿಕೊಂಡಿದ್ದವು.
Kannada BSI JV (ಕನ್ನಡ ಸತ್ಯವೇದವು J.V. (BSI))
ಕೋಣೆಗಳು ಮೂರಂತಸ್ತಾಗಿದ್ದವು; [ಹೊರಗಣ] ಪ್ರಾಕಾರದ ಕೋಣೆಗಳಿಗೆ ಇದ್ದಂತೆ ಈ ಕೋಣೆಗಳಿಗೆ ಕೈಸಾಲೆಗಳಿರಲಿಲ್ಲ; ಆದದರಿಂದ ನೆಲಕ್ಕೆತ್ತರದಲ್ಲಿನ ಮೇಲಣ ಕೋಣೆಗಳು ಕೆಳಗಣ ಮತ್ತು ನಡುವಣ ಕೋಣೆಗಳಿಗಿಂತ ಇಕ್ಕಟ್ಟಾಗಿದ್ದವು.
Kannada Bible (KNCL) BSI 2016
ಕೋಣೆಗಳು ಮೂರಂತಸ್ತಾಗಿದ್ದವು; ಹೊರಗಿನ ಪ್ರಾಕಾರದ ಕೋಣೆಗಳಿಗೆ ಇದ್ದಂತೆ ಈ ಕೋಣೆಗಳಿಗೆ ಕೈಸಾಲೆಗಳಿರಲಿಲ್ಲ; ಆದುದರಿಂದ ನೆಲಕ್ಕೆತ್ತರದಲ್ಲಿನ ಮೇಲಿನ ಕೋಣೆಗಳು ಕೆಳಗಿನ ಮತ್ತು ನಡುವಣ ಕೋಣೆಗಳಿಗಿಂತ ಇಕ್ಕಟ್ಟಾಗಿದ್ದವು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇವು ಮೂರು ಅಂತಸ್ತುಗಳಾಗಿದ್ದವು. ಆದರೆ ಅಂಗಳದ ಕಂಬಗಳ ಹಾಗೆ ಇವುಗಳಿಗೆ ಕಂಬಗಳಿರಲಿಲ್ಲ. ಆದ್ದರಿಂದ ನೆಲಕ್ಕೆ ಎತ್ತರದಲ್ಲಿನ ಮೇಲಣ ಕೋಣೆಗಳು ಕೆಳಗಿನ ಮತ್ತು ನಡುವಣ ಕೋಣೆಗಳಿಗಿಂತ ಚಿಕ್ಕದಾಗಿದ್ದವು.