Ezekiel 43:14 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನೆಲದಿಂದ ಅಡಿಪಾಯದ ತಳದವರೆಗೆ ಅಡಿಪಾಯದ ಎತ್ತರ ಎರಡು ಮೊಳ, ಅದರ ಅಗಲ ಒಂದು ಮೊಳ, ಚಿಕ್ಕ ಸಜ್ಜದಿಂದ ದೊಡ್ಡ ಸಜ್ಜದವರೆಗೆ ನಾಲ್ಕು ಮೊಳ ಎತ್ತರ, ಎರಡು ಮೊಳ ಅಗಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನೆಲದ ಮೇಲೆ ಅಂದರೆ ಕೆಳಭಾಗದ ಮೇಲೆ ಕೆಳಗಿನ ಅಂತಸ್ತಿನ ಎತ್ತರ ಎರಡು ಮೊಳ, ಅದರ ಮೇಲಣ ಅಂಚಿನ ಅಗಲ ಒಂದು ಮೊಳ; ಆ ಚಿಕ್ಕ ಅಂತಸ್ತಿನ ಮೇಲೆ ದೊಡ್ಡ ಅಂತಸ್ತಿನ ಎತ್ತರ ನಾಲ್ಕು ಮೊಳ, ಮೇಲಣ ಅಂಚಿನ ಅಗಲವು ಒಂದು ಮೊಳ.
Kannada BSI Bible 2016
ನೆಲದ ತಳದಿಂದ ಕೆಳಗಿನ ಅಡಿಯ ವರೆಗೂ ಎರಡು ಮೊಳವಿತ್ತು, ಅಗಲ ಒಂದು ಮೊಳ; ಸಣ್ಣಅಂಚು ಮೊದಲುಗೊಂಡು ದೊಡ್ಡ ಅಂಚಿನವರೆಗೂ ನಾಲ್ಕು ಮೊಳ ಮತ್ತು ಅಗಲವು ಒಂದು ಮೊಳ.
Kannada BSI JV (ಕನ್ನಡ ಸತ್ಯವೇದವು J.V. (BSI))
ನೆಲದ ಮೇಲೆ ಅಂದರೆ ಕೆಳಭಾಗದ ಮೇಲೆ ಕೆಳಗಣ ಅಂತಸ್ತಿನ ಎತ್ತರವು ಎರಡು ಮೊಳ, ಅದರ ಮೇಲಣ ಬಿಡುವಿನ ಅಗಲವು ಒಂದು ಮೊಳ; ಆ ಚಿಕ್ಕ ಅಂತಸ್ತಿನ ಮೇಲೆ ದೊಡ್ಡ ಅಂತಸ್ತಿನ ಎತ್ತರವು ನಾಲ್ಕು ಮೊಳ, ಮೇಲಣ ಬಿಡುವಿನ ಅಗಲವು ಒಂದು ಮೊಳ.
Kannada Bible (KNCL) BSI 2016
ನೆಲದ ಮೇಲೆ ಅಂದರೆ, ಕೆಳಭಾಗದ ಮೇಲೆ ಕೆಳಗಣ ಅಂತಸ್ತಿನ ಎತ್ತರವು ಒಂದು ಮೀಟರ್, ಅದರ ಮೇಲಣ ಬಿಡುವಿನ ಅಗಲವು ಐವತ್ತು ಸೆಂಟಿಮೀಟರ್, ಆ ಚಿಕ್ಕ ಅಂತಸ್ತಿನ ಮೇಲೆ ದೊಡ್ಡ ಅಂತಸ್ತಿನ ಎತ್ತರವು ಎರಡು ಮೀಟರ್; ಮೇಲಿನ ಬಿಡುವಿನ ಅಗಲವು ಐವತ್ತು ಸೆಂಟಿಮೀಟರ್.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಕೆಳಭಾಗದ ಎತ್ತರವು ಒಂದು ಮೊಳ ಮೇಲಿನ ಕೈ ಅಗಲದಷ್ಟು ಅಂಚಿನ ಉದ್ದವು ಸುತ್ತಲೂ ಒಂದು ಮೊಳ, ಅಂಚಿನ ತುದಿಯಲ್ಲಿ ಸುತ್ತಲೂ ದಿಂಡಿನ ಅಗಲವು ಒಂದು ಮೊಳ. ಇದೇ ಬಲಿಪೀಠ. ನೆಲದ ಮೇಲೆ ಅಂದರೆ ಕೆಳಭಾಗದ ಮೇಲೆ ಕೆಳಗಿನ ಅಂತಸ್ತಿನ ಎತ್ತರವು ಎರಡು ಮೊಳ, ಅದರ ಮೇಲಣ ಬಿಡುವಿನ ಅಗಲ ಒಂದು ಮೊಳ. ಸಣ್ಣ ಅಂಚು ಮೊದಲುಗೊಂಡು ದೊಡ್ಡ ಅಂಚಿನವರೆಗೂ ನಾಲ್ಕು ಮೊಳ ಮತ್ತು ಅಗಲವು ಒಂದು ಮೊಳ.