Ezekiel 43:17 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅದರ ಮೆಟ್ಟಲು ಹದಿನಾಲ್ಕು ಮೊಳ ಅಗಲ, ಹದಿನಾಲ್ಕು ಮೊಳ ಉದ್ದವಾಗಿದ್ದು ಚೌಕವಾಗಿತ್ತು. ಅದರ ಸುತ್ತಲೂ ಇದ್ದ ಅಂಚು ಅರ್ಧ ಮೊಳ ಅಗಲವಾಗಿತ್ತು. (ಅಡಿಪಾಯದ ಸುತ್ತಲೂ ಇದ್ದ ಕಾಲುವೆಯ ಅಗಲ ಎರಡು ಮೊಳ.) ಯಜ್ಞವೇದಿಯ ಮೇಲೆ ಹತ್ತುವ ಮೆಟ್ಟಲುಗಳು ಪೂರ್ವಭಾಗದಲ್ಲಿದ್ದವು.”
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ದೊಡ್ಡ ಅಂತಸ್ತು ಹದಿನಾಲ್ಕು ಮೊಳ ಉದ್ದವಾಗಿಯೂ, ಹದಿನಾಲ್ಕು ಮೊಳ ಅಗಲವಾಗಿಯೂ, ನಾಲ್ಕು ಕಡೆಗಳಲ್ಲಿ ಸಮವಾಗಿರಬೇಕು. ಸುತ್ತಣ ದಿಂಡಿನ ಅಗಲವು ಅರ್ಧ ಮೊಳ, ಕೆಳಭಾಗದ ಸುತ್ತಣ ಅಂಚಿನ ಅಗಲವು ಒಂದು ಮೊಳವಾಗಿಯೂ ಇರಬೇಕು. ಅದರ ಮೆಟ್ಟಲುಗಳು ಪೂರ್ವದಿಕ್ಕಿಗೆ ಅಭಿಮುಖವಾಗಿರಬೇಕು.”
Kannada BSI Bible 2016
ಅದರ ಅಂಚು ನಾಲ್ಕೂ ಕಡೆಗೆ ಹದಿನಾಲ್ಕು ಮೊಳ ಉದ್ದವಾಗಿಯೂ; ಹದಿ ನಾಲ್ಕು ಮೊಳ ಅಗಲವಾಗಿಯೂ ಅದರ ಸುತ್ತಲಿರುವ ಮೇರೆಯು ಅರ್ಧ ಮೊಳವಾಗಿಯೂ ತಳವು ಒಂದು ಮೊಳವಾಗಿಯೂ ಇರಬೇಕು; ಮೆಟ್ಟಲುಗಳು ಪೂರ್ವ ದಿಕ್ಕಿಗೆ ಎದುರಾಗಿರಬೇಕು.
Kannada BSI JV (ಕನ್ನಡ ಸತ್ಯವೇದವು J.V. (BSI))
ದೊಡ್ಡ ಅಂತಸ್ತು ಹದಿನಾಲ್ಕು ಮೊಳ ಉದ್ದವಾಗಿಯೂ ಹದಿನಾಲ್ಕು ಮೊಳ ಅಗಲವಾಗಿಯೂ ನಾಲ್ಕು ಪಾರ್ಶ್ವಗಳಲ್ಲಿ ಸಮವಾಗಿರಬೇಕು. ಸುತ್ತಣ ದಿಂಡಿನ ಅಗಲವು ಅರ್ಧ ಮೊಳ; ಕೆಳಭಾಗದ ಸುತ್ತಣ ಅಂಚಿನ ಅಗಲವು ಒಂದು ಮೊಳ; ಸೋಪಾನವು ಮೂಡಲಿಗೆ ಅಭಿಮುಖವಾಗಿರಬೇಕು.
Kannada Bible (KNCL) BSI 2016
ದೊಡ್ಡ ಅಂತಸ್ತು ಏಳು ಮೀಟರ್ ಉದ್ದವಾಗಿಯೂ ಏಳು ಮೀಟರ್ ಅಗಲವಾಗಿಯೂ ನಾಲ್ಕು ಪಾರ್ಶ್ವಗಳಲ್ಲಿ ಸಮವಾಗಿರಬೇಕು. ಸುತ್ತಣ ದಿಂಡಿನ ಅಗಲವು ಇಪ್ಪತ್ತೈದು ಸೆಂಟಿಮೀಟರ್; ಕೆಳಭಾಗದ ಸುತ್ತಣ ಅಂಚಿನ ಅಗಲವು ಐವತ್ತು ಸೆಂಟಿಮೀಟರ್; ಸೋಪಾನವು ಮೂಡಲಿಗೆ ಅಭಿಮುಖವಾಗಿರಬೇಕು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅದರ ಅಂಚು ನಾಲ್ಕು ಕಡೆಗೆ ಹದಿನಾಲ್ಕು ಮೊಳ ಉದ್ದವಾಗಿಯೂ, ಹದಿನಾಲ್ಕು ಮೊಳ ಅಗಲವಾಗಿಯೂ ಅದರ ಸುತ್ತಲಿರುವ ಮೇರೆಯು ಅರ್ಧ ಮೊಳವಾಗಿಯೂ ಅದರ ತಳವು ಒಂದು ಮೊಳವಾಗಿಯೂ ಇರಬೇಕು. ಅದರ ಮೆಟ್ಟಲುಗಳು ಪೂರ್ವದಿಕ್ಕಿಗೆ ಎದುರಾಗಿರಬೇಕು.”