Ezekiel 43:18 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆಗ ಅವನು ನನಗೆ, “ನರಪುತ್ರನೇ, ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ: ‘ಯಜ್ಞವೇದಿಯ ಕ್ರಮಗಳು ಯಾವುದೆಂದರೆ, ಯಜ್ಞವೇದಿಯನ್ನು ಕಟ್ಟುವಾಗ ಸರ್ವಾಂಗಹೋಮ ಮತ್ತು ಅದರ ಮೇಲೆ ರಕ್ತ ಚಿಮುಕಿಸುವದಕ್ಕೆ ಈ ಕ್ರಮಗಳನ್ನು ಅನುಸರಿಸು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಆ ಪುರುಷನು ನನಗೆ ಹೀಗೆ ಹೇಳಿದನು, “ನರಪುತ್ರನೇ, ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ಸರ್ವಾಂಗಹೋಮಕ್ಕೂ, ರಕ್ತವೆರಚುವ ಸಂಸ್ಕಾರಕ್ಕೂ ಯಜ್ಞವೇದಿಯನ್ನು ನಿರ್ಮಿಸುವಾಗ ಈ ವಿಧಿಗಳನ್ನು ಕೈಗೊಳ್ಳಬೇಕು.
Kannada BSI Bible 2016
ಅವನು ನನಗೆ ಹೇಳಿದ್ದೇನಂದರೆ--ಮನುಷ್ಯ ಪುತ್ರನೇ, ದೇವರಾದ ಕರ್ತನು ಹೀಗೆ ಹೇಳುತ್ತಾನೆ; ಯಜ್ಞವೇದಿಯನ್ನು ಮಾಡುವ ದಿನದಲ್ಲಿ ಅದರ ಮೇಲೆ ದಹನಬಲಿಗಳನ್ನು ಅರ್ಪಿಸಿ ರಕ್ತವನ್ನು ಚಿಮುಕಿಸಬೇಕು; ಇವು ಅಲ್ಲಿನ ನಿಯಮಗಳಾಗಿವೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ಆ ಪುರುಷನು ನನಗೆ ಹೀಗೆ ಹೇಳಿದನು - ನರಪುತ್ರನೇ, ಕರ್ತನಾದ ಯೇಹೋವನು ಇಂತೆನ್ನುತ್ತಾನೆ - ಸರ್ವಾಂಗಹೋಮಕ್ಕೂ ರಕ್ತವೆರಚುವ ಸಂಸ್ಕಾರಕ್ಕೂ ಯಜ್ಞವೇದಿಯನ್ನು ನಿರ್ಮಿಸುವಾಗ ಈ ವಿಧಿಗಳನ್ನು ಕೈಕೊಳ್ಳಬೇಕು -
Kannada Bible (KNCL) BSI 2016
ಆಗ ಆ ಪುರುಷ ನನಗೆ ಹೀಗೆ ಹೇಳಿದನು: “ನರಪುತ್ರನೇ, ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ: ದಹನಬಲಿಗೂ, ರಕ್ತವೆರಚುವ ಸಂಸ್ಕಾರಕ್ಕೂ ಬಲಿಪೀಠವನ್ನು ನಿರ್ಮಿಸುವಾಗ ಈ ವಿಧಿಗಳನ್ನು ಕೈಗೊಳ್ಳಬೇಕು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವರು ನನಗೆ ಹೇಳಿದ್ದೇನೆಂದರೆ: “ಮನುಷ್ಯಪುತ್ರನೇ, ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ. ಬಲಿಪೀಠವನ್ನು ಮಾಡುವ ದಿನದಲ್ಲಿ ಅದರ ಮೇಲೆ ದಹನಬಲಿಗಳನ್ನು ಅರ್ಪಿಸಿ ರಕ್ತವನ್ನು ಚಿಮುಕಿಸಬೇಕು; ಇವು ಅಲ್ಲಿನ ನಿಯಮಗಳಾಗಿವೆ.