Ezekiel 43:2 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅಲ್ಲಿ ಇಸ್ರೇಲ್ ದೇವರ ಮಹಿಮೆಯು ಪೂರ್ವದಿಂದ ಘಂದಿತು. ದೇವರ ಸಬರವು ಸಮುದ್ರದ ಶಘ್ದದಂತೆ ಗಟ್ಟಿಯಾಗಿತ್ತು. ದೇವರ ಮಹಿಮಾ ಪ್ರಕಾಶದಿಂದ ನೆಲವು ಬೆಳಕಿನಿಂದ ತುಂಬಿತ್ತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇಗೋ! ಇಸ್ರಾಯೇಲಿನ ದೇವರ ಮಹಿಮೆಯು ಪೂರ್ವದಿಕ್ಕಿನ ಮಾರ್ಗವಾಗಿ ಬಂದಿತ್ತು ಮತ್ತು ಆತನ ಧ್ವನಿಯು ಜಲಪ್ರವಾಹದ ಘೋಷದಂತಿತ್ತು; ಆತನ ಮಹಿಮೆಯಿಂದ ಭೂಮಿಯು ಪ್ರಕಾಶಿಸುತ್ತಿತ್ತು.
Kannada BSI Bible 2016
ಇಗೋ, ಇಸ್ರಾಯೇಲಿನ ದೇವರ ಮಹಿಮೆಯು ಪೂರ್ವ ಮಾರ್ಗವಾಗಿ ಬಂದಿತು, ಆತನ ಧ್ವನಿಯು ಬಹು ನೀರುಗಳ ಶಬ್ಧದಂತೆ ಇತ್ತು; ಭೂಮಿಯು ಆತನ ಮಹಿಮೆಯಿಂದ ಪ್ರಕಾ ಶಿಸುತ್ತಿತ್ತು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇಗೋ, ಇಸ್ರಾಯೇಲಿನ ದೇವರ ತೇಜಸ್ಸು ಮೂಡಣ ಮಾರ್ಗವಾಗಿ ಬಂತು; ಆತನ ಧ್ವನಿಯು ಜಲಪ್ರವಾಹದ ಘೋಷದಂತಿತ್ತು; ಆತನ ತೇಜಸ್ಸಿನಿಂದ ಭೂವಿುಯು ಬೆಳಗಿತು.
Kannada Bible (KNCL) BSI 2016
ಆಗ ಇಗೋ, ಇಸ್ರಯೇಲಿನ ದೇವರ ತೇಜಸ್ಸು ಪೂರ್ವಮಾರ್ಗವಾಗಿ ಬಂದಿತು. ಅವರ ಧ್ವನಿ ಜಲಪ್ರವಾಹದ ಘೋಷದಂತಿತ್ತು. ಅವರ ತೇಜಸ್ಸಿನಿಂದ ಭೂಮಿ ಬೆಳಗಿತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇಸ್ರಾಯೇಲಿನ ದೇವರ ಮಹಿಮೆಯು ಪೂರ್ವಮಾರ್ಗವಾಗಿ ಬಂದಿತು ಮತ್ತು ಅವರ ಧ್ವನಿಯು ಹರಿಯುವ ನೀರಿನ ಘರ್ಜನೆಯಂತಿತ್ತು; ಭೂಮಿಯು ಅವರ ಮಹಿಮೆಯಿಂದ ಪ್ರಕಾಶಿಸುತ್ತಿತ್ತು.