Ezekiel 43:22 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ಎರಡನೇ ದಿವಸದಲ್ಲಿ ಪೂರ್ಣಾಂಗವಾದ ಹೋತವನ್ನು ನೀನು ಅರ್ಪಿಸಙೇಕು. ಪಾಪಪರಿಹಾರಕಯಜ್ಞಕ್ಕಾಗಿ ಯಾಜಕರು ಹೇಗೆ ಯಜ್ಞವೇದಿಯನ್ನು ಪವಿತ್ರ ಮಾಡಿದರೋ ಅದೇ ರೀತಿಯಲ್ಲಿ ತಿರುಗಿ ಮಾಡಬೇಕು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ಎರಡನೆಯ ದಿನದಲ್ಲಿ ನೀನು ಪೂರ್ಣಾಂಗವಾದ ಹೋತವನ್ನು ದೋಷ ಪರಿಹಾರಕಯಜ್ಞಕ್ಕಾಗಿ ಅರ್ಪಿಸು. ಹೋರಿಯಿಂದ ಯಜ್ಞವೇದಿಯನ್ನು ಶುದ್ಧಿಮಾಡಿದಂತೆ ಹೋತದಿಂದಲೂ ಶುದ್ಧಿಮಾಡಬೇಕು
Kannada BSI Bible 2016
ಎರಡನೇ ದಿನದಲ್ಲಿ ದೋಷವಿಲ್ಲದ ಮೇಕೆಯ ಮರಿಯನ್ನೂ ಪಾಪ ಬಲಿಯಾಗಿ ಅರ್ಪಿಸ ಬೇಕು; ಅವರು ಯಜ್ಞವೇದಿಯನ್ನು ಹೋರಿಯಿಂದ ಶುದ್ಧಮಾಡಿದ ಹಾಗೆ ಶುದ್ಧಮಾಡಬೇಕು.
Kannada BSI JV (ಕನ್ನಡ ಸತ್ಯವೇದವು J.V. (BSI))
ಎರಡನೆಯ ದಿನದಲ್ಲಿ ನೀನು ಪೂರ್ಣಾಂಗವಾದ ಹೋತವನ್ನು ದೋಷಪರಿಹಾರಕಯಜ್ಞಕ್ಕಾಗಿ ಅರ್ಪಿಸು; ಹೋರಿಯಿಂದ ಯಜ್ಞವೇದಿಯನ್ನು ಶುದ್ಧಿಮಾಡಿದಂತೆ ಹೋತದಿಂದಲೂ ಶುದ್ಧಿಮಾಡತಕ್ಕದ್ದು.
Kannada Bible (KNCL) BSI 2016
ಎರಡನೆಯ ದಿನದಲ್ಲಿ, ಕಳಂಕರಹಿತವಾದ ಹೋತವನ್ನು ದೋಷಪರಿಹಾರಕ ಬಲಿಗಾಗಿ ಅರ್ಪಿಸು; ಹೋರಿಯಿಂದ ಬಲಿಪೀಠವನ್ನು ಶುದ್ಧಿಮಾಡಿದಂತೆ ಹೋತದಿಂದಲೂ ಶುದ್ಧಿಮಾಡತಕ್ಕದ್ದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಎರಡನೆಯ ದಿನದಲ್ಲಿ ದೋಷವಿಲ್ಲದ ಮೇಕೆಯ ಮರಿಯನ್ನೂ ದೋಷಪರಿಹಾರ ಬಲಿಯಾಗಿ ಅರ್ಪಿಸಬೇಕು. ಅವರು ಬಲಿಪೀಠವನ್ನು ಹೋರಿಯಿಂದ ಶುದ್ಧಮಾಡಿದ ಹಾಗೆ ಶುದ್ಧಮಾಡಬೇಕು.