Ezekiel 43:25 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ದೋಷಪರಿಹಾರಕಯಜ್ಞಕ್ಕಾಗಿ ಪ್ರತಿದಿವಸ ಏಳು ದಿವಸಗಳ ತನಕ ಒಂದೊಂದು ಆಡನ್ನು ಸಮರ್ಪಿಸಙೇಕು. ಅದೇ ಸಮಯದಲ್ಲಿ ನಿಷ್ಕಳಂಕವಾದ ಒಂದು ಎಳೇ ಹೋರಿ ಮತ್ತು ಟಗರುಗಳನ್ನು ದೋಷಪರಿಹಾರಕಯಜ್ಞಕ್ಕಾಗಿ ಸಮರ್ಪಿಸಬೇಕು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ಏಳು ದಿನಗಳ ತನಕ ನೀನು ಪ್ರತಿ ದಿನವೂ ದೋಷಪರಿಹಾರ ಬಲಿಗಾಗಿ ಒಂದೊಂದು ಹೋತವನ್ನು ಸಿದ್ಧಮಾಡಬೇಕು. ಯಾಜಕರು ಸಹ ದೋಷವಿಲ್ಲದ ಪೂರ್ಣಾಂಗವಾದ ಹೋರಿಯನ್ನೂ ಹಿಂಡಿನಿಂದಲೂ ಮತ್ತು ಪೂರ್ಣಾಂಗವಾದ ಟಗರನ್ನೂ ಮಂದೆಯೊಳಗಿಂದಲೂ ಸಿದ್ಧಮಾಡಬೇಕು.
Kannada BSI Bible 2016
ಏಳು ದಿನಗಳ ತನಕ ಪ್ರತಿ ದಿನವೂ ನೀನು ಪಾಪ ಬಲಿಗಾಗಿ ಮೇಕೆಯನ್ನು ಸಿದ್ಧಮಾಡಬೇಕು ಮತ್ತು ಪೂರ್ಣಾಂಗ ವಾದ ಪ್ರಾಯದ ಹೋರಿಯನ್ನೂ ಮಂದೆಯೊಳಗಿನ ಟಗರನ್ನೂ ಸಿದ್ದಮಾಡಬೇಕು.
Kannada BSI JV (ಕನ್ನಡ ಸತ್ಯವೇದವು J.V. (BSI))
ಏಳು ದಿವಸ ನೀನು ದಿನದಿನವೂ ದೋಷಪರಿಹಾರಕ್ಕಾಗಿ ಒಂದೊಂದು ಹೋತವನ್ನು ಅರ್ಪಿಸು; ಯಾಜಕರು ಸಹ ಪೂರ್ಣಾಂಗವಾದ ಹೋರಿಯನ್ನೂ ಹಿಂಡಿನಿಂದ ತಂದ ಪೂರ್ಣಾಂಗವಾದ ಟಗರನ್ನೂ ಅರ್ಪಿಸಲಿ.
Kannada Bible (KNCL) BSI 2016
ಏಳು ದಿವಸ ನೀನು ದಿನದಿನವೂ ದೋಷಪರಿಹಾರಕ್ಕಾಗಿ ಒಂದೊಂದು ಹೋತವನ್ನು ಅರ್ಪಿಸು; ಯಾಜಕರು ಸಹ ಕಳಂಕರಹಿತವಾದ ಹೋರಿಯನ್ನೂ ಹಿಂಡಿನಿಂದ ತಂದ ಕಳಂಕರಹಿತವಾದ ಟಗರನ್ನೂ ಅರ್ಪಿಸಲಿ;
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಏಳು ದಿನಗಳ ತನಕ ಪ್ರತಿದಿನವೂ ನೀನು ದೋಷಪರಿಹಾರ ಬಲಿಗಾಗಿ ಮೇಕೆಯನ್ನು ಸಿದ್ಧಮಾಡಬೇಕು ಮತ್ತು ಪೂರ್ಣಾಂಗವಾದ ಪ್ರಾಯದ ಹೋರಿಯನ್ನೂ ಮಂದೆಯೊಳಗಿನ ಟಗರನ್ನೂ ಸಿದ್ಧಮಾಡಬೇಕು.