Ezekiel 43:27 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಏಳು ದಿವಸಗಳ ತರುವಾಯ, ಎಂಟನೇ ದಿನದಲ್ಲಿ ಯಾಜಕರು ನಿಮ್ಮ ಪರವಾಗಿ ಸರ್ವಾಂಗಹೋಮವನ್ನೂ ಸಮಾಧಾನಯಜ್ಞವನ್ನೂ ಅರ್ಪಿಸಬೇಕು. ಆಗ ನಾನು ನಿಮಗೆ ಪ್ರಸನ್ನನಾಗುವೆನು.” ನನ್ನ ಒಡೆಯನಾದ ಯೆಹೋವನ ನುಡಿಗಳಿವು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಏಳು ದಿನಗಳ ಕಾರ್ಯವನ್ನು ಮುಗಿಸಿದ ಬಳಿಕ, ಎಂಟನೆಯ ದಿನದಿಂದ ಯಾಜಕರು ಯಜ್ಞವೇದಿಯ ಮೇಲೆ ನಿಮ್ಮ ಪಕ್ಷವಾಗಿ ಸರ್ವಾಂಗಹೋಮಗಳನ್ನೂ ಸಮಾಧಾನಯಜ್ಞಗಳನ್ನೂ ಮಾಡಬೇಕು. ಆಗ ನಾನು ನಿಮ್ಮನ್ನು ಅಂಗೀಕರಿಸುವೆನು” ಇದು ಕರ್ತನಾದ ಯೆಹೋವನ ನುಡಿ.
Kannada BSI Bible 2016
ಈ ದಿನಗಳು ತೀರಿದಾಗ ಎಂಟನೇ ದಿನದ ತರುವಾಯ ಯಾಜಕರು ಯಜ್ಞವೇದಿಯ ಮೇಲೆ ನಿಮ್ಮ ದಹನಬಲಿಗಳನ್ನೂ ನಿಮ್ಮ ಸಮಾಧಾನದ ಬಲಿಗಳನ್ನೂ ಕೊಡುವರು. ಆಗ ನಾನು ನಿಮ್ಮನ್ನು ಅಂಗೀಕರಿಸುವೆನೆಂದು ದೇವರಾದ ಕರ್ತನು ಹೇಳುತ್ತಾನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಏಳು ದಿನಗಳ ಕಾರ್ಯವನ್ನು ಮುಗಿಸಿದ ಬಳಿಕ ಎಂಟನೆಯ ದಿನದಲ್ಲಿಯೂ ಮುಂದೆಯೂ ಯಾಜಕರು ಯಜ್ಞವೇದಿಯ ಮೇಲೆ ನಿಮ್ಮ ಪಕ್ಷವಾಗಿ ಸರ್ವಾಂಗಹೋಮಗಳನ್ನೂ ಸಮಾಧಾನಯಜ್ಞಗಳನ್ನೂ ಮಾಡಬೇಕು; ಆಗ ನಾನು ನಿಮಗೆ ಪ್ರಸನ್ನನಾಗುವೆನು; ಇದು ಕರ್ತನಾದ ಯೆಹೋವನ ನುಡಿ.
Kannada Bible (KNCL) BSI 2016
ಏಳು ದಿನಗಳ ಕಾರ್ಯವನ್ನು ಮುಗಿಸಿದ ಬಳಿಕ, ಎಂಟನೆಯ ದಿನದಲ್ಲಿಯೂ ಮುಂದೆಯೂ ಯಾಜಕರು ಬಲಿಪೀಠದ ಮೇಲೆ ನಿಮ್ಮ ಪರವಾಗಿ ದಹನಬಲಿಗಳನ್ನೂ ಶಾಂತಿಸಮಾಧಾನ ಬಲಿಗಳನ್ನೂ ಅರ್ಪಿಸಬೇಕು; ಆಗ ನಾನು ನಿಮಗೆ ಪ್ರಸನ್ನನಾಗುವೆನು; ಇದು ಸರ್ವೇಶ್ವರನಾದ ದೇವರ ನುಡಿ.”
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಈ ದಿನಗಳು ತೀರಿದಾಗ ಎಂಟನೆಯ ದಿನದ ತರುವಾಯ ಯಾಜಕರು ಬಲಿಪೀಠದ ಮೇಲೆ ನಿಮ್ಮ ದಹನಬಲಿಗಳನ್ನೂ ನಿಮ್ಮ ಸಮಾಧಾನದ ಬಲಿಗಳನ್ನೂ ಕೊಡುವರು. ಆಗ ನಾನು ನಿಮ್ಮನ್ನು ಅಂಗೀಕರಿಸುವೆನೆಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.”