Ezekiel 44:1 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆ ಬಳಿಕ ನನ್ನನ್ನು ಆ ಮನುಷ್ಯನು ಆಲಯದ ಪೂರ್ವದ್ವಾರಕ್ಕೆ ತಂದನು. ನಾವು ದ್ವಾರದ ಹೊರಗಿದ್ದೆವು. ದ್ವಾರವು ಮುಚ್ಚಿತ್ತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ತರುವಾಯ ಆ ಪುರುಷನು ನನ್ನನ್ನು ಪವಿತ್ರಾಲಯದ ಪೂರ್ವದಿಕ್ಕಿನ ಹೊರಗಿನ ಹೆಬ್ಬಾಗಿಲಿಗೆ ತಿರುಗಿ ಕರೆದುಕೊಂಡು ಬಂದನು. ಅದು ಮುಚ್ಚಲ್ಪಟ್ಟಿತ್ತು.
Kannada BSI Bible 2016
ಆಮೇಲೆ ಅವನು ನನ್ನನ್ನು ಪೂರ್ವದಿಕ್ಕಿಗೆ ಅಭಿಮುಖವಾದ ಹೊರಗಿನ ಪರಿಶುದ್ದ ಸ್ಥಳದ ಬಾಗಿಲಿನ ಮಾರ್ಗವಾಗಿ ಮತ್ತೆ ಬರಮಾಡಿದನು; ಅದು ಮುಚ್ಚಲ್ಪಟ್ಟಿತ್ತು.
Kannada BSI JV (ಕನ್ನಡ ಸತ್ಯವೇದವು J.V. (BSI))
ತರುವಾಯ ಆ ಪುರುಷನು ನನ್ನನ್ನು ಪವಿತ್ರಾಲಯದ ಮೂಡಣ ಹೊರಗಣ ಹೆಬ್ಬಾಗಿಲಿಗೆ ಪುನಃ ಕರತಂದನು; ಅದು ಮುಚ್ಚಿತ್ತು.
Kannada Bible (KNCL) BSI 2016
ತರುವಾಯ ಈ ಪುರುಷನು ನನ್ನನ್ನು ಪವಿತ್ರಾಲಯದ ಪೂರ್ವದಿಕ್ಕಿನ ಹೊರಗಿನ ಹೆಬ್ಬಾಗಿಲಿಗೆ ಪುನಃ ಕರೆದುತಂದನು; ಅದು ಮುಚ್ಚಿತ್ತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಮೇಲೆ ಅವನು ನನ್ನನ್ನು ಪೂರ್ವದಿಕ್ಕಿಗೆ ಅಭಿಮುಖವಾದ ಹೊರಗಿನ ಪರಿಶುದ್ಧಸ್ಥಳದ ಬಾಗಿಲಿನ ಮಾರ್ಗವಾಗಿ ಮತ್ತೆ ಬರಮಾಡಿದನು. ಅದು ಮುಚ್ಚಿತ್ತು.