Ezekiel 44:10 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಗತಕಾಲದಲ್ಲಿ ಇಸ್ರೇಲರು ನನ್ನನ್ನು ತ್ಯಜಿಸಿದಾಗ ಲೇವಿಯರು ನನ್ನನ್ನು ಬಿಟ್ಟುಹೋದರು. ಇಸ್ರೇಲರು ನನ್ನನ್ನು ಬಿಟ್ಟು ವಿಗ್ರಹಗಳನ್ನು ಪೂಜಿಸಿದರು. ಲೇವಿಯರು ಮಾಡಿದ ಪಾಪಕ್ಕಾಗಿ ಶಿಕ್ಷಿಸಲ್ಪಡುವರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“‘ಇಸ್ರಾಯೇಲರು ನನ್ನನ್ನು ತೊರೆದು, ತಮ್ಮ ವಿಗ್ರಹಗಳ ಕಡೆಗೆ ತಿರುಗಿಕೊಂಡು ನನಗೆ ದೂರವಾಗಿ ಹೋದ ಲೇವಿಯರು ಸಹ ತಮ್ಮ ದೋಷಫಲವನ್ನು ಅನುಭವಿಸುವರು.
Kannada BSI Bible 2016
ಇಸ್ರಾಯೇಲ್ಯರು ತಪ್ಪಿಸಿಕೊಂಡು ನನ್ನಿಂದ ಅಗಲಿ, ತಮ್ಮ ವಿಗ್ರಹಗಳ ಕಡೆಗೆ ತಿರುಗಿ ಕೊಂಡ ವೇಳೆಯಲ್ಲಿ ನನಗೆ ದೂರವಾಗಿ ಹೋದ ಲೇವಿಯರು ಸಹ ತಮ್ಮ ಅಕ್ರಮಗಳನ್ನು ಹೊರುವರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇಸ್ರಾಯೇಲ್ಯರು ನನ್ನನ್ನು ತೊರೆದಾಗ ನನ್ನಿಂದಗಲಿ ತಮ್ಮ ಬೊಂಬೆಗಳ ಕಡೆಗೆ ತಿರುಗಿಕೊಂಡು ನನಗೆ ದೂರವಾಗಿ ಹೋದ ಲೇವಿಯರು ತಮ್ಮ ದೋಷಫಲವನ್ನು ಅನುಭವಿಸುವರು.
Kannada Bible (KNCL) BSI 2016
“ಇಸ್ರಯೇಲರು ನನ್ನನ್ನು ತೊರೆದಾಗ, ನನ್ನಿಂದಗಲಿ ತಮ್ಮ ವಿಗ್ರಹಗಳ ಕಡೆಗೆ ತಿರುಗಿಕೊಂಡು, ನನಗೆ ದೂರವಾಗಿಹೋದ ಲೇವಿಯರು ತಮ್ಮ ದೋಷಫಲವನ್ನು ಅನುಭವಿಸುವರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ ‘ಇಸ್ರಾಯೇಲರು ತಪ್ಪಿಸಿಕೊಂಡು ನನ್ನಿಂದ ಅಗಲಿ, ತಮ್ಮ ವಿಗ್ರಹಗಳ ಕಡೆಗೆ ತಿರುಗಿಕೊಂಡ ವೇಳೆಯಲ್ಲಿ ನನಗೆ ದೂರವಾಗಿ ಹೋದ ಲೇವಿಯರೂ ಸಹ ತಮ್ಮ ಪಾಪಗಳನ್ನು ಹೊರುವರು.