Ezekiel 44:11 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನನ್ನ ಪವಿತ್ರಸ್ಥಳದಲ್ಲಿ ಸೇವೆಮಾಡಲು ಲೇವಿಯರು ಆರಿಸಲ್ಪಟ್ಟಿರುತ್ತಾರೆ. ಅವರು ಆಲಯದ ಪ್ರವೇಶ ದ್ವಾರವನ್ನು ಕಾವಲು ಕಾಯ್ದರು. ಆಲಯದೊಳಗೆ ಸೇವೆಮಾಡಿದರು. ಜನರು ಅರ್ಪಿಸುವ ಪ್ರಾಣಿಗಳನ್ನು ವಧಿಸಿ ಯಜ್ಞಕ್ಕಾಗಿ ಅವುಗಳನ್ನು ತಯಾರುಮಾಡಿ ಸರ್ವಾಂಗಹೋಮ ಯಜ್ಞಗಳನ್ನು ಸಮರ್ಪಿಸಿದರು. ಜನರಿಗೆ ಸಹಾಯ ಮಾಡಿ, ಅವರ ಸೇವೆಮಾಡಲು ಅವರು ಆರಿಸಲ್ಪಟ್ಟಿದ್ದಾರೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವರು ನನ್ನ ಪವಿತ್ರಾಲಯದಲ್ಲಿ ಪರಿಚಾರಕರೂ, ಮಂದಿರ ದ್ವಾರಪಾಲಕರೂ ಆಗಿ ಮಂದಿರದಲ್ಲಿ ಸೇವೆಮಾಡಬೇಕು; ಜನರ ಪಕ್ಷವಾಗಿ ಸರ್ವಾಂಗಹೋಮ ಪಶುವನ್ನೂ, ಸಮಾಧಾನಯಜ್ಞ ಪಶುವನ್ನೂ ವಧಿಸಿ ಅವರಿಗೆ ಸೇವೆ ಮಾಡಲು ಸಿದ್ಧರಾಗಿರಬೇಕು.
Kannada BSI Bible 2016
ಆದರೂ ಅವರು ನನ್ನ ಪರಿಶುದ್ಧ ಸ್ಥಳದಲ್ಲಿ ಸೇವಿ ಸುವವರಾಗಿರುವರು; ಆಲಯದ ಬಾಗಿಲುಗಳ ಮೇಲ್ವಿ ಚಾರವನ್ನು ಹೊಂದಿ ಆಲಯಕ್ಕೆ ಸೇವೆಮಾಡುವರು; ಅವರು ಜನರಿಗೋಸ್ಕರ ದಹನಬಲಿಯನ್ನು ಬಲಿ ಯನ್ನೂ ಮಾಡಿ ಅವರಿಗೆ ಸೇವೆಮಾಡುವ ಹಾಗೆ ಅವರ ಮುಂದೆ ನಿಲ್ಲುವರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವರು ನನ್ನ ಪವಿತ್ರಾಲಯದಲ್ಲಿ ಪರಿಚಾರಕರೂ ಮಂದಿರದ್ವಾರಪಾಲಕರೂ ಆಗಿ ಮಂದಿರದಲ್ಲಿ ಸೇವೆಮಾಡಬೇಕು; ಜನರ ಪಕ್ಷವಾಗಿ ಸರ್ವಾಂಗಹೋಮ ಪಶುವನ್ನೂ [ಸಮಾಧಾನ] ಯಜ್ಞಪಶುವನ್ನೂ ವಧಿಸಿ ಅವರಿಗೆ ಸೇವೆಮಾಡಲು ಸಿದ್ಧರಾಗಿರಬೇಕು.
Kannada Bible (KNCL) BSI 2016
ಅವರು ನನ್ನ ಪವಿತ್ರಾಲಯದಲ್ಲಿ ಪರಿಚಾರಕರೂ ಮಂದಿರ ದ್ವಾರಪಾಲಕರೂ ಆಗಿ ಮಂದಿರದಲ್ಲಿ ಸೇವೆಮಾಡಬೇಕು; ಜನರ ಪರವಾಗಿ ದಹನ ಬಲಿಪಶುವನ್ನೂ ಶಾಂತಿಸಮಾಧಾನ ಬಲಿಪಶುವನ್ನೂ ವಧಿಸಿ ಅವರಿಗೆ ಸೇವೆಮಾಡಲು ಸಿದ್ಧರಾಗಿರಬೇಕು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೂ ಅವರು ನನ್ನ ಪರಿಶುದ್ಧ ಸ್ಥಳದಲ್ಲಿ ಸೇವಿಸುವವರಾಗಿರುವರು. ಆಲಯದ ಬಾಗಿಲುಗಳ ಮೇಲ್ವಿಚಾರವನ್ನು ಹೊಂದಿ ಆಲಯಕ್ಕೆ ಸೇವೆಮಾಡುವರು. ಅವರು ಜನರಿಗೋಸ್ಕರ ದಹನಬಲಿಯನ್ನೂ ಸಮಾಧಾನ ಬಲಿಯನ್ನೂ ಮಾಡಿ ಅವರಿಗೆ ಸೇವೆ ಮಾಡುವ ಹಾಗೆ ಅವರ ಮುಂದೆ ನಿಲ್ಲುವರು.