Ezekiel 44:12 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆದರೆ ಆ ಲೇವಿಯರು, ಜನರು ನನಗೆ ವಿರುದ್ಧವಾಗಿ ಪಾಪ ಮಾಡುವಂತೆ ಸಹಾಯಮಾಡಿದರು. ಜನರು ತಮ್ಮ ವಿಗ್ರಹಗಳನ್ನು ಪೂಜಿಸುವಂತೆ ಅವರಿಗೆ ಸಹಾಯ ಮಾಡಿದರು. ಆದ್ದರಿಂದ ನಾನು ವಾಗ್ದಾನ ಮಾಡುವದೇನೆಂದರೆ, ‘ಅವರು ಮಾಡಿದ ಪಾಪಗಳಿಗಾಗಿ ಅವರು ಶಿಕ್ಷಿಸಲ್ಪಡುವರು.”‘ ಇದು ನನ್ನ ಒಡೆಯನಾದ ಯೆಹೋವನ ನುಡಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವರು ತಮ್ಮ ವಿಗ್ರಹಗಳ ಮುಂದೆ ಜನರಿಗಾಗಿ ಸೇವೆ ಮಾಡಿ ಇಸ್ರಾಯೇಲ್ ವಂಶದವರಿಗೆ ಪಾಪಕಾರಿಯಾದ ವಿಘ್ನವಾದುದರಿಂದ ನಾನು ಅವರ ಮೇಲೆ ಕೈಯೆತ್ತಿದ್ದೇನೆ, ಅವರು ತಮ್ಮ ದೋಷಫಲವನ್ನು ಅನುಭವಿಸಲೇಬೇಕು.’ ಇದು ಕರ್ತನಾದ ಯೆಹೋವನ ನುಡಿ.
Kannada BSI Bible 2016
ಅವರು ತಮ್ಮ ವಿಗ್ರ ಹಗಳ ಮುಂದೆ ಜನರಿಗಾಗಿ ಸೇವೆಮಾಡಿ ಇಸ್ರಾ ಯೇಲಿನ ಮನೆತನದವರಿಗೆ ಅಕ್ರಮದ ಆತಂಕವಾ ದದ್ದೇ ಕಾರಣ, ನಾನು ನನ್ನ ಕೈಯನ್ನು ಅವರಿಗೆ ವಿರುದ್ಧವಾಗಿ ಚಾಚಿದ್ದೇನೆ, ಅವರು ತಮ್ಮ ಅಕ್ರಮವನ್ನು ಹೊರುವರೆಂದು ದೇವರಾದ ಕರ್ತನು ಹೇಳುತ್ತಾನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವರು ತಮ್ಮ ಬೊಂಬೆಗಳ ಮುಂದೆ ಜನರಿಗಾಗಿ ಸೇವೆಮಾಡಿ ಇಸ್ರಾಯೇಲ್ ವಂಶದವರಿಗೆ ಪಾಪಕಾರಿ ವಿಘ್ನವಾದದರಿಂದ ನಾನು ಅವರ ಮೇಲೆ ಕೈಯೆತ್ತಿದ್ದೇನೆ, ಅವರು ತಮ್ಮ ದೋಷಫಲವನ್ನು ಅನುಭವಿಸೇ ತೀರಬೇಕು; ಇದು ಕರ್ತನಾದ ಯೆಹೋವನ ನುಡಿ.
Kannada Bible (KNCL) BSI 2016
ಅವರು ತಮ್ಮ ವಿಗ್ರಹಗಳ ಮುಂದೆ ಜನರಿಗಾಗಿ ಸೇವೆಮಾಡಿ, ಇಸ್ರಯೇಲ್ ವಂಶದವರಿಗೆ ಪಾಪಕಾರಿವಿಘ್ನವಾದುದರಿಂದ, ನಾನು ಅವರ ಮೇಲೆ ಕೈಯೆತ್ತಿದ್ದೇನೆ. ಅವರು ತಮ್ಮ ದೋಷಫಲವನ್ನು ಅನುಭವಿಸಿಯೇ ತೀರಬೇಕು; ಇದು ಸರ್ವೇಶ್ವರನಾದ ದೇವರ ನುಡಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ಅವರು ತಮ್ಮ ವಿಗ್ರಹಗಳ ಮುಂದೆ ಜನರಿಗಾಗಿ ಸೇವೆಮಾಡಿ ಇಸ್ರಾಯೇಲಿನ ಮನೆತನದವರಿಗೆ ಪಾಪದ ಆತಂಕವಾದದ್ದರಿಂದ, ನಾನು ಅವರಿಗೆ ವಿರುದ್ಧವಾಗಿ ನನ್ನ ಕೈಯನ್ನು ಚಾಚಿದ್ದೇನೆ. ಅವರು ತಮ್ಮ ಪಾಪವನ್ನು ಹೊರುವರೆಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.