Ezekiel 44:15 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ಯಾಜಕರೆಲ್ಲರೂ ಲೇವಿ ಕುಲಕ್ಕೆ ಸಂಘಂಧಪಟ್ಟವರು. ಆದರೆ ಲೇವಿಯರು ನನ್ನನ್ನು ಬಿಟ್ಟು ತೊಲಗಿದಾಗ ಚಾದೋಕನ ಸಂತತಿಯವರಾದ ಯಾಜಕರು ನನ್ನ ಪವಿತ್ರ ಸ್ಥಳವನ್ನು ಪರಾಂಬರಿಸಿದರು. ಆದ್ದರಿಂದ ಚಾದೋಕನ ಸಂತತಿಯವರು ಮಾತ್ರ ನನಗೆ ಕಾಣಿಕೆಗಳನ್ನು ಸಮರ್ಪಿಸುವರು. ಅವರು ನನ್ನ ಸನ್ನಿಧಿಯಲ್ಲಿ ನಿಂತು ಯಜ್ಞಮಾಡಲ್ಪಡುವ ಪ್ರಾಣಿಗಳ ಕೊಬ್ಬು ಮತ್ತು ರಕ್ತವನ್ನು ನನಗೆ ಸಮರ್ಪಿಸುವರು.” ಇದು ನನ್ನ ಒಡೆಯನಾದ ಯೆಹೋವನ ನುಡಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“‘ಆದರೆ ಇಸ್ರಾಯೇಲರು ನನ್ನನ್ನು ತೊರೆದಾಗ, ಲೇವಿಯರೂ, ಚಾದೋಕನ ಸಂತಾನದವರೂ ಆದ ಯಾಜಕರು ನನ್ನ ಪವಿತ್ರಾಲಯದ ಪಾರುಪತ್ಯವನ್ನು ನೆರವೇರಿಸಿದ್ದರಿಂದ ಅವರು ನನ್ನನ್ನು ಸೇವಿಸಲು ನನ್ನ ಸನ್ನಿಧಿಗೆ ಸೇರುವರು, ನನಗೆ ಕೊಬ್ಬನ್ನೂ, ರಕ್ತವನ್ನೂ ಅರ್ಪಿಸಲು ನನ್ನ ಸಮ್ಮುಖದಲ್ಲಿ ನಿಂತುಕೊಳ್ಳುವರು’ ಇದು ಕರ್ತನಾದ ಯೆಹೋವನ ನುಡಿ.
Kannada BSI Bible 2016
ಆದರೆ ಇಸ್ರಾಯೇಲಿನ ಮಕ್ಕಳು ನನ್ನನ್ನು ಬಿಟ್ಟು ಹೋದಾಗ ನನ್ನ ಪರಿಶುದ್ಧ ಸ್ಥಳದ ಕಾಯಿದೆಯನ್ನು ಕೈಕೊಂಡ ಚಾದೋಕನ ಮಕ್ಕಳಾಗಿರುವ ಲೇವಿಯರಾದ ಯಾಜಕರೂ ಇವರು ನನಗೆ ಸೇವೆಮಾಡುವ ಹಾಗೆ ನನ್ನ ಸವಿಾಪಕ್ಕೆ ಬಂದು, ನನ್ನ ಮುಂದೆ ನಿಂತು, ನನಗೆ ಕೊಬ್ಬನ್ನೂ ರಕ್ತವನ್ನೂ ಅರ್ಪಿಸುವರೆಂದು ದೇವರಾದ ಕರ್ತನು ಹೇಳುತ್ತಾನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಆದರೆ ಇಸ್ರಾಯೇಲ್ಯರು ನನ್ನನ್ನು ತೊರೆದಾಗ ಲೇವಿಯರೂ ಚಾದೋಕನ ಸಂತಾನದವರೂ ಆದ ಯಾಜಕರು ನನ್ನ ಪವಿತ್ರಾಲಯದ ಪಾರುಪತ್ಯವನ್ನು ನೆರವೇರಿಸಿದ್ದರಿಂದ ಅವರು ನನ್ನನ್ನು ಸೇವಿಸಲು ನನ್ನ ಸನ್ನಿಧಿಗೆ ಸೇರುವರು, ನನಗೆ ರಕ್ತಮೇದಸ್ಸುಗಳನ್ನು ಅರ್ಪಿಸಲು ನನ್ನ ಸಮ್ಮುಖದಲ್ಲಿ ನಿಂತುಕೊಳ್ಳುವರು; ಇದು ಕರ್ತನಾದ ಯೆಹೋವನ ನುಡಿ.
Kannada Bible (KNCL) BSI 2016
“ಆದರೆ ಇಸ್ರಯೇಲರು ನನ್ನನ್ನು ತೊರೆದಾಗ ಲೇವಿಯರೂ ಚಾದೋಕನ ಸಂತಾನದವರೂ ಆದ ಯಾಜಕರು ನನ್ನ ಪವಿತ್ರಾಲಯದ ಪಾರುಪತ್ಯವನ್ನು ನೆರವೇರಿಸಿದರು. ಆದ್ದರಿಂದ ಅವರು ನನ್ನ ಸೇವೆಮಾಡಲು ನನ್ನ ಸನ್ನಿಧಿಗೆ ಬರುವರು, ನನಗೆ ರಕ್ತಮೇದಸ್ಸುಗಳನ್ನು ಅರ್ಪಿಸಲು ನನ್ನ ಸಮ್ಮುಖದಲ್ಲಿ ನಿಂತುಕೊಳ್ಳುವರು; ಇದು ಸರ್ವೇಶ್ವರನಾದ ದೇವರ ನುಡಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ ‘ಆದರೆ ಇಸ್ರಾಯೇಲರು ನನ್ನನ್ನು ಬಿಟ್ಟುಹೋದಾಗ ನನ್ನ ಪರಿಶುದ್ಧಸ್ಥಳದ ಕಾಯಿದೆಯನ್ನು ಪಾಲಿಸಿದ ಚಾದೋಕನ ಮಕ್ಕಳಾಗಿರುವ ಲೇವಿಯರಾದ ಯಾಜಕರೂ ಇವರು ನನಗೆ ಸೇವೆಮಾಡುವಂತೆ ನನ್ನ ಸಮೀಪಕ್ಕೆ ಬಂದು, ನನ್ನ ಮುಂದೆ ನಿಂತು, ನನಗೆ ಕೊಬ್ಬನ್ನೂ ರಕ್ತವನ್ನೂ ಅರ್ಪಿಸುವರೆಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.