Ezekiel 44:17 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಒಳಗಿನ ಪ್ರಾಕಾರದ ಪ್ರವೇಶ ದ್ವಾರವನ್ನು ಹೊಕ್ಕುವಾಗ ಅವರು ನಾರುಮಡಿ ಬಟ್ಟೆಯನ್ನು ಧರಿಸುವರು. ಅವರು ಒಳಗಿನ ಪ್ರಾಕಾರದ ಪ್ರವೇಶ ದ್ವಾರದಲ್ಲಾಗಲಿ ಆಲಯದೊಳಗಾಗಲಿ ಸೇವೆಮಾಡುವಾಗ ಉಣ್ಣೆಯಿಂದ ಮಾಡಿದ ಬಟ್ಟೆಯನ್ನು ಧರಿಸಿಕೊಳ್ಳುವದಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ಅವರು ಒಳಗಿನ ಅಂಗಳದ ಬಾಗಿಲುಗಳನ್ನು ಪ್ರವೇಶಿಸುವಾಗ, ನಾರುಬಟ್ಟೆಗಳನ್ನು ಧರಿಸಿರಬೇಕು; ಒಳಗಿನ ಅಂಗಳದ ಬಾಗಿಲುಗಳಲ್ಲಿಯೂ, ದೇವಸ್ಥಾನದಲ್ಲಿಯೂ ಸೇವೆಮಾಡುತ್ತಿರುವಾಗ ಯಾವ ಉಣ್ಣೆಯ ಉಡುಪೂ ಅವರ ಮೇಲೆ ಇರಬಾರದು.
Kannada BSI Bible 2016
ಅವರು ಒಳ ಗಿನ ಅಂಗಳಗಳ ಬಾಗಿಲನ್ನು ಪ್ರವೇಶಿಸುವಾಗ ನಾರಿನ ವಸ್ತ್ರಗಳನ್ನು ಧರಿಸಿಕೊಳ್ಳಬೇಕು; ಒಳಗಿನ ಅಂಗಳದ ಬಾಗಿಲುಗಳಲ್ಲಿಯೂ ಒಳಗಡೆಯೂ ಸೇವಿ ಸುತ್ತಿರುವಾಗ ಅವರ ಮೇಲೆ ಉಣ್ಣೆಯ ಉಡುಪೂ ಇರಕೂಡದು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವರು ಒಳಗಣ ಪ್ರಾಕಾರದ ಬಾಗಿಲುಗಳನ್ನು ಪ್ರವೇಶಿಸುವಾಗ ನಾರುಬಟ್ಟೆಗಳನ್ನು ಧರಿಸಿರಬೇಕು; ಒಳಗಣ ಪ್ರಾಕಾರದ ಬಾಗಿಲುಗಳಲ್ಲಿಯೂ ದೇವಸ್ಥಾನದಲ್ಲಿಯೂ ಸೇವೆಮಾಡುತ್ತಿರುವಾಗ ಯಾವ ಉಣ್ಣೆಯ ಉಡುಪೂ ಅವರ ಮೇಲೆ ಇರಕೂಡದು.
Kannada Bible (KNCL) BSI 2016
ಅವರು ಒಳಗಿನ ಪ್ರಾಕಾರದ ಬಾಗಿಲುಗಳನ್ನು ಪ್ರವೇಶಿಸುವಾಗ ನಾರುಮಡಿಗಳನ್ನು ಧರಿಸಿರಬೇಕು; ಒಳಗಿನ ಪ್ರಾಕಾರದ ಬಾಗಿಲುಗಳಲ್ಲೂ ದೇವಸ್ಥಾನದಲ್ಲೂ ಸೇವೆಮಾಡುತ್ತಿರುವಾಗ, ಯಾವ ಉಣ್ಣೆಯ ಉಡುಪೂ ಅವರ ಮೇಲೆ ಇರಕೂಡದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ ‘ಅವರು ಒಳಗಿನ ಅಂಗಳಗಳ ಬಾಗಿಲನ್ನು ಪ್ರವೇಶಿಸುವಾಗ ನಾರಿನ ವಸ್ತ್ರಗಳನ್ನು ಧರಿಸಿಕೊಳ್ಳಬೇಕು. ಅವರು ಒಳಗಿನ ಅಂಗಳದ ಬಾಗಿಲುಗಳಲ್ಲಿಯೂ ಒಳಗಡೆಯೂ ಸೇವಿಸುತ್ತಿರುವಾಗ ಅವರ ಮೇಲೆ ಉಣ್ಣೆಯ ಉಡುಪೂ ಇರಕೂಡದು.