Ezekiel 44:18 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅವರು ನಾರುಮಡಿಯ ಮುಂಡಾಸನ್ನು ಧರಿಸಿಕೊಳ್ಳುವರು. ಅದೇ ಬಟ್ಟೆಯ ಚಡ್ಡಿಯನ್ನೂ ಧರಿಸುವರು. ಅವರಿಗೆ ಬೆವರು ಬರಿಸುವ ಯಾವ ಬಟ್ಟೆಯಾಗಲಿ ಅವರು ಧರಿಸುವದಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವರು ತಲೆಗೆ ನಾರಿನ ಮುಂಡಾಸವನ್ನು, ಸೊಂಟಕ್ಕೆ ನಾರಿನ ಒಳಉಡುಪನ್ನು ಹಾಕಿಕೊಂಡಿರಬೇಕು; ಬೆವರುವ ಯಾವ ಉಡುಪನ್ನೂ ಉಟ್ಟುಕೊಳ್ಳಬಾರದು.
Kannada BSI Bible 2016
ಅವರ ತಲೆಗಳ ಮೇಲೆ ನಾರಿನ ರುಮಾಲುಗಳೂ ಅವರ ಸೊಂಟಗಳ ಮೇಲೆ ನಾರಿನ ಇಜಾರುಗಳು ಇರಬೇಕು; ಅವರು ಬೆವರು ಬರುವಂತವುಗಳನ್ನು ಕಟ್ಟಿಕೊಳ್ಳಬಾರದು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇವರು ತಲೆಗೆ ನಾರಿನ ಮುಂಡಾಸವನ್ನು, ಸೊಂಟಕ್ಕೆ ನಾರಿನ ಚಡ್ಡಿಯನ್ನು ಹಾಕಿಕೊಂಡಿರಲಿ; ಬೆವರುವ ಯಾವ ಉಡುಪನ್ನೂ ಉಟ್ಟುಕೊಳ್ಳಬಾರದು.
Kannada Bible (KNCL) BSI 2016
ಅವರು ತಲೆಗೆ ನಾರುಪೇಟವನ್ನು, ಸೊಂಟಕ್ಕೆ ನಾರುಚಡ್ಡಿಯನ್ನು ಹಾಕಿಕೊಂಡಿರಲಿ; ಬೆವರುವ ಯಾವ ಉಡುಪನ್ನೂ ಉಟ್ಟುಕೊಳ್ಳಬಾರದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವರ ತಲೆಗಳ ಮೇಲೆ ನಾರಿನ ಮುಂಡಾಸಗಳೂ, ಅವರ ಸೊಂಟಗಳ ಮೇಲೆ ನಾರಿನ ಒಳಉಡುಪುಗಳೂ ಇರಬೇಕು. ಅವರು ಬೆವರು ಬರುವಂಥವುಗಳನ್ನು ಕಟ್ಟಿಕೊಳ್ಳಬಾರದು.