Ezekiel 44:22 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯಾಜಕರು ವಿಧವೆಯರನ್ನಾಗಲಿ ವಿವಾಹವಿಚ್ಛೇದನಗೊಂಡ ಸ್ತ್ರೀಯರನ್ನಾಗಲಿ ಮದುವೆಯಾಗಕೂಡದು. ಇಸ್ರೇಲ್ ಸಂತತಿಯವಳೇ ಆಗಿರುವ ಕನ್ನಿಕೆಯನ್ನಾಗಲಿ ಅಥವಾ ಯಾಜಕನಾಗಿದ್ದ ತನ್ನ ಗಂಡನನ್ನು ಕಳೆದುಕೊಂಡ ವಿಧವೆಯನ್ನಾಗಲಿ ಮದುವೆಯಾಗಬೇಕು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯಾಜಕರು ವಿಧವೆಯನ್ನಾಗಲಿ, ಗಂಡನಿಂದ ಬಿಡಲ್ಪಟ್ಟವಳನ್ನಾಗಲಿ ಮದುವೆಯಾಗಬಾರದು; ಆದರೆ ಇಸ್ರಾಯೇಲ್ ವಂಶದ ಕನ್ಯೆಯನ್ನಾಗಲಿ, ಯಾಜಕನ ವಿಧವೆಯನ್ನಾಗಲಿ ಮದುವೆ ಮಾಡಿಕೊಳ್ಳಬಹುದು.
Kannada BSI Bible 2016
ಅವರು ಒಬ್ಬ ವಿಧವೆ ಯನ್ನಾಗಲಿ, ಹೊರಗೆ ಹಾಕಲ್ಪಟ್ಟವಳನ್ನಾಗಲಿ, ಹೆಂಡತಿ ಯನ್ನಾಗಲು ಸ್ವೀಕರಿಸಬಾರದು ಆದರೆ ಇಸ್ರಾಯೇಲಿನ ಮನೆತನದ ಸಂತಾನದವರಾದ ಕನ್ಯೆಯರನ್ನು ತೆಗೆದು ಕೊಳ್ಳಬಹುದು. ಅಥವಾ ಯಾಜಕನಿಂದ ವಿಧವೆಯಾಗಿ ರುವವಳನ್ನು ತೆಗೆದುಕೊಳ್ಳಬಹುದು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯಾಜಕರು ವಿಧವೆಯನ್ನಾಗಲಿ ಗಂಡನಿಂದ ಬಿಡಲ್ಪಟ್ಟವಳನ್ನಾಗಲಿ ಮದುವೆಯಾಗಬಾರದು; ಆದರೆ ಇಸ್ರಾಯೇಲ್‍ವಂಶದ ಕನ್ಯೆಯನ್ನಾಗಲಿ ಯಾಜಕನ ವಿಧವೆಯನ್ನಾಗಲಿ ಮದುವೆಮಾಡಿಕೊಳ್ಳಲಿ.
Kannada Bible (KNCL) BSI 2016
ಯಾಜಕರು ವಿಧವೆಯನ್ನಾಗಲಿ ಗಂಡನಿಂದ ಬಿಡಲಾದವಳನ್ನಾಗಲಿ ಮದುವೆಯಾಗಬಾರದು; ಆದರೆ ಇಸ್ರಯೇಲ್ ವಂಶದ ಕನ್ಯೆಯನ್ನಾಗಲಿ, ಯಾಜಕನ ವಿಧವೆಯನ್ನಾಗಲಿ ಮದುವೆಮಾಡಿಕೊಳ್ಳಲಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯಾಜಕರು ವಿಧವೆಯನ್ನಾಗಲಿ ಗಂಡನಿಂದ ಬಿಡಲಾದವಳನ್ನಾಗಲಿ ಮದುವೆಯಾಗಬಾರದು; ಆದರೆ ಇಸ್ರಾಯೇಲ್ ಸಂತಾನದ ಕನ್ಯೆಯನ್ನಾಗಲಿ, ಯಾಜಕನ ವಿಧವೆಯನ್ನಾಗಲಿ ಮದುವೆಮಾಡಿಕೊಳ್ಳಲಿ.