Ezekiel 44:23 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ಯಾಜಕರು ಜನರಿಗೆ ಪವಿತ್ರ ವಸ್ತುಗಳ ಮತ್ತು ಪವಿತ್ರವಲ್ಲದ ವಸ್ತುಗಳ ಬಗ್ಗೆ ಉಪದೇಶಿಸಬೇಕು. ಒಬ್ಬನನ್ನು ಅಶುದ್ಧನನ್ನಾಗಿ ಮಾಡುವಂಥವುಗಳ ಬಗ್ಗೆ ಇರುವ ನಿಯಮಗಳನ್ನು ಅವರು ಜನರಿಗೆ ಉಪದೇಶಿಸಬೇಕು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವರು ನನ್ನ ಜನರಿಗೆ ಪವಿತ್ರವಾದದ್ದಕ್ಕೂ ಮತ್ತು ಅಪವಿತ್ರವಾದದ್ದಕ್ಕೂ ಇರುವ ವ್ಯತ್ಯಾಸವನ್ನು ಬೋಧಿಸಿ, ಅವರಿಗೆ ಶುದ್ಧ ಹಾಗೂ ಅಶುದ್ಧಗಳ ಭೇದವನ್ನು ತಿಳಿಸಲಿ.
Kannada BSI Bible 2016
ಅವರು ನನ್ನ ಜನರಿಗೆ ಪರಿಶುದ್ಧವಾದದ್ದಕ್ಕೂ ಅಪವಿತ್ರವಾದದ್ದಕ್ಕೂ ಹೆಚ್ಚು ಕಡಿಮೆಯನ್ನು ಬೋಧಿಸಿ, ಅವರಿಗೆ ಹೊಲೆ ಯಾದದ್ದನ್ನೂ ಶುದ್ಧವಾದದ್ದನ್ನೂ ತಿಳಿಸಬೇಕು.
Kannada BSI JV (ಕನ್ನಡ ಸತ್ಯವೇದವು J.V. (BSI))
ಮೀಸಲಾದದ್ದಕ್ಕೂ ಮೀಸಲಲ್ಲದ್ದಕ್ಕೂ ಭೇದವನ್ನು ನನ್ನ ಜನರಿಗೆ ತೋರಿಸಿ ಶುದ್ಧಾಶುದ್ಧವಿವೇಚನೆಯನ್ನು ಅವರಿಗೆ ಬೋಧಿಸಲಿ.
Kannada Bible (KNCL) BSI 2016
“ಮೀಸಲಾಗಿದದ್ದಕ್ಕೂ ಮೀಸಲಲ್ಲದ್ದಕ್ಕೂ ಇರುವ ಭೇದವನ್ನು ನನ್ನ ಜನರಿಗೆ ತೋರಿಸಿ, ಶುದ್ಧಾಶುದ್ಧ ವಿವೇಚನೆಯನ್ನು ಅವರಿಗೆ ಬೋಧಿಸಲಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವರು ನನ್ನ ಜನರಿಗೆ ಪರಿಶುದ್ಧವಾದದ್ದಕ್ಕೂ ಅಪವಿತ್ರವಾದದ್ದಕ್ಕೂ ಇರುವ ವ್ಯತ್ಯಾಸವನ್ನು ಬೋಧಿಸಿ, ಅವರಿಗೆ ಶುದ್ಧಾಶುದ್ಧ ವ್ಯತ್ಯಾಸವನ್ನೂ ವಿವರಿಸಬೇಕು.