Ezekiel 44:29 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಜನರು ಧಾನ್ಯಸಮರ್ಪಣೆ, ಪಾಪಪರಿಹಾರಕಯಜ್ಞ, ದೋಷಪರಿಹಾರಕಯಜ್ಞಕ್ಕೆ ತಂದ ಕಾಣಿಕೆಯೇ ಅವರ ಆಹಾರವಾಗಿರುವದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವರು ಧಾನ್ಯನೈವೇದ್ಯವನ್ನೂ ದೋಷಪರಿಹಾರಕ ಯಜ್ಞದ್ರವ್ಯವನ್ನೂ, ಪ್ರಾಯಶ್ಚಿತ್ತ ಯಜ್ಞದ್ರವ್ಯವನ್ನೂ ಅನುಭವಿಸಲಿ; ಕೇವಲ ಯೆಹೋವನದಾಗಿಯೇ ಇರಲೆಂದು ಇಸ್ರಾಯೇಲರಲ್ಲಿ ಹರಕೆ ಮಾಡಿದ್ದೆಲ್ಲವೂ ಅವರಿಗೆ ಸಲ್ಲಬೇಕು.
Kannada BSI Bible 2016
ಆಹಾರದ ಅರ್ಪಣೆಯನ್ನು ಪಾಪ ಬಲಿಯನ್ನೂ ಅಪರಾಧ ಬಲಿಯನ್ನೂ ಅವರು ತಿನ್ನಬೇಕು; ಇಸ್ರಾಯೇಲಿನಲ್ಲಿ ಪ್ರತಿಷ್ಠೆ ಮಾಡಿದ್ದೆಲ್ಲವೂ ಅವರಿಗೆ ಸಲ್ಲಬೇಕು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವರು ಧಾನ್ಯನೈವೇದ್ಯವನ್ನೂ ದೋಷಪರಿಹಾರಕಯಜ್ಞದ್ರವ್ಯವನ್ನೂ ಪ್ರಾಯಶ್ಚಿತ್ತಯಜ್ಞದ್ರವ್ಯವನ್ನೂ ಅನುಭವಿಸಲಿ; ಕೇವಲ ಯೆಹೋವನದಾಗಿಯೇ ಇರಲೆಂದು ಇಸ್ರಾಯೇಲ್ಯರು ಹರಕೆಮಾಡಿಕೊಡುವದೆಲ್ಲವೂ ಅವರಿಗೆ ಸಲ್ಲಬೇಕು.
Kannada Bible (KNCL) BSI 2016
ಅವರು ಧಾನ್ಯ ನೈವೇದ್ಯವನ್ನೂ ದೋಷಪರಿಹಾರಕ ಬಲಿದ್ರವ್ಯವನ್ನೂ ಪ್ರಾಯಶ್ಚಿತ್ತ ಬಲಿದ್ರವ್ಯವನ್ನೂ ಅನುಭವಿಸಲಿ. ಸರ್ವೇಶ್ವರನದಾಗಿಯೇ ಇರಲೆಂದು ಇಸ್ರಯೇಲರು ಹರಕೆಮಾಡಿಕೊಡುವುದೆಲ್ಲವೂ ಅವರಿಗೆ ಸಲ್ಲಬೇಕು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಧಾನ್ಯ ಸಮರ್ಪಣೆಯನ್ನು ದೋಷಪರಿಹಾರ ಬಲಿಯನ್ನೂ ಪ್ರಾಯಶ್ಚಿತ್ತ ಬಲಿಯನ್ನೂ ಅವರು ತಿನ್ನಬೇಕು. ಇಸ್ರಾಯೇಲಿನಲ್ಲಿ ಯೆಹೋವ ದೇವರಿಗೆ ಪ್ರತಿಷ್ಠೆ ಮಾಡಿದ್ದೆಲ್ಲವೂ ಅವರಿಗೆ ಸಲ್ಲಬೇಕು.