Ezekiel 44:30 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಎಲ್ಲಾ ಪ್ರಥಮಫಲವು ಯಾಜಕರಿಗೆ ಸಲ್ಲತಕ್ಕದ್ದು. ಅಲ್ಲದೆ ನೀವು ನಾದುವ ಮೊದಲನೆ ರೊಟ್ಟಿಯ ಹಿಟ್ಟು ಯಾಜಕರಿಗೆ ಕೊಡಬೇಕು. ಹೀಗೆ ಮಾಡಿದ್ದಲ್ಲಿ ನೀವು ಆಶೀರ್ವದಿಸಲ್ಪಡುತ್ತೀರಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ಎಲ್ಲಾ ಪ್ರಥಮಫಲಗಳಲ್ಲಿ ಉತ್ಕೃಷ್ಟವಾದದ್ದನ್ನು ನೀವು ನನಗೆ ಪ್ರತ್ಯೇಕಿಸಿ ಸಮರ್ಪಿಸುವ ಎಲ್ಲಾ ಪದಾರ್ಥಗಳೂ ಅವರಿಗಾಗಬೇಕು. ನಿಮ್ಮ ಮನೆಯು ಆಶೀರ್ವಾದಕ್ಕೆ ನೆಲೆಯಾಗುವಂತೆ ನೀವು ಮೊದಲನೆಯ ಹಿಟ್ಟನ್ನು ಯಾಜಕರಿಗೆ ಕೊಡತಕ್ಕದ್ದು.
Kannada BSI Bible 2016
ಇದಲ್ಲದೆ ಎಲ್ಲಾ ಪ್ರಥಮ ಫಲಗಳಲ್ಲಿ ಉತ್ಕೃಷ್ಟ ವಾದದ್ದೂ ನೀವು ನನಗೆ ಪ್ರತ್ಯೇ ಕಿಸಿ ಸಮರ್ಪಿಸಿದ ಎಲ್ಲಾ ಪದಾರ್ಥಗಳು ಯಾಜಕ ನದ್ದಾಗಬೇಕು; ನಿಮ್ಮ ಮನೆಯು ಆಶೀರ್ವಾದಕ್ಕೆ ನೆಲೆಯಾಗುವಂತೆ ಮೊದಲನೇ ಹಿಟ್ಟನ್ನು ನೀವು ಯಾಜಕ ರಿಗೆ ಕೊಡ ತಕ್ಕದ್ದು.ಯಾಜಕರು, ತಾನಾಗಿ ಸತ್ತು ಬಿದ್ದ ಅಥವಾ ಕಾಡುಮೃಗದಿಂದ ಕೊಲ್ಲಲ್ಪಟ್ಟಂತ ಪಕ್ಷಿಯನ್ನಾಗಲಿ ಪಶುವನ್ನಾಗಲಿ ತಿನ್ನಬಾರದು.
Kannada BSI JV (ಕನ್ನಡ ಸತ್ಯವೇದವು J.V. (BSI))
ಎಲ್ಲಾ ಪ್ರಥಮಫಲಗಳಲ್ಲಿ ಉತ್ಕೃಷ್ಟವಾದದ್ದೂ ನೀವು ನನಗೆ ಪ್ರತ್ಯೇಕಿಸಿ ಸಮರ್ಪಿಸುವ ಎಲ್ಲಾ ಪದಾರ್ಥಗಳೂ ಅವರಿಗಾಗಬೇಕು; ನಿಮ್ಮ ಮನೆಯು ಆಶೀರ್ವಾದಕ್ಕೆ ನೆಲೆಯಾಗುವಂತೆ ನೀವು ಮೊದಲನೆಯ ಹಿಟ್ಟನ್ನು ಯಾಜಕರಿಗೆ ಕೊಡತಕ್ಕದ್ದು.
Kannada Bible (KNCL) BSI 2016
ಎಲ್ಲ ಪ್ರಥಮಫಲಗಳಲ್ಲಿ ಉತ್ಕೃಷ್ಟವಾದದ್ದು ಹಾಗು ನೀವು ನನಗೆ ಪ್ರತ್ಯೇಕಿಸಿ ಸಮರ್ಪಿಸುವ ಎಲ್ಲ ಪದಾರ್ಥಗಳು ಅವರದಾಗಬೇಕು. ನಿಮ್ಮ ಮನೆ ಆಶೀರ್ವಾದಕ್ಕೆ ನೆಲೆಯಾಗುವಂತೆ ನೀವು ಮೊದಲನೆಯ ಹಿಟ್ಟನ್ನು ಯಾಜಕರಿಗೆ ಕೊಡತಕ್ಕದ್ದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇದಲ್ಲದೆ ಎಲ್ಲಾ ಪ್ರಥಮ ಫಲಗಳಲ್ಲಿ ಉತ್ಕೃಷ್ಟವಾದದ್ದೂ ನೀವು ನನಗೆ ಪ್ರತ್ಯೇಕಿಸಿ ಸಮರ್ಪಿಸಿದ ಎಲ್ಲಾ ಪದಾರ್ಥಗಳು ಯಾಜಕನದ್ದಾಗಬೇಕು. ನಿಮ್ಮ ಮನೆಯು ಆಶೀರ್ವಾದಕ್ಕೆ ನೆಲೆಯಾಗುವಂತೆ ನೀವು ಮೊದಲನೆಯ ಹಿಟ್ಟನ್ನು ನೀವು ಯಾಜಕರಿಗೆ ಕೊಡತಕ್ಕದ್ದು.