Ezekiel 44:5 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆಗ ಯೆಹೋವನು ಹೇಳಿದ್ದೇನೆಂದರೆ, “ನರಪುತ್ರನೇ, ಕಿವಿಯಾರೆ ಕೇಳು, ಕಣ್ಣಾರೆ ನೋಡಿ ಅರ್ಥಮಾಡಿಕೊ. ಪವಿತ್ರಾಲಯದ ಎಲ್ಲಾ ವಿಊನಿಯಮಗಳನ್ನು ಗಮನವಿಟ್ಟು ಕೇಳು. ಆಲಯದೊಳಕ್ಕೆ ಬರುವ ಪ್ರವೇಶ ದ್ವಾರಗಳನ್ನೂ ಪವಿತ್ರಸ್ಥಳದಿಂದ ಹೊರ ಹೋಗುವ ಪ್ರವೇಶ ದ್ವಾರಗಳನ್ನೂ ಗಮನವಿಟ್ಟು ನೋಡು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಯೆಹೋವನು ನನಗೆ ಹೀಗೆ ಹೇಳಿದನು, “ನರಪುತ್ರನೇ, ಯೆಹೋವನ ಆಲಯದ ಸಕಲ ನೇಮನಿಷ್ಠೆಗಳ ವಿಷಯವಾಗಿ ನಾನು ನಿನಗೆ ಹೇಳುವುದನ್ನೆಲ್ಲಾ ನೀನು ಕಿವಿಯಾರೆ ಕೇಳಿ, ಕಣ್ಣಾರೆ ಕಂಡು ಮನದಟ್ಟು ಮಾಡಿಕೋ ಮತ್ತು ಪವಿತ್ರಾಲಯದ ಪ್ರವೇಶವನ್ನೂ, ಪರಿಶುದ್ಧ ಸ್ಥಳದ ಪ್ರತಿಯೊಂದು ಹಾಗುಹೋಗುಗಳನ್ನೂ ಗಮನಿಸು.
Kannada BSI Bible 2016
ಕರ್ತನು ನನಗೆ ಹೇಳಿದ್ದೇ ನಂದರೆ--ಮನುಷ್ಯಪುತ್ರನೇ, ಕರ್ತನ ಆಲಯದ ಸಕಲ ನೇಮನಿಷ್ಠೆಗಳ ವಿಷಯವಾಗಿಯೂ ನ್ಯಾಯ ಪ್ರಮಾಣದ ವಿಷಯವಾಗಿಯೂ ನಾನು ನಿನಗೆ ಹೇಳುವದನ್ನೆಲ್ಲಾ ನೀವು ಕಿವಿಯಾರೆ ಕೇಳಿ ಕಣ್ಣಾರೆ ಕಂಡು ಮನದಟ್ಟು ಮಾಡಿಕೋ; ಆಲಯದೊಳಗಿನ ಪ್ರವೇಶವನ್ನೂ ಪರಿಶುದ್ಧ ಸ್ಥಳದ ಪ್ರತಿಯೊಂದು ಹಾದು ಹೋಗುವವುಗಳನ್ನೂ ಗಮನಿಸು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ಯೆಹೋವನು ನನಗೆ ಹೀಗೆ ಹೇಳಿದನು - ನರಪುತ್ರನೇ, ಯೆಹೋವನ ಆಲಯದ ಸಕಲ ನಿಯಮನಿಷ್ಠೆಗಳ ವಿಷಯವಾಗಿ ನಾನು ನಿನಗೆ ಹೇಳುವದನ್ನೆಲ್ಲಾ ನೀನು ಕಿವಿಯಾರೆ ಕೇಳಿ ಕಣ್ಣಾರೆ ಕಂಡು ಮಂದಟ್ಟುಮಾಡಿಕೋ; ಮತ್ತು ಪವಿತ್ರಾಲಯದ ಗಮನಾಗಮನ ವಿಧಿಗಳನ್ನು ಗಮನಿಸು.
Kannada Bible (KNCL) BSI 2016
ಆಗ ಸರ್ವೇಶ್ವರ ನನಗೆ ಹೀಗೆ ಹೇಳಿದರು: “ನರಪುತ್ರನೇ, ಸರ್ವೇಶ್ವರನ ಆಲಯದ ಸಕಲ ನಿಯಮ ನಿಷ್ಠೆಗಳ ವಿಷಯವಾಗಿ ನಾನು ನಿನಗೆ ಹೇಳುವುದನ್ನೆಲ್ಲಾ ನೀನು ಕಿವಿಯಾರೆ ಕೇಳಿ, ಕಣ್ಣಾರೆ ಕಂಡು, ಮನದಟ್ಟು ಮಾಡಿಕೋ; ಮತ್ತು ಪವಿತ್ರಾಲಯದ ಗಮನಾಗಮನವಿಧಿಗಳನ್ನು ಗಮನಿಸು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೆಹೋವ ದೇವರು ನನಗೆ ಹೇಳಿದ್ದೇನೆಂದರೆ, “ಮನುಷ್ಯಪುತ್ರನೇ, ಯೆಹೋವ ದೇವರ ಆಲಯದ ಸಕಲ ನೇಮನಿಷ್ಠೆಗಳ ವಿಷಯವಾಗಿಯೂ ನಿಯಮದ ವಿಷಯವಾಗಿಯೂ ನಾನು ನಿನಗೆ ಹೇಳುವುದನ್ನೆಲ್ಲಾ ನೀನು ಕಿವಿಯಾರೆ ಕೇಳಿ, ಕಣ್ಣಾರೆ ಕಂಡು ಮನದಟ್ಟು ಮಾಡಿಕೋ. ಆಲಯದೊಳಗಿನ ಪ್ರವೇಶವನ್ನೂ ಪರಿಶುದ್ಧಸ್ಥಳದ ಪ್ರತಿಯೊಂದು ಹಾದುಹೋಗುಗಳನ್ನೂ ಗಮನಿಸು.