Ezekiel 44:7 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನೀವು ನನ್ನ ಆಲಯದೊಳಗೆ ಅನ್ಯರನ್ನು ತಂದಿರುತ್ತೀರಿ. ಅವರು ಸುನ್ನತಿಯಾದವರಾಗಿರಲಿಲ್ಲ. ಅವರು ಸಂಪೂರ್ಣವಾಗಿ ನನ್ನನ್ನು ನಂಬಿರಲಿಲ್ಲ. ಈ ರೀತಿಯಾಗಿ ನೀವು ನನ್ನ ಆಲಯವನ್ನು ಹೊಲೆ ಮಾಡಿರುತ್ತೀರಿ. ನೀವು ನಾವು ಮಾಡಿಕೊಂಡ ಒಡಂಘಡಿಕೆಯನ್ನು ಮುರಿದುಬಿಟ್ಟಿರಿ. ಭಯಂಕರ ಕೃತ್ಯಗಳನ್ನು ಮಾಡಿ ಆಮೇಲೆ ನನಗೆ ರೊಟ್ಟಿ, ಕೊಬ್ಬು, ರಕ್ತಗಳ ಕಾಣಿಕೆ ಅರ್ಪಿಸುತ್ತೀರಿ. ಆದರೆ ಇವೆಲ್ಲಾ ನನ್ನ ಆಲಯವನ್ನು ಅಶುದ್ಧಗೊಳಿಸುತ್ತಿವೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
‘ಇಸ್ರಾಯೇಲ್ ವಂಶದವರೇ, ನೀವು ನನ್ನ ರೊಟ್ಟಿಯನ್ನೂ, ಕೊಬ್ಬನ್ನೂ, ರಕ್ತವನ್ನೂ ಅರ್ಪಿಸುವಾಗ, ಹೃದಯದಲ್ಲಿಯೂ, ಶರೀರದಲ್ಲಿಯೂ ಸುನ್ನತಿಹೀನರಾದ ಮ್ಲೇಚ್ಛರನ್ನು ನನ್ನ ಪವಿತ್ರಾಲಯದೊಳಗೆ ಬರಮಾಡಿ, ನನ್ನ ಮಂದಿರವನ್ನು ಅಪವಿತ್ರಗೊಳಿಸಿ, ನನ್ನ ಒಡಂಬಡಿಕೆಯನ್ನು ಭಂಗಪಡಿಸಿ, ನಿಮ್ಮ ದುರಾಚಾರಗಳ ಲೆಕ್ಕವನ್ನು ಹೆಚ್ಚಿಸಿದ್ದೀರಿ.
Kannada BSI Bible 2016
ಅವು ಗಳಲ್ಲಿ ನೀವು ನನ್ನ ರೊಟ್ಟಿಯನ್ನೂ ಕೊಬ್ಬನ್ನೂ ರಕ್ತವನ್ನೂ ಅರ್ಪಿಸುವಾಗ ನಿಮ್ಮ ಎಲ್ಲಾ ಅಸಹ್ಯಗಳಿ ಗೋಸ್ಕರ ನನ್ನ ಒಡಂಬಡಿಕೆಯನ್ನು ವಿಾರುವಂಥ ಹೃದಯದಲ್ಲಿಯೂ ಶರೀರದಲ್ಲಿಯೂ ಸುನ್ನತಿ ಯಿಲ್ಲದಂಥ ಪರಕೀಯರನ್ನು ನನ್ನ ಪರಿಶುದ್ಧಸ್ಥಳಕ್ಕೆ ಕರೆತಂದು ನನ್ನ ಆಲಯವನ್ನು ಅಪವಿತ್ರಪಡಿಸಿದಿರಿ;
Kannada BSI JV (ಕನ್ನಡ ಸತ್ಯವೇದವು J.V. (BSI))
ಇಸ್ರಾಯೇಲ್ ವಂಶದವರೇ, ನೀವು ನನ್ನ ಆಹಾರವಾದ ರಕ್ತಮೇದಸ್ಸುಗಳನ್ನು ಅರ್ಪಿಸುವಾಗ ತನುಮನಗಳಲ್ಲಿ ಸುನ್ನತಿಹೀನರಾದ ಮ್ಲೇಚ್ಫರನ್ನು ನನ್ನ ಪವಿತ್ರಾಲಯದೊಳಗೆ ಬರಮಾಡಿ ನನ್ನ ಮಂದಿರವನ್ನು ಹೊಲೆಗೆಡಿಸಿ ನನ್ನ ಒಡಂಬಡಿಕೆಯನ್ನು ಭಂಗಪಡಿಸಿ ನಿಮ್ಮ ಅವಿುತದುರಾಚಾರಗಳ ಲೆಕ್ಕವನ್ನು ಹೆಚ್ಚಿಸಿದ್ದೀರಿ;
Kannada Bible (KNCL) BSI 2016
ಇಸ್ರಯೇಲ್ ವಂಶದವರೇ, ನೀವು ನನ್ನ ಆಹಾರವಾದ ರಕ್ತಮೇದಸ್ಸುಗಳನ್ನು ಅರ್ಪಿಸುವಾಗ, ತನುಮನಗಳಲ್ಲಿ ಸುನ್ನತಿಹೀನರಾದ ಮ್ಲೇಚ್ಛರನ್ನು, ನನ್ನ ಪವಿತ್ರಾಲಯದೊಳಗೆ ಬರಮಾಡಿ ನನ್ನ ಮಂದಿರವನ್ನು ಅಶುದ್ಧಗೊಳಿಸಿದ್ದೀರಿ. ನನ್ನ ಒಡಂಬಡಿಕೆಯನ್ನು ಉಲ್ಲಂಘಿಸಿ ನಿಮ್ಮ ಅಮಿತ ದುರಾಚಾರಗಳ ಲೆಕ್ಕವನ್ನು ಹೆಚ್ಚಿಸಿದ್ದೀರಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವುಗಳಲ್ಲಿ ನೀವು ನನ್ನ ರೊಟ್ಟಿಯನ್ನೂ ಕೊಬ್ಬನ್ನೂ ರಕ್ತವನ್ನೂ ಅರ್ಪಿಸುವಾಗ ನಿಮ್ಮ ಎಲ್ಲಾ ಅಸಹ್ಯಗಳಿಗೋಸ್ಕರ ನನ್ನ ಒಡಂಬಡಿಕೆಯನ್ನು ಮೀರುವಂಥ ಹೃದಯದಲ್ಲಿಯೂ ಶರೀರದಲ್ಲಿಯೂ ಸುನ್ನತಿಯಿಲ್ಲದಂಥ ಪರಕೀಯರನ್ನು ನನ್ನ ಪರಿಶುದ್ಧ ಸ್ಥಳಕ್ಕೆ ಕರೆತಂದು ನನ್ನ ಆಲಯವನ್ನು ಅಪವಿತ್ರಪಡಿಸಿದಿರಿ.