Ezekiel 45:13 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ನೀವು ಸಮರ್ಪಿಸಙೇಕಾದ ವಿಶೇಷ ಕಾಣಿಕೆಯಿದು: ಒಂದು ಹೋಮೆರ್ ಗೋಊಗೆ 1/6 ಏಫಾ ಗೋಊ ಕೊಡಙೇಕು. ಒಂದು ಹೋಮರ್ ಬಾರ್ಲಿಗೆ 1/6 ಏಫಾ ಬಾರ್ಲಿ ಕೊಡಙೇಕು;
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ನೀವು ನಿಮ್ಮ ದೋಷಪರಿಹಾರಕ್ಕಾಗಿ ಧಾನ್ಯನೈವೇದ್ಯವನ್ನೂ, ಸರ್ವಾಂಗಹೋಮವನ್ನೂ, ಸಮಾಧಾನಯಜ್ಞವನ್ನೂ ಮಾಡುವುದಕ್ಕೋಸ್ಕರ ಸಮರ್ಪಿಸತಕ್ಕದು ಏನೆಂದರೆ ಒಂದು ಹೋಮೆರ್ ಅಳತೆಯ ಗೋದಿಯಲ್ಲಿ ಏಫಾ ಅಳತೆಯ ಆರನೆಯ ಒಂದು ಪಾಲು; ಒಂದು ಹೋಮೆರ್ ಅಳತೆಯ ಜವೆಗೋದಿಯಲ್ಲಿ ಏಫಾ ಅಳತೆಯ ಆರನೆಯ ಒಂದು ಪಾಲು.
Kannada BSI Bible 2016
ನೀವು ಅರ್ಪಿಸಬೇಕಾದ ಕಾಣಿಕೆಗಳು ಗೋಧಿಯ ಹೋಮೆರಿನಲ್ಲಿ ಏಫದ ಆರನೇ ಪಾಲು ಮತ್ತು ಬಾರ್ಲಿಯ ಹೋಮೆರಿನಲ್ಲಿ ಏಫದ ಆರನೇ ಪಾಲನ್ನು ಕೊಡಬೇಕು,
Kannada BSI JV (ಕನ್ನಡ ಸತ್ಯವೇದವು J.V. (BSI))
ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ನೀವು ನಿಮ್ಮ ದೋಷಪರಿಹಾರಕ್ಕಾಗಿ ಧಾನ್ಯ ನೈವೇದ್ಯವನ್ನೂ ಸರ್ವಾಂಗಹೋಮವನ್ನೂ ಸಮಾಧಾನಯಜ್ಞವನ್ನೂ ಮಾಡುವದಕ್ಕೋಸ್ಕರ ಸಮರ್ಪಿಸತಕ್ಕದ್ದೇನಂದರೆ ಒಂದು ಹೋಮೆರ್ ಅಳತೆಯ ಗೋದಿಯಲ್ಲಿ ಏಫಾ ಅಳತೆಯ ಆರನೆಯ ಒಂದು ಪಾಲು; ಒಂದು ಹೋಮೆರ್ ಅಳತೆಯ ಜವೆಗೋದಿಯಲ್ಲಿ ಏಫಾ ಅಳತೆಯ ಆರನೆಯ ಒಂದು ಪಾಲು;
Kannada Bible (KNCL) BSI 2016
ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ: ನೀವು ನಿಮ್ಮ ದೋಷಪರಿಹಾರಕ್ಕಾಗಿ ಧಾನ್ಯನೈವೇದ್ಯವನ್ನೂ ದಹನಬಲಿಯನ್ನೂ ಸಮಾಧಾನ ಬಲಿಯನ್ನೂ ಮಾಡುವುದಕ್ಕಾಗಿ ಸಮರ್ಪಿಸತಕ್ಕದೇನೆಂದರೆ: ಒಂದು ಹೋಮೆರ್ ಅಳತೆಯ ಗೋದಿಯಲ್ಲಿ ಏಫಾ ಅಳತೆಯ ಆರನೆಯ ಒಂದು ಪಾಲು; ಒಂದು ಹೋಮೆರ್ ಅಳತೆಯ ಜವೆಗೋದಿಯಲ್ಲಿ ಏಫಾ ಅಳತೆಯ ಆರನೆಯ ಒಂದು ಪಾಲು;
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ ‘ಇದು ಸಮರ್ಪಿಸಬೇಕಾದ ವಿಶೇಷ ಕಾಣಿಕೆ: ನೀವು ಜವೆಗೋಧಿಯ ಓಮೆರಿನಲ್ಲಿ ಏಫದ ಆರನೆಯ ಪಾಲನ್ನು ಕಾಣಿಕೆಯಾಗಿ ಕೊಡಬೇಕು.