Ezekiel 45:18 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನನ್ನ ಒಡೆಯನಾದ ಯೆಹೋವನು ಇದನ್ನು ಹೇಳಿದ್ದಾನೆ: “ಮೊದಲನೇ ತಿಂಗಳಿನ ಮೊದಲನೇ ದಿವಸದಲ್ಲಿ ಪೂರ್ಣಾಂಗವಾದ ಒಂದು ಎಳೇ ಹೋರಿಯನ್ನು ತೆಗೆದುಕೊಂಡು ಅದನ್ನು ಆಲಯದ ಶುದ್ಧೀಕರಣಕ್ಕಾಗಿ ಉಪಯೋಗಿಸಬೇಕು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ಮೊದಲನೆಯ ತಿಂಗಳಿನ, ಮೊದಲನೆಯ ದಿನದಲ್ಲಿ ನೀವು ಪೂರ್ಣಾಂಗವಾದ ಹೋರಿಯನ್ನು ಆರಿಸಿಕೊಂಡು ಪವಿತ್ರಾಲಯವನ್ನು ಶುದ್ಧೀಕರಿಸಬೇಕು.
Kannada BSI Bible 2016
ದೇವರಾದ ಕರ್ತನು ಹೀಗೆ ಹೇಳುತ್ತಾನೆ-- ಮೊದಲನೇ ತಿಂಗಳಿನ ಮೊದಲನೇ ದಿನದಲ್ಲಿ ನೀನು ಪೂರ್ಣಾಂಗವಾದ ಒಂದು ಎಳೇಹೋರಿಯನ್ನು ತೆಗೆದುಕೊಂಡು ಪರಿಶುದ್ಧ ಸ್ಥಳವನ್ನು ಶುದ್ಧಮಾಡ ಬೇಕು.
Kannada BSI JV (ಕನ್ನಡ ಸತ್ಯವೇದವು J.V. (BSI))
ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ಮೊದಲನೆಯ ತಿಂಗಳಿನ ಮೊದಲನೆಯ ದಿನದಲ್ಲಿ ನೀನು ಪೂರ್ಣಾಂಗವಾದ ಹೋರಿಯನ್ನು ಆರಿಸಿ ಅದರಿಂದ ಪವಿತ್ರಾಲಯವನ್ನು ಶುದ್ಧೀಕರಿಸಬೇಕು.
Kannada Bible (KNCL) BSI 2016
ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ: “ಮೊದಲನೆಯ ತಿಂಗಳಿನ ಮೊದಲನೆಯ ದಿನದಲ್ಲಿ ನೀನು ಕಳಂಕರಹಿತವಾದ ಹೋರಿಯನ್ನು ಆರಿಸಿ ಅದರಿಂದ ಪವಿತ್ರಾಲಯವನ್ನು ಶುದ್ಧೀಕರಿಸಬೇಕು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ, ಮೊದಲನೆಯ ತಿಂಗಳಿನ ಮೊದಲನೆಯ ದಿನದಲ್ಲಿ ನೀನು ಪೂರ್ಣಾಂಗವಾದ ಒಂದು ಎಳೆಯ ಹೋರಿಯನ್ನು ತೆಗೆದುಕೊಂಡು ಪರಿಶುದ್ಧ ಸ್ಥಳವನ್ನು ಶುದ್ಧಮಾಡಬೇಕು.