Ezekiel 45:20 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯಾರಾದರೂ ಆಕಸ್ಮಿಕವಾಗಿ ಅಥವಾ ತಿಳಿಯದೆ ಪಾಪಮಾಡಿದ್ದಲ್ಲಿ, ಹೀಗೆಯೇ ತಿಂಗಳಿನ ಏಳನೇ ದಿವಸದಲ್ಲಿಯೂ ಮಾಡಬೇಕು. ಈ ರೀತಿಯಾಗಿ ಆಲಯವನ್ನು ಶುದ್ಧೀಕರಿಸುವಿರಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅದೇ ಮೇರೆಗೆ ಏಳನೆಯ ತಿಂಗಳಿನ, ಮೊದಲನೆಯ ದಿನದಲ್ಲಿ ನೀನು ಯಜ್ಞಮಾಡಿ, ಯಾರಾದರೂ ಆಕಸ್ಮಾತ್ತಾಗಿ ಮಾಡಿದ ತಪ್ಪಿನಿಂದಾಗಲಿ, ಬುದ್ಧಿಹೀನರ ಅವಿವೇಕದಿಂದಾಗಲಿ ದೇವಾಲಯಕ್ಕೆ ಸಂಭವಿಸಿದ ದೋಷವನ್ನೆಲ್ಲಾ ಪರಿಹರಿಸಬೇಕು.
Kannada BSI Bible 2016
ಈ ಪ್ರಕಾರ ನೀನು ತಿಂಗಳಿನ ಏಳನೇ ದಿನದಲ್ಲಿ ತಪ್ಪಿ ಹೋಗುವ ಎಲ್ಲರಿಗಾಗಿಯೂ ಬುದ್ಧಿ ಹೀನರಿಗಾಗಿಯೂ ಮಾಡಬೇಕು. ಹೀಗೆ ನೀವು ಆಲಯಕ್ಕೋಸ್ಕರವಾಗಿ ಸಮಾಧಾನಪಡಿಸಬೇಕು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅದೇ ಮೇರೆಗೆ ಏಳನೆಯ ತಿಂಗಳಿನ ಮೊದಲನೆಯ ದಿನದಲ್ಲಿ ನೀನು ಯಜ್ಞಮಾಡಿ ಯಾರಾದರೂ ಅಕಸ್ಮಾತ್ತಾಗಿ ಮಾಡಿದ ತಪ್ಪಿನಿಂದಾಗಲಿ ಬುದ್ಧಿಹೀನರ ಅವಿವೇಕದಿಂದಾಗಲಿ ದೇವಾಲಯಕ್ಕೆ ಸಂಭವಿಸಿದ ದೋಷವನ್ನೆಲ್ಲಾ ಪರಿಹರಿಸಬೇಕು.
Kannada Bible (KNCL) BSI 2016
ಅದೇ ಮೇರೆಗೆ ಏಳನೆಯ ತಿಂಗಳಿನ ಮೊದಲನೆಯ ದಿನದಲ್ಲಿ ನೀನು ಬಲಿದಾನಮಾಡಿ ಯಾರಾದರೂ ಅಕಸ್ಮಾತ್ತಾಗಿ ಮಾಡಿದ ತಪ್ಪಿನಿಂದಾಗಲಿ, ಬುದ್ಧಿಹೀನರ ಅವಿವೇಕದಿಂದಾಗಲಿ, ದೇವಾಲಯಕ್ಕೆ ಸಂಭವಿಸಿದ ದೋಷವನ್ನೆಲ್ಲಾ ಪರಿಹರಿಸಬೇಕು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ತಿಳಿಯದೆ ಅಥವಾ ಅಜ್ಞಾನದಿಂದ ಪಾಪಮಾಡುವ ಪ್ರತಿಯೊಬ್ಬರಿಗೂ ತಿಂಗಳ ಏಳನೇ ದಿನದಲ್ಲಿ ನೀವು ಅದೇ ರೀತಿ ಮಾಡಬೇಕು; ಈ ರೀತಿಯಾಗಿ ನೀವು ದೇವಾಲಯಕ್ಕೆ ಪ್ರಾಯಶ್ಚಿತ್ತವನ್ನು ಮಾಡಬೇಕು.