Ezekiel 45:22 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆ ಸಮಯದಲ್ಲಿ ಪ್ರಜೆಯನ್ನಾಳುವ ರಾಜನು ತನಗೋಸ್ಕರವಾಗಿಯೂ ಇಸ್ರೇಲಿನ ಎಲ್ಲಾ ಜನರಿಗೋಸ್ಕರವಾಗಿಯೂ ಒಂದು ಹೋರಿಯನ್ನು ಘಲಿಯರ್ಪಿಸಬೇಕು. ಅದು ಪಾಪಪರಿಹಾರಕಯಜ್ಞಕ್ಕಾಗಿ ಸಮರ್ಪಿಸಲ್ಪಡುವದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆ ದಿನದಲ್ಲಿ ಪ್ರಭುವು ತನ್ನ ನಿಮಿತ್ತವೂ, ದೇಶದ ಜನರೆಲ್ಲರ ನಿಮಿತ್ತವೂ ದೋಷಪರಿಹಾರಕ ಯಜ್ಞಕ್ಕಾಗಿ ಒಂದು ಹೋರಿಯನ್ನು ಒಪ್ಪಿಸಲಿ.
Kannada BSI Bible 2016
ಆ ದಿನದಲ್ಲಿ ಪ್ರಭುವು ತನಗಾಗಿಯೂ ದೇಶದ ಎಲ್ಲಾ ಜನರಿಗಾಗಿಯೂ ಪಾಪಬಲಿಗಾಗಿ ಹೋರಿಯನ್ನು ಸಿದ್ಧಮಾಡಬೇಕು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆ ದಿನದಲ್ಲಿ ಪ್ರಭುವು ತನ್ನ ನಿವಿುತ್ತವೂ ದೇಶದ ಜನರೆಲ್ಲರ ನಿವಿುತ್ತವೂ ದೋಷಪರಿಹಾರಕಯಜ್ಞಕ್ಕಾಗಿ ಒಂದು ಹೋರಿಯನ್ನು ಒಪ್ಪಿಸಲಿ.
Kannada Bible (KNCL) BSI 2016
ಆ ದಿನದಲ್ಲಿ ರಾಜನು ತನ್ನ ನಿಮಿತ್ತ ಹಾಗು ನಾಡಿನ ಜನರೆಲ್ಲರ ನಿಮಿತ್ತ ದೋಷಪರಿಹಾರಕಬಲಿಗಾಗಿ ಒಂದು ಹೋರಿಯನ್ನು ಒಪ್ಪಿಸಲಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆ ದಿನದಲ್ಲಿ ಪ್ರಭುವು ತನಗಾಗಿಯೂ ದೇಶದ ಎಲ್ಲಾ ಜನರಿಗಾಗಿಯೂ ದೋಷಪರಿಹಾರ ಬಲಿಗಾಗಿ ಹೋರಿಯನ್ನು ಸಿದ್ಧಮಾಡಬೇಕು.