Ezekiel 45:24 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ರಾಜನು ಧಾನ್ಯಸಮರ್ಪಣೆಗಾಗಿ ಒಂದು ಏಫಾ ಜವೆಗೋಊಯನ್ನು ಹೋರಿಯೊಂದಿಗೂ ಒಂದು ಏಫಾ ಜವೆಗೋಊಯನ್ನು ಟಗರಿನೊಂದಿಗೂ ಕೊಡಙೇಕು. ಅದರೊಂದಿಗೆ ರಾಜನು ಪ್ರತೀ ಒಂದು ಏಫಾ ಜವೆಗೋಊಯೊಂದಿಗೆ ಒಂದು ಹಿನ್ ಎಣ್ಣೆಯನ್ನೂ ಕೊಡಬೇಕು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇದಲ್ಲದೆ ಒಂದೊಂದು ಹೋರಿಯ ಮತ್ತು ಟಗರಿನ ಸಂಗಡ ಮೂವತ್ತು ಸೇರು ಗೋದಿಹಿಟ್ಟನ್ನೂ, ಆರಾರು ಸೇರು ಎಣ್ಣೆಯನ್ನೂ ಧಾನ್ಯನೈವೇದ್ಯಕ್ಕಾಗಿ ಒಪ್ಪಿಸಬೇಕು.
Kannada BSI Bible 2016
ಅವನು ಹೋರಿಗೆ ಒಂದು ಏಫ, ಟಗರಿಗೆ ಒಂದು ಏಫ, ಈ ಪ್ರಕಾರ ಆಹಾರ ಅರ್ಪಣೆಯನ್ನೂ, ಏಫಕ್ಕೆ ಒಂದು ಹಿನ್ನು ಎಣ್ಣೆಯನ್ನೂ ಸಿದ್ಧಮಾಡಬೇಕು.ಏಳನೇ ತಿಂಗಳಿನ ಹದಿನೈದನೇ ದಿನದಲ್ಲಿ ಏಳು ದಿವಸಗಳ ಹಬ್ಬದಲ್ಲಿ ಅವನು ಪಾಪಬಲಿಯ ವಿಷಯವಾಗಿಯೂ ದಹನಬಲಿಯ ವಿಷಯವಾಗಿಯೂ ಆಹಾರದ ಅರ್ಪಣೆಯ ವಿಷಯ ವಾಗಿಯೂ ಎಣ್ಣೆಯ ವಿಷಯವಾಗಿಯೂ ಇದೇ ರೀತಿ ಮಾಡಬೇಕು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇದಲ್ಲದೆ ಒಂದೊಂದು ಹೋರಿಯ ಮತ್ತು ಟಗರಿನ ಸಂಗಡ ಮೂವತ್ತು ಮೂವತ್ತು ಸೇರು [ಗೋದಿ ಹಿಟ್ಟನ್ನೂ] ಆರಾರು ಸೇರು ಎಣ್ಣೆಯನ್ನೂ ಧಾನ್ಯನೈವೇದ್ಯಕ್ಕಾಗಿ ಒಪ್ಪಿಸಬೇಕು.
Kannada Bible (KNCL) BSI 2016
ಇದಲ್ಲದೆ ಒಂದೊಂದು ಹೋರಿಯ ಮತ್ತು ಟಗರಿನ ಸಂಗಡ ಮೂವತ್ತು ಮೂವತ್ತು ಸೇರು ಗೋದಿಹಿಟ್ಟನ್ನೂ ಆರಾರು ಸೇರು ಎಣ್ಣೆಯನ್ನೂ ಧಾನ್ಯ ನೈವೇದ್ಯಕ್ಕಾಗಿ ಒಪ್ಪಿಸಬೇಕು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವನು ಒಂದೊಂದು ಹೋರಿಗೆ ಮತ್ತು ಟಗರಿಗೆ ಐದು ಕಿಲೋಗ್ರಾಂ ಗೋಧಿಹಿಟ್ಟನ್ನೂ ಸುಮಾರು ಮೂರುವರೆ ಲೀಟರ್ ಎಣ್ಣೆಯನ್ನು ಧಾನ್ಯ ಸಮರ್ಪಣೆಯಾಗಿ ಅರ್ಪಿಸಬೇಕು.