Ezekiel 45:25 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಪರ್ಣಶಾಲೆಗಳ ಹಬ್ಬದ ಏಳು ದಿವಸಗಳಲ್ಲೂ ರಾಜನು ಹಾಗೆಯೇ ಮಾಡಬೇಕು. ಈ ಹಬ್ಬವು ಏಳನೇ ತಿಂಗಳಿನ ಹದಿನೈದನೇ ದಿವಸದಲ್ಲಿ ಪ್ರಾರಂಭವಾಗುವದು. ಈ ಕಾಣಿಕೆಯು ಸರ್ವಾಂಗಹೋಮ, ಪಾಪಪರಿಹಾರಕಯಜ್ಞ, ಧಾನ್ಯಸಮರ್ಪಣೆ ಮತ್ತು ಎಣ್ಣೆಯ ಸಮರ್ಪಣೆಗಳಿಗಾಗಿ ಅವೆ.”
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ಏಳನೆಯ ತಿಂಗಳಿನ ಹದಿನೈದನೆಯ ದಿನದಲ್ಲಿ ಪ್ರಾರಂಭವಾಗುವ ಹಬ್ಬದ ಏಳು ದಿನಗಳಲ್ಲಿಯೂ ಅವನು ದೋಷಪರಿಹಾರಕ ಯಜ್ಞಪಶು, ಸರ್ವಾಂಗಹೋಮ ಪಶು, ಧಾನ್ಯನೈವೇದ್ಯ ಎಣ್ಣೆ, ಇವುಗಳನ್ನು ಅದೇ ಕ್ರಮದಂತೆ ಕೊಡಬೇಕು.”
Kannada BSI Bible 2016
ಏಳನೇ ತಿಂಗಳಿನ ಹದಿನೈದನೇ ದಿನದಲ್ಲಿ ಏಳು ದಿವಸಗಳ ಹಬ್ಬದಲ್ಲಿ ಅವನು ಪಾಪಬಲಿಯ ವಿಷಯವಾಗಿಯೂ ದಹನಬಲಿಯ ವಿಷಯವಾಗಿಯೂ ಆಹಾರದ ಅರ್ಪಣೆಯ ವಿಷಯ ವಾಗಿಯೂ ಎಣ್ಣೆಯ ವಿಷಯವಾಗಿಯೂ ಇದೇ ರೀತಿ ಮಾಡಬೇಕು.
Kannada BSI JV (ಕನ್ನಡ ಸತ್ಯವೇದವು J.V. (BSI))
ಏಳನೆಯ ತಿಂಗಳಿನ ಹದಿನೈದನೆಯ ದಿವಸದಲ್ಲಿ ಪ್ರಾರಂಭವಾಗುವ ಹಬ್ಬದ ಏಳು ದಿವಸಗಳಲ್ಲಿಯೂ ಅವನು ದೋಷಪರಿಹಾರಕಯಜ್ಞಪಶು, ಸರ್ವಾಂಗಹೋಮಪಶು, ಧಾನ್ಯನೈವೇದ್ಯ, ಎಣ್ಣೆ, ಇವುಗಳನ್ನು ಅದೇ ಕ್ರಮದಂತೆ ಕೊಡಬೇಕು.
Kannada Bible (KNCL) BSI 2016
“ಏಳನೆಯ ತಿಂಗಳಿನ ಹದಿನೈದನೆಯ ದಿವಸದಲ್ಲಿ ಪ್ರಾರಂಭವಾಗುವ ಹಬ್ಬದ ಏಳು ದಿವಸಗಳಲ್ಲಿಯೂ ಅವನು ದೋಷಪರಿಹಾರಕಬಲಿಪ್ರಾಣಿ, ದಹನಬಲಿಪ್ರಾಣಿ, ಧಾನ್ಯನೈವೇದ್ಯ, ಎಣ್ಣೆ, ಇವುಗಳನ್ನು ಅದೇ ಕ್ರಮದಂತೆ ಕೊಡಬೇಕು.”
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ ‘ಏಕೆಂದರೆ ತಿಂಗಳಿನ ಹದಿನೈದನೆಯ ದಿವಸದಲ್ಲಿ ಪ್ರಾರಂಭವಾಗುವ ಹಬ್ಬದ ಏಳು ದಿವಸಗಳಲ್ಲಿಯೂ ಅವನು ದೋಷಪರಿಹಾರಕ ಬಲಿಪ್ರಾಣಿ, ದಹನಬಲಿಪ್ರಾಣಿ, ಧಾನ್ಯ ಸಮರ್ಪಣೆ, ಎಣ್ಣೆ ಇವುಗಳನ್ನು ಅದೇ ಕ್ರಮದಂತೆ ಕೊಡಬೇಕು.