Ezekiel 45:7 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅಧಿಪತಿಗೆ ಪವಿತ್ರ ಪ್ರದೇಶ ಭಾಗದ ಎರಡು ಕಡೆಗಳಲ್ಲೂ ಭೂಭಾಗಗಳಿರುವುದು. ಅಂದರೆ ಪವಿತ್ರ ಪ್ರದೇಶಕ್ಕೆ ಪಶ್ಚಿಮದಲ್ಲಿರುವ ಪಶ್ಚಿಮ ಭಾಗ ಮತ್ತು ಇಸ್ರೇಲರ ಪಟ್ಟಣದ ಪೂರ್ವ ಭೂಭಾಗ. ಇದು ಪವಿತ್ರ ಪ್ರದೇಶದ ಪೂರ್ವಭಾಗದಲ್ಲಿದೆ. ಅಊಪತಿಯ ಪಶ್ಚಿಮ ಭಾಗವು ಪವಿತ್ರ ಪ್ರದೇಶ ಭಾಗದ ಪಶ್ಚಿಮದ ಅಂಚಿನಿಂದ ಮೆಡಿಟರೇನಿಯನ್ ಸಮುದ್ರದವರೆಗೂ ವಿಸ್ತರಿಸಿದೆ. ಅಊಪತಿಯ ಪೂರ್ವ ಪ್ರದೇಶ ಭಾಗವು ಪೂರ್ವದಿಕ್ಕಿನ ಪಟ್ಟಣದ ಅಂಚಿನಿಂದ ಪೂರ್ವದ ಗಡಿಯವರೆಗೂ ವಿಸ್ತರಿಸಿದೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ರಾಜನ ಸ್ವತ್ತು ನೀವು ಮೀಸಲಾಗಿ ಸಮರ್ಪಿಸುವ ಕ್ಷೇತ್ರಕ್ಕೂ, ಪಟ್ಟಣಕ್ಕೆ ಒಳಪಟ್ಟ ಭೂಮಿಗೂ ಎರಡು ಕಡೆಗಳಲ್ಲಿರುವುದು; ನೀವು ಮೀಸಲಾಗಿ ಸಮರ್ಪಿಸುವ ಕ್ಷೇತ್ರದ ಮತ್ತು ಪಟ್ಟಣಕ್ಕೆ ಒಳಪಟ್ಟ ಭೂಮಿಯ ಪಶ್ಚಿಮ ಕಡೆಯಲ್ಲಿ ಹರಡುವುದು, ಪೂರ್ವದಿಂದ ಪೂರ್ವಕ್ಕೂ ಹರಡುವುದು, ಅದರ ಉದ್ದವು ಪಶ್ಚಿಮದಿಂದ ಪೂರ್ವಕ್ಕೂ ಒಂದು ಕುಲದ ಸ್ವತ್ತಿನ ಉದ್ದಕ್ಕೆ ಸರಿಸಮಾನವಾಗಿರುವುದು.
Kannada BSI Bible 2016
ಕಾಣಿಕೆಯಾದ ಪರಿಶುದ್ಧ ಭಾಗಕ್ಕೂ ನಗರದ ಸ್ವಾಸ್ತ್ಯಕ್ಕೂ ಈ ಕಡೆಯಲ್ಲಿಯೂ ಆ ಕಡೆಯಲ್ಲಿಯೂ ಕಾಣಿಕೆಯಾದ ಪರಿಶುದ್ಧ ಭಾಗದ ಮುಂದೆಯೂ ಪಟ್ಟಣದ ಸ್ವಾಸ್ತ್ಯದ ಮುಂದೆಯೂ ಅದರ ಪಶ್ಚಿಮದ ಕಡೆಯಲ್ಲಿ ಪಶ್ಚಿಮಕ್ಕೂ ಅದರ ಪೂರ್ವದ ಕಡೆಯಲ್ಲಿ ಪೂರ್ವಕ್ಕೂ ಪ್ರಭುವಿಗೆ ಪಾಲು ಇರಬೇಕು; ಅದರ ಉದ್ದವು ಭಾಗಗಳಲ್ಲಿ ಒಂದಕ್ಕೆ ಎದುರಾಗಿ, ಪಶ್ಚಿಮ ಮೇರೆ ಮೊದಲುಗೊಂಡು ಪೂರ್ವ ಮೇರೆಯ ತನಕ ಇರಬೇಕು.
Kannada BSI JV (ಕನ್ನಡ ಸತ್ಯವೇದವು J.V. (BSI))
ಪ್ರಭುವಿನ ಸ್ವಾಸ್ತ್ಯವು ನೀವು ಮೀಸಲಾಗಿ ಸಮರ್ಪಿಸುವ ಕ್ಷೇತ್ರಕ್ಕೂ ರಾಜಧಾನಿಗೆ ಒಳಪಟ್ಟ ಭೂವಿುಗೂ ಉಭಯಪಾರ್ಶ್ವಗಳಲ್ಲಿರುವದು; ನೀವು ಮೀಸಲಾಗಿ ಸಮರ್ಪಿಸುವ ಕ್ಷೇತ್ರದ ಮತ್ತು ರಾಜಧಾನಿಗೆ ಒಳಪಟ್ಟ ಭೂವಿುಯ ಪಡುವಲಲ್ಲಿ ಅದು ಪಡುವಲಿಗೆ ಹರಡುವದು, ಮೂಡಲಲ್ಲಿ ಮೂಡಲಿಗೆ ಹರಡುವದು, ಅದರ ಉದ್ದವು ಪಡುವಲಿಂದ ಮೂಡಲಿಗೆ ಒಂದು ಕುಲದ ಸ್ವಾಸ್ತ್ಯದ ಉದ್ದಕ್ಕೆ ಸರಿಸಮಾನವಾಗಿರುವದು.
Kannada Bible (KNCL) BSI 2016
ರಾಜನ ಸೊತ್ತು ನೀವು ಮೀಸಲಾಗಿ ಸಮರ್ಪಿಸುವ ಕ್ಷೇತ್ರದ ಮತ್ತು ರಾಜಧಾನಿಗೆ ಒಳಪಟ್ಟ ಭೂಮಿಗೂ ಉಭಯ ಪಾರ್ಶ್ವಗಳಲ್ಲಿರುವುದು; ನೀವು ಮೀಸಲಾಗಿ ಸಮರ್ಪಿಸುವ ಕ್ಷೇತ್ರದ ಮತ್ತು ರಾಜಧಾನಿಗೆ ಒಳಪಟ್ಟ ಭೂಮಿಯ ಪಶ್ಚಿಮದಲ್ಲಿ ಅದು ಪಶ್ಚಿಮ ಕಡೆಗೆ ಹರಡುವುದು. ಪೂರ್ವದಲ್ಲಿ ಪೂರ್ವದ ಕಡೆಗೆ ಹರಡುವುದು. ಅದರ ಉದ್ದ ಪಶ್ಚಿಮದಿಂದ ಪೂರ್ವಕ್ಕೆ ಒಂದು ಕುಲದ ಸೊತ್ತಿನ ಉದ್ದಕ್ಕೆ ಸರಿಸಮಾನವಾಗಿರುವುದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ ‘ಕಾಣಿಕೆಯಾದ ಪರಿಶುದ್ಧಭಾಗದ ಮುಂದೆಯೂ ಪಟ್ಟಣದ ಸೊತ್ತಿನ ಮುಂದೆಯೂ ಅದರ ಪಶ್ಚಿಮದ ಕಡೆಯಲ್ಲಿ ಪಶ್ಚಿಮಕ್ಕೂ ಅದರ ಪೂರ್ವದ ಕಡೆಯಲ್ಲಿ ಪೂರ್ವಕ್ಕೂ ಪ್ರಭುವಿಗೆ ಪಾಲು ಇರಬೇಕು. ಅದರ ಉದ್ದವು ಭಾಗಗಳಲ್ಲಿ ಒಂದಕ್ಕೆ ಎದುರಾಗಿ, ಪಶ್ಚಿಮ ಮೇರೆ ಮೊದಲುಗೊಂಡು ಪೂರ್ವ ಮೇರೆಯ ತನಕ ಒಂದು ಗೋತ್ರದ ಸ್ವಾಸ್ತ್ಯದ ಉದ್ದಕ್ಕೆ ಸರಿಸಮಾನವಾಗಿರುವುದು.