Ezekiel 45:8 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಭೂಪ್ರದೇಶದ ಈ ಭಾಗವು ಅಊಪತಿಗೆ ಸೇರಿದೆ. ಹೀಗೆ, ಹಿಂದಿನ ಕಾಲದ ಅಊಪತಿಗಳು ಮಾಡಿದಂತೆ ಈ ಅಊಪತಿಯು ಜನರನ್ನು ಹಿಂಸಿಸಿ ಅವರ ಭೂಮಿಯನ್ನು ಕಸಿದುಕೊಳ್ಳುವುದಿಲ್ಲ. ಉಳಿದ ಭೂಭಾಗವು ಇಸ್ರೇಲಿನ ಇತರ ಕುಲಗಳವರಿಗೆ ಯಾವಾಗಲೂ ಸೇರಿರುತ್ತದೆ.”
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅದು ಅವನಿಗೆ ಇಸ್ರಾಯೇಲಿನಲ್ಲಿ ಭೂಸ್ವಾಸ್ತ್ಯವಾಗುವುದು; ಇನ್ನು ಮೇಲೆ ನನ್ನ ಪ್ರಭುಗಳು ನನ್ನ ಪ್ರಜೆಗಳನ್ನು ಹಿಂಸಿಸುವುದಿಲ್ಲ; ದೇಶದ ಭೂಮಿಯನ್ನು ಇಸ್ರಾಯೇಲರಿಗೆ ಕುಲಕ್ಕೆ ತಕ್ಕಂತೆ ಹಂಚುವರು.
Kannada BSI Bible 2016
ಈ ಭೂಮಿಯು ಅವನಿಗೆ ಇಸ್ರಾಯೇಲಿನಲ್ಲಿ ಸ್ವಾಸ್ತ್ಯವಾಗಿರುವದು; ಆಗ ನನ್ನ ಪ್ರಭುಗಳು ನನ್ನ ಜನರನ್ನು ಉಪದ್ರವಪಡಿಸು ವದೇ ಇಲ್ಲ; ಉಳಿದ ಭೂಮಿಯನ್ನು ಇಸ್ರಾಯೇಲಿನ ಮನೆತನದವರಿಗೆ ಅವರ ಗೋತ್ರಗಳ ಅನುಸಾರವಾಗಿ ಕೊಡಲ್ಪಡುವದು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅದು ಅವನಿಗೆ ಇಸ್ರಾಯೇಲಿನಲ್ಲಿ ಭೂಸ್ವಾಸ್ತ್ಯವಾಗುವದು; ಇನ್ನು ಮೇಲೆ ಪ್ರಭುಗಳು ನನ್ನ ಪ್ರಜೆಗಳನ್ನು ಹಿಂಸಿಸರು; ದೇಶದ ಭೂವಿುಯನ್ನು ಇಸ್ರಾಯೇಲ್ಯರಿಗೆ ಕುಲಕುಲಕ್ಕೂ ಹಂಚುವರು.
Kannada Bible (KNCL) BSI 2016
ಅದು ಅವನಿಗೆ ಇಸ್ರಯೇಲಿನಲ್ಲಿ ಭೂಸೊತ್ತಾಗುವುದು; ಇನ್ನು ಮೇಲೆ ರಾಜರುಗಳು ನನ್ನ ಪ್ರಜೆಗಳನ್ನು ಹಿಂಸಿಸರು; ನಾಡಿನ ಭೂಮಿಯನ್ನು ಇಸ್ರಯೇಲರಿಗೆ ಕುಲಕುಲಕ್ಕೂ ಹಂಚುವರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಈ ಭೂಮಿಯು ಅವನಿಗೆ ಇಸ್ರಾಯೇಲಿನಲ್ಲಿ ಸೊತ್ತಾಗಿರುವುದು. ಆಗ ನನ್ನ ಪ್ರಭುಗಳು ನನ್ನ ಜನರನ್ನು ಉಪದ್ರವ ಪಡಿಸುವುದೇ ಇಲ್ಲ. ಉಳಿದ ಭೂಮಿಯನ್ನು ಇಸ್ರಾಯೇಲಿನ ಮನೆತನದವರಿಗೆ ಅವರ ಗೋತ್ರಗಳ ಅನುಸಾರವಾಗಿ ಕೊಡಲಾಗುವುದು.