Ezekiel 45:9 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಇದು ನನ್ನ ಒಡೆಯನಾದ ಯೆಹೋವನ ನುಡಿಗಳು: “ಇಸ್ರೇಲ್ ಜನರನ್ನು ಆಳುವವರೇ, ಅವರನ್ನು ಕಠಿಣವಾಗಿ ಆಳುವದನ್ನು ನಿಲ್ಲಿಸಿರಿ. ಅವರನ್ನು ಸುಲುಕೊಳ್ಳುವದನ್ನು ನಿಲ್ಲಿಸಿರಿ. ನ್ಯಾಯದಿಂದಿದ್ದು ಒಳ್ಳೆಯದನ್ನೆ ಮಾಡಿರಿ. ಅವರನ್ನು ಅವರ ಮನೆಗಳಿಂದ ಹೊರಡಿಸುವದನ್ನು ನಿಲ್ಲಿಸಿರಿ.” ಇದು ನನ್ನ ಒಡೆಯನಾದ ಯೆಹೋವನ ನುಡಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ಇಸ್ರಾಯೇಲಿನ ಪ್ರಭುಗಳೇ, ಇನ್ನು ಸಾಕು, ಕೊಳ್ಳೆಯನ್ನೂ ಬಲಾತ್ಕಾರವನ್ನೂ ತ್ಯಜಿಸಿ, ನೀತಿನ್ಯಾಯಗಳನ್ನು ನಡೆಸಿರಿ. ನನ್ನ ಜನರ ಬಾಧ್ಯತೆಗಳನ್ನು ತಪ್ಪಿಸುವ ಅನ್ಯಾಯವನ್ನು ಬಿಟ್ಟುಬಿಡಿರಿ. ಇದು ಕರ್ತನಾದ ಯೆಹೋವನ ನುಡಿ.
Kannada BSI Bible 2016
ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಓ ಇಸ್ರಾಯೇಲಿನ ಪ್ರಭುಗಳೇ, ನೀವು ಸಾಕುಮಾಡಿರಿ, ಬಲಾತ್ಕಾರವನ್ನು ಸುಲಿಗೆಯನ್ನು ಬಿಡಿರಿ; ನ್ಯಾಯವನ್ನೂ ನೀತಿಯನ್ನೂ ಮಾಡಿರಿ; ನನ್ನ ಜನರನ್ನು ಓಡಿಸಬೇಡಿರಿ ಎಂದು ದೇವರಾದ ಕರ್ತನು ಹೇಳುತ್ತಾನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ಇಸ್ರಾಯೇಲಿನ ಪ್ರಭುಗಳೇ, ಇನ್ನು ಸಾಕು, ಸಾಕು; ಕೊಳ್ಳೆಯನ್ನೂ ಬಲಾತ್ಕಾರವನ್ನೂ ತ್ಯಜಿಸಿ ನೀತಿನ್ಯಾಯಗಳನ್ನು ನಡಿಸಿರಿ; ನನ್ನ ಜನರ ಬಾಧ್ಯತೆಗಳನ್ನು ತಪ್ಪಿಸುವ ಅನ್ಯಾಯವನ್ನು ಬಿಟ್ಟುಬಿಡಿರಿ; ಇದು ಕರ್ತನಾದ ಯೆಹೋವನ ನುಡಿ,
Kannada Bible (KNCL) BSI 2016
ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ::ಇಸ್ರಯೇಲಿನ ರಾಜರುಗಳೇ, ಇನ್ನು ಸಾಕು, ಸಾಕು; ಕೊಳ್ಳೆಯನ್ನೂ ಹಿಂಸಾಚಾರವನ್ನೂ ತ್ಯಜಿಸಿ ನೀತಿನ್ಯಾಯಗಳನ್ನು ನಡೆಸಿರಿ; ನನ್ನ ಜನರ ಬಾಧ್ಯತೆಗಳನ್ನು ತಪ್ಪಿಸುವ ಅನ್ಯಾಯವನ್ನು ಬಿಟ್ಟುಬಿಡಿ; ಇದು ಸರ್ವೇಶ್ವರನಾದ ದೇವರ ನುಡಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ಇಸ್ರಾಯೇಲಿನ ಪ್ರಭುಗಳೇ, ನೀವು ಸಾಕುಮಾಡಿರಿ, ಬಲಾತ್ಕಾರವನ್ನೂ ಸುಲಿಗೆಯನ್ನೂ ಬಿಡಿರಿ. ನ್ಯಾಯವನ್ನೂ ನೀತಿಯನ್ನೂ ನಡೆಸಿರಿ. ನನ್ನ ಜನರನ್ನು ಓಡಿಸಬೇಡಿರಿ ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.