Ezekiel 46:1 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನನ್ನ ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ: “ಒಳಗಿನ ಪ್ರಾಕಾರದ ಪೂರ್ವ ದಿಕ್ಕಿನ ದ್ವಾರವು ಆರು ಕೆಲಸದ ದಿವಸಗಳಲ್ಲಿ ಮುಚ್ಚಲ್ಪಡುವದು. ಅದು ಸಬ್ಬತ್ ದಿವಸಗಳಲ್ಲಿಯೂ ಅಮಾವಾಸ್ಯೆಯ ದಿವಸಗಳಲ್ಲಿಯೂ ತೆರೆಯಲ್ಪಡುವದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ವಾರದೊಳಗೆ ಕೆಲಸ ಮಾಡುವ ಆರು ದಿನಗಳಲ್ಲಿ ಒಳಗಿನ ಅಂಗಳದ ಪೂರ್ವದಿಕ್ಕಿನ ಹೆಬ್ಬಾಗಿಲನ್ನು ಮುಚ್ಚಿರಬೇಕು. ಅದನ್ನು ಸಬ್ಬತ್ ದಿನದಲ್ಲಿಯೂ, ಅಮಾವಾಸ್ಯೆಯಲ್ಲಿಯೂ ತೆರೆದಿರಬೇಕು.
Kannada BSI Bible 2016
ದೇವರಾದಕರ್ತನು ಹೀಗೆ ಹೇಳುತ್ತಾನೆ--ಒಳಗಿನ ಅಂಗಳದ ಪೂರ್ವದಿಕ್ಕಿಗೆ ಎದುರಾಗಿರುವ ಬಾಗಲು ಕೆಲಸ ನಡೆಯುವ ಆರು ದಿವಸಗಳಲ್ಲಿ ಮುಚ್ಚಲ್ಪಡಬೇಕು; ಆದರೆ ಸಬ್ಬತ್ ದಿವಸದಲ್ಲಿ ಅದು ತೆರೆಯಲ್ಪಡಬೇಕು, ಅಮಾವಾಸ್ಯೆಯ ದಿನದಲ್ಲೂ ಅದು ತೆರೆಯಲ್ಪಡಬೇಕು.
Kannada BSI JV (ಕನ್ನಡ ಸತ್ಯವೇದವು J.V. (BSI))
ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ವಾರದೊಳಗೆ ಕೆಲಸನಡೆಯುವ ಆರು ದಿವಸಗಳಲ್ಲಿ ಒಳಗಣ ಪ್ರಾಕಾರದ ಮೂಡಲ ಹೆಬ್ಬಾಗಿಲು ಮುಚ್ಚಿರಬೇಕು; ಆದರೆ ಸಬ್ಬತ್ ದಿನದಲ್ಲಿಯೂ ಅಮಾವಾಸ್ಯೆಯಲ್ಲಿಯೂ ತೆರೆದಿರಬೇಕು.
Kannada Bible (KNCL) BSI 2016
ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ: “ವಾರದೊಳಗೆ ಕೆಲಸ ನಡೆಯುವ ಆರು ದಿವಸಗಳಲ್ಲಿ ಒಳಗಿನ ಪ್ರಾಕಾರದ ಪೂರ್ವ ಹೆಬ್ಬಾಗಿಲು ಮುಚ್ಚಿರಬೇಕು; ಆದರೆ ಸಬ್ಬತ್ ದಿನದಲ್ಲೂ ಅಮಾವಾಸ್ಯೆಯಲ್ಲೂ ತೆರೆದಿರಬೇಕು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ಒಳಗಿನ ಅಂಗಳದ ಪೂರ್ವದಿಕ್ಕಿನ ಎದುರಾಗಿರುವ ಬಾಗಿಲು ಕೆಲಸ ನಡೆಯುವ ಆರು ದಿವಸಗಳಲ್ಲಿ ಮುಚ್ಚಲಾಗಬೇಕು. ಆದರೆ ಸಬ್ಬತ್ ದಿನದಲ್ಲಿ ಅದು ತೆರೆದಿರಬೇಕು. ಅಮಾವಾಸ್ಯೆಯ ದಿನದಲ್ಲೂ ಅದು ತೆರೆದಿರಬೇಕು.