Ezekiel 46:14 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಪ್ರತಿ ಮುಂಜಾನೆ ನೀನು ಐದು ಸೇರು ಗೋಊಹಿಟ್ಟನ್ನೂ ಎರಡು ಸೇರು ಎಣ್ಣೆಯನ್ನೂ ಒಟ್ಟಾಗಿ ಬೆರೆಸಿ ಪ್ರತಿದಿನ ಯೆಹೋವನಿಗೆ ಧಾನ್ಯ ನೈವೇದ್ಯವಾಗಿ ಸಮರ್ಪಿಸಬೇಕು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅದರೊಂದಿಗೆ ಪ್ರತಿ ದಿನ ಬೆಳಗ್ಗೆ ಧಾನ್ಯ ನೈವೇದ್ಯವಾಗಿ ಐದು ಸೇರು ಗೋದಿಹಿಟ್ಟನ್ನೂ, ಅದನ್ನು ಕಲಸುವುದಕ್ಕೆ ಎರಡು ಸೇರು ಎಣ್ಣೆಯನ್ನೂ ನೀನು ಸಮರ್ಪಿಸಬೇಕು. ಇವುಗಳನ್ನು ಪ್ರತಿನಿತ್ಯವೂ ಯೆಹೋವನಿಗೆ ಧಾನ್ಯನೈವೇದ್ಯವಾಗಿ ಅರ್ಪಿಸತಕ್ಕದ್ದು. ಇದು ಶಾಶ್ವತ ನಿಯಮವಾಗಿದೆ.
Kannada BSI Bible 2016
ಅದಕ್ಕೆ ಅರ್ಪಣೆಯಾಗಿ ಪ್ರತಿದಿನದ ಮುಂಜಾನೆಯಲ್ಲಿ ನೀನು ಏಫದ ಆರನೇ ಪಾಲನ್ನು ಗೋಧಿ ಹಿಟ್ಟಿನಲ್ಲಿ ಕಲಿಸುವ ಹಾಗೆ ಎಣ್ಣೆಯ ಹಿನ್ನಿನಲ್ಲಿ ಮೂರನೇ ಪಾಲನ್ನು ಸಿದ್ಧಮಾಡಬೇಕು. ಇದು ಕರ್ತನಿಗೆ ನಿತ್ಯನಿಯಮದ ಪ್ರಕಾರ ಎಡೆಬಿಡದೆ ಆಹಾರದ ಅರ್ಪಣೆಯಾಗಿದೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಅದರೊಂದಿಗೆ ಪ್ರತಿದಿನ ಬೆಳಿಗ್ಗೆ ಧಾನ್ಯನೈವೇದ್ಯವಾಗಿ ಐದು ಸೇರು ಗೋದಿಹಿಟ್ಟನ್ನೂ ಅದನ್ನು ನೆನೆಯಿಸುವದಕ್ಕೆ ಎರಡು ಸೇರು ಎಣ್ಣೆಯನ್ನೂ ನೀನು ಸಮರ್ಪಿಸಬೇಕು; ಇವುಗಳನ್ನು ಪ್ರತಿನಿತ್ಯವೂ ಯೆಹೋವನಿಗೆ ಧಾನ್ಯನೈವೇದ್ಯವಾಗಿ ಅರ್ಪಿಸತಕ್ಕದ್ದು; ಇದು ಶಾಶ್ವತನಿಯಮ.
Kannada Bible (KNCL) BSI 2016
ಅದರೊಂದಿಗೆ ಪ್ರತಿದಿನ ಬೆಳಿಗ್ಗೆ ಧಾನ್ಯನೈವೇದ್ಯವಾಗಿ ಐದು ಸೇರು ಗೋದಿಹಿಟ್ಟನ್ನೂ ಅದನ್ನು ನೆನೆಯಿಸುವುದಕ್ಕೆ ಎರಡು ಸೇರು ಎಣ್ಣೆಯನ್ನೂ ನೀನು ಸಮರ್ಪಿಸಬೇಕು; ಇವುಗಳನ್ನು ಪ್ರತಿನಿತ್ಯವೂ ಸರ್ವೇಶ್ವರನಿಗೆ ಧಾನ್ಯನೈವೇದ್ಯವಾಗಿ ಅರ್ಪಿಸತಕ್ಕದ್ದು; ಇದು ಶಾಶ್ವತ ನಿಯಮ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅದಕ್ಕೆ ಅರ್ಪಣೆಯಾಗಿ ಪ್ರತಿದಿನದ ಮುಂಜಾನೆಯಲ್ಲಿ ನೀನು ಸುಮಾರು ಎರಡುವರೆ ಕಿಲೋಗ್ರಾಂ ಗೋಧಿ ಹಿಟ್ಟಿನಲ್ಲಿ ಕಲಿಸುವ ಹಾಗೆ ಸುಮಾರು ಒಂದುವರೆ ಲೀಟರ್ ಎಣ್ಣೆಯನ್ನು ಸಿದ್ಧಮಾಡಬೇಕು. ಇದು ಯೆಹೋವ ದೇವರಿಗೆ ನಿತ್ಯನಿಯಮದ ಪ್ರಕಾರ ಎಡೆಬಿಡದ ಧಾನ್ಯ ಸಮರ್ಪಣೆಯಾಗಿದೆ.