Ezekiel 46:18 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ರಾಜನು ತನ್ನ ಪ್ರಜೆಯ ಭೂಮಿಯನ್ನು ತನ್ನ ಉಪಯೋಗಕ್ಕೆಂದು ಘಲತ್ಕಾರದಿಂದ ಇಟ್ಟುಕೊಳ್ಳಬಾರದು ಅಥವಾ ತೆಗೆದುಕೊಳ್ಳಲೂಬಾರದು. ತನ್ನ ಸಬಂತ ಭೂಮಿಯಿಂದ ಪಾಲನ್ನು ತನ್ನ ಮಕ್ಕಳಿಗೆ ಕೊಡಙೇಕು. ಹೀಗೆ ನನ್ನ ಜನರು ತಮ್ಮ ಭೂಮಿಯನ್ನು ಕಳೆದುಕೊಳ್ಳುವದಿಲ್ಲ.”
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇದಲ್ಲದೆ ಅರಸನು ಪ್ರಜೆಗಳ ಪಿತ್ರಾರ್ಜಿತ ಭೂಮಿಯನ್ನು ಸ್ವಾಧೀನ ಮಾಡಿಕೊಂಡು ಅವರ ಬಾಧ್ಯತೆಯನ್ನು ತಪ್ಪಿಸಬಾರದು. ಸ್ವಂತ ಭೂಮಿಯನ್ನೇ ವಿಭಾಗಿಸಿ ತನ್ನ ಮಕ್ಕಳಿಗೆ ಪಾಲುಕೊಡಲಿ. ಇಲ್ಲವಾದರೆ ನನ್ನ ಪ್ರಜೆಯಲ್ಲಿ ಪ್ರತಿಯೊಬ್ಬನೂ ತನ್ನ ತನ್ನ ಭೂಸ್ಥಿತಿಯನ್ನು ಕಳೆದುಕೊಂಡು ದಿಕ್ಕಾಪಾಲಾಗಿ ಹೋಗುವನು.
Kannada BSI Bible 2016
ಇದಾದ ಮೇಲೆ ಪ್ರಧಾನನು ಜನರ ಸ್ವಾಸ್ತ್ಯವನ್ನು ಬಲವಂತವಾಗಿ ತೆಗೆದುಕೊಂಡು ಬಾಧ್ಯತೆ ಯೊಳಗಿಂದ ಅವರನ್ನು ತಳ್ಳಬಾರದು ನನ್ನ ಜನರು ತಮ್ಮ ತಮ್ಮ ಬಾಧ್ಯತೆಯೊಳಗಿಂದ ಚದರಿಸಲ್ಪಡದ ಹಾಗೆ ಅವನು ತನ್ನ ಸ್ವಂತ ಬಾಧ್ಯತೆಯಿಂದಲೇ ತನ್ನ ಕುಮಾರರಿಗೆ ಸ್ವಾಸ್ತ್ಯವನ್ನು ಕೊಡಬೇಕು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇದಲ್ಲದೆ ಪ್ರಭುವು ಪ್ರಜೆಗಳ ಪಿತ್ರಾರ್ಜಿತ ಭೂವಿುಯನ್ನು ಸ್ವಾಧೀನಮಾಡಿಕೊಂಡು ಅವರ ಬಾಧ್ಯತೆಯನ್ನು ತಪ್ಪಿಸಬಾರದು; ಸ್ವಂತ ಭೂವಿುಯನ್ನೇ ಭಾಗಿಸಿ ತನ್ನ ಮಕ್ಕಳಿಗೆ ಪಾಲುಕೊಡಲಿ; ಇಲ್ಲವಾದರೆ ನನ್ನ ಪ್ರಜೆಯಲ್ಲಿ ಪ್ರತಿಯೊಬ್ಬನೂ ತನ್ನ ತನ್ನ ಭೂಸ್ಥಿತಿಯನ್ನು ಕಳಕೊಂಡು ದಿಕ್ಕಾಪಾಲಾಗಿ ಹೋದಾನು.
Kannada Bible (KNCL) BSI 2016
ಇದಲ್ಲದೆ ರಾಜನು ಪ್ರಜೆಗಳ ಪಿತ್ರಾರ್ಜಿತ ಭೂಮಿಯನ್ನು ಸ್ವಾಧೀನಮಾಡಿಕೊಂಡು ಅವರ ಬಾಧ್ಯತೆಯನ್ನು ತಪ್ಪಿಸಬಾರದು. ಸ್ವಂತ ಭೂಮಿಯನ್ನೇ ವಿಭಾಗಿಸಿ ತನ್ನ ಮಕ್ಕಳಿಗೆ ಪಾಲುಕೊಡಲಿ; ಇಲ್ಲವಾದರೆ ನನ್ನ ಪ್ರಜೆಯಲ್ಲಿ ಪ್ರತಿಯೊಬ್ಬನೂ ತನ್ನ ತನ್ನ ಭೂಸ್ಥಿತಿಯನ್ನು ಕಳೆದುಕೊಂಡು ದಿಕ್ಕಾಪಾಲಾಗಿ ಹೋಗಬೇಕಾಗುವುದು.”
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇದಾದ ಮೇಲೆ ರಾಜಕುಮಾರನು ಜನರ ಸೊತ್ತನ್ನು ಬಲವಂತವಾಗಿ ತೆಗೆದುಕೊಂಡು ಬಾಧ್ಯತೆಯೊಳಗಿಂದ ಅವರನ್ನು ತಳ್ಳಬಾರದು. ನನ್ನ ಜನರು ತಮ್ಮ ತಮ್ಮ ಬಾಧ್ಯತೆಯನ್ನು ಕಳೆದುಕೊಳ್ಳಬಾರದು. ತಂದೆಯು ತನ್ನ ಸ್ವಂತ ಬಾಧ್ಯತೆಯಿಂದಲೇ ತನ್ನ ಪುತ್ರರಿಗೆ ಸೊತ್ತನ್ನು ಕೊಡಬೇಕು.’ ”