Ezekiel 46:19 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಬಳಿಕ ಆ ಪುರುಷನು ನನ್ನನ್ನು ಮಹಾದ್ವಾರದ ಪಕ್ಕದಲ್ಲಿನ ಪ್ರವೇಶಮಾರ್ಗವಾಗಿ ಉತ್ತರದಲ್ಲಿರುವ ಯಾಜಕರ ಪವಿತ್ರ ಕೋಣೆಗಳಿಗೆ ಕರೆದುಕೊಂಡು ಹೋದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ಬಳಿಕ ಆ ಪುರುಷನು ನನ್ನನ್ನು ಹೆಬ್ಬಾಗಿಲ ಪಕ್ಕದಲ್ಲಿನ ಪ್ರವೇಶದ ಮಾರ್ಗವಾಗಿ ಉತ್ತರಕ್ಕೆ ಅಭಿಮುಖವಾಗಿಯೂ, ಯಾಜಕರಿಗೆ ನೇಮಕವಾಗಿಯೂ ಇರುವ ಪರಿಶುದ್ಧವಾದ ಕೋಣೆಗಳಿಗೆ ಬರಮಾಡಿದನು. ಇಗೋ, ಅವುಗಳ ಹಿಂದೆ ಪಶ್ಚಿಮದ ಕಡೆಗೆ ಒಂದು ಸ್ಥಳವಿತ್ತು.”
Kannada BSI Bible 2016
ಆಮೇಲೆ ಅವನು ನನ್ನನ್ನು ಬಾಗಲಿನ ಪಕ್ಕದಲ್ಲಿ ಪ್ರವೇಶವಿದ್ದ ಉತ್ತರಕ್ಕೆ ಅಭಿಮುಖವಾದ ಯಾಜಕರ ಪರಿಶುದ್ಧ ಕೊಠಡಿಗೆ ಕರೆದುಕೊಂಡು ಹೋದನು. ಅಲ್ಲಿ ಇಗೋ, ಎರಡು ಕಡೆಗಳಲ್ಲಿ ಪಶ್ಚಿಮದ ಕಡೆಗೆ ಒಂದು ಸ್ಥಳವಿತ್ತು.
Kannada BSI JV (ಕನ್ನಡ ಸತ್ಯವೇದವು J.V. (BSI))
ಬಳಿಕ ಆ ಪುರುಷನು ನನ್ನನ್ನು ಹೆಬ್ಬಾಗಿಲ ಪಕ್ಕದಲ್ಲಿನ ಪ್ರವೇಶದ ಮಾರ್ಗವಾಗಿ ಬಡಗಲಿಗೆ ಅಭಿಮುಖವಾಗಿಯೂ ಯಾಜಕರಿಗೆ ನೇಮಕವಾಗಿಯೂ ಇರುವ ಪರಿಶುದ್ಧವಾದ ಕೋಣೆಗಳಿಗೆ ಬರಮಾಡಿದನು; ಇಗೋ, ಅವುಗಳ ಹಿಂದೆ ಪಡುವಲಲ್ಲಿ ಒಂದು ಸ್ಥಳವಿತ್ತು.
Kannada Bible (KNCL) BSI 2016
ಬಳಿಕ ಆ ಪುರುಷ ನನ್ನನ್ನು ಹೆಬ್ಬಾಗಿಲ ಪಕ್ಕದಲ್ಲಿನ ಪ್ರವೇಶದ ಮಾರ್ಗವಾಗಿ ಉತ್ತರಕ್ಕೆ ಅಭಿಮುಖನಾಗಿ ಹಾಗು ಯಾಜಕರಿಗೆ ನೇಮಕವಾಗಿ ಇರುವ ಪರಿಶುದ್ಧವಾದ ಕೋಣೆಗಳಿಗೆ ಬರಮಾಡಿದನು. ಇಗೋ, ಅವುಗಳ ಹಿಂದೆ ಪಶ್ಚಿಮದಲ್ಲಿ ಒಂದು ಸ್ಥಳವಿತ್ತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಮೇಲೆ ಅವನು ನನ್ನನ್ನು ಬಾಗಿಲಿನ ಪಕ್ಕದಲ್ಲಿದ್ದ ಪ್ರವೇಶವಿದ್ದ ಉತ್ತರಕ್ಕೆ ಅಭಿಮುಖವಾದ ಯಾಜಕರ ಪರಿಶುದ್ಧ ಕೊಠಡಿಗೆ ಕರೆದುಕೊಂಡು ಹೋದನು. ಅಲ್ಲಿ ಅವುಗಳ ಪಶ್ಚಿಮದ ಕಡೆಗೆ ಒಂದು ಸ್ಥಳವಿತ್ತು.