Ezekiel 46:2 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅಊಪತಿಯು ಆ ದ್ವಾರದ ಕೈಸಾಲೆಯೊಳಗೆ ಪ್ರವೇಶಿಸಿ ಅದರ ನಿಲುವು ಕಂಘದ ಬಳಿಯಲ್ಲಿ ನಿಲ್ಲುವನು. ಅಊಪತಿಯು ಕೊಡುವ ಸರ್ವಾಂಗಹೋಮವನ್ನು ಮತ್ತು ಸಮಾಧಾನಯಜ್ಞವನ್ನು ಆಗ ಯಾಜಕರು ಸಮರ್ಪಿಸುವರು. ಅಊಪತಿಯು ಆ ದ್ವಾರದ ಮುಂಭಾಗದಲ್ಲಿ ಆರಾಊಸುವನು. ಅನಂತರ ಅವನು ಹೊರಗೆ ಹೋಗುವನು. ಆ ದ್ವಾರದ ಕದಗಳು ಸಾಯಂಕಾಲದ ತನಕ ತೆರೆದೇ ಇರುವವು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ರಾಜನು ಹೊರಗಿನ ಕೈಸಾಲೆಯ ಮಾರ್ಗವಾಗಿ ಆ ಹೆಬ್ಬಾಗಿಲನ್ನು ಪ್ರವೇಶಿಸಿ, ಬಾಗಿಲಿನ ಕಂಬದ ಪಕ್ಕದಲ್ಲಿ ನಿಂತುಕೊಂಡು, ತಾನು ಒಪ್ಪಿಸಿದ ಸರ್ವಾಂಗಹೋಮ ಪಶುವನ್ನೂ, ಸಮಾಧಾನ ಯಜ್ಞ ಪಶುಗಳನ್ನೂ ಯಾಜಕರು ಅರ್ಪಿಸುತ್ತಿರುವಾಗ ಬಾಗಿಲಿನ ಹೊಸ್ತಿಲಿನಲ್ಲಿ ಅಡ್ಡಬೀಳಲಿ, ಆ ಮೇಲೆ ಹೊರಟು ಹೋಗಲಿ. ಅ ದಿನ ಸಂಜೆಯ ತನಕ ಬಾಗಿಲನ್ನು ಮುಚ್ಚಬಾರದು.
Kannada BSI Bible 2016
ಪ್ರಭುವು ಆ ಬಾಗಲಿನ ದ್ವಾರಾಂಗಣ ಮಾರ್ಗವಾಗಿ ಹೊರಗಿ ನಿಂದ ಪ್ರವೇಶಿಸಿ ಬಾಗಲಿನ ಕಂಬದ ಬಳಿಯಲ್ಲಿ ನಿಲ್ಲಬೇಕು, ಆಗ ಯಾಜಕರು ಅವನ ದಹನಬಲಿಯನ್ನು ಸಮಾಧಾನದ ಬಲಿಗಳನ್ನು ಸಿದ್ಧಮಾಡಬೇಕು; ಬಾಗ ಲಿನ ಹೊಸ್ತಿಲಲ್ಲಿ ಆರಾಧಿಸಿ ಹೋಗಬೇಕು. ಆದರೆ ಬಾಗಲು ಸಂಜೆಯವರೆಗೂ ಮುಚ್ಚಲ್ಪಡಬಾರದು;
Kannada BSI JV (ಕನ್ನಡ ಸತ್ಯವೇದವು J.V. (BSI))
ಪ್ರಭುವು ಹೊರಗಣ ಕೈಸಾಲೆಯ ಮಾರ್ಗವಾಗಿ ಆ ಹೆಬ್ಬಾಗಿಲನ್ನು ಪ್ರವೇಶಿಸಿ ಬಾಗಿಲ ನಿಲವುಕಂಬದ ಪಕ್ಕದಲ್ಲಿ ನಿಂತುಕೊಂಡು ತಾನು ಒಪ್ಪಿಸಿದ ಸರ್ವಾಂಗಹೋಮಪಶುವನ್ನೂ ಸಮಾಧಾನಯಜ್ಞಪಶುಗಳನ್ನೂ ಯಾಜಕರು ಅರ್ಪಿಸುತ್ತಿರುವಾಗ ಬಾಗಿಲ ಹೊಸ್ತಲಿನಲ್ಲಿ ಅಡ್ಡಬೀಳಲಿ; ಆಮೇಲೆ ಹೊರಟುಹೋಗಲಿ; ಅಂದು ಸಂಜೆಯ ತನಕ ಬಾಗಿಲನ್ನು ಮುಚ್ಚಬಾರದು.
Kannada Bible (KNCL) BSI 2016
ರಾಜನು ಹೊರಗಿನ ಕೈಸಾಲೆಯ ಮಾರ್ಗವಾಗಿ ಆ ಹೆಬ್ಬಾಗಿಲನ್ನು ಪ್ರವೇಶಿಸಿ ಬಾಗಿಲ ನಿಲವುಕಂಬದ ಪಕ್ಕದಲ್ಲಿ ನಿಂತುಕೊಂಡು, ತಾನು ಒಪ್ಪಿಸಿದ ದಹನಬಲಿ ಪ್ರಾಣಿಯನ್ನು ಶಾಂತಿಸಮಾಧಾನ ಬಲಿಪ್ರಾಣಿಯನ್ನೂ ಯಾಜಕರು ಅರ್ಪಿಸುತ್ತಿರುವಾಗ ಬಾಗಿಲ ಹೊಸ್ತಿಲಿನಲ್ಲಿ ಅಡ್ಡಬೀಳಲಿ; ಆಮೇಲೆ ಹೊರಟುಹೋಗಲಿ; ಅಂದು ಸಂಜೆಯ ತನಕ ಬಾಗಿಲನ್ನು ಮುಚ್ಚಬಾರದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ರಾಜಕುಮಾರನು ಆ ಬಾಗಿಲಿನ ದ್ವಾರಮಂಟಪ ಮಾರ್ಗವಾಗಿ ಹೊರಗಿನಿಂದ ಪ್ರವೇಶಿಸಿ ಬಾಗಿಲಿನ ಕಂಬದ ಬಳಿಯಲ್ಲಿ ನಿಲ್ಲಬೇಕು. ಆಗ ಯಾಜಕರು ಅವನ ದಹನಬಲಿಯನ್ನು ಅವನ ಸಮಾಧಾನದ ಬಲಿಗಳನ್ನು ಸಿದ್ಧಮಾಡಬೇಕು. ಬಾಗಿಲಿನ ಹೊಸ್ತಿಲಲ್ಲಿ ಆರಾಧಿಸಿ ಹೋಗಬೇಕು. ಆದರೆ ಬಾಗಿಲು ಸಂಜೆಯವರೆಗೂ ಮುಚ್ಚದಿರಬೇಕು.