Ezekiel 46:20 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅವನು ನನಗೆ ಹೇಳಿದ್ದೇನೆಂದರೆ, “ಈ ಸ್ಥಳದಲ್ಲಿ ಯಾಜಕರು ದೋಷಪರಿಹಾರಕ ಮತ್ತು ಪಾಪಪರಿಹಾರಕಯಜ್ಞದ ಮಾಂಸಗಳನ್ನು ಙೇಯಿಸುವರು. ಇದೇ ಸ್ಥಳದಲ್ಲಿ ಧಾನ್ಯಸಮರ್ಪಣೆಯ ಹಿಟ್ಟಿನಿಂದ ರೊಟ್ಟಿಯನ್ನು ಸುಡುವರು. ಇದನ್ನು ಇಲ್ಲಿಯೇ ಯಾಕೆ ಮಾಡುತ್ತಾರೆಂದರೆ ಅವರು ಹೊರಗಿನ ಪ್ರಾಕಾರದೊಳಗೆ ಆ ಪವಿತ್ರ ವಸ್ತುವನ್ನು ತರುವ ಅವಶ್ಯಕತೆ ಇರುವದಿಲ್ಲ. ಸಾರ್ವಜನಿಕರು ಕೂಡುವ ಸ್ಥಳದಲ್ಲಿ ಆ ಪವಿತ್ರ ವಸ್ತುವನ್ನು ತರಬಾರದು.”
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಅವನು ನನಗೆ, “ಯಾಜಕರು ಅಪರಾಧ ಬಲಿಯನ್ನೂ, ಪ್ರಾಯಶ್ಚಿತ್ತಯಜ್ಞ ಬಲಿಯನ್ನೂ, ಬೇಯಿಸಿದ ಧಾನ್ಯನೈವೇದ್ಯವನ್ನು ಸುಡುವುದಕ್ಕೆ ಏರ್ಪಡಿಸಿರುವ ಪರಿಶುದ್ಧ ಸ್ಥಳವು ಇದೆ” ಎಂದು ಹೇಳಿದನು.
Kannada BSI Bible 2016
ಆಗ ಅವನು ನನಗೆ--ಯಾಜಕರು ಅಪರಾಧ ಬಲಿಯನ್ನೂ ಪಾಪ ಬಲಿಯನ್ನೂ ಬೇಯಿಸಿದ ಆಹಾರದ ಅರ್ಪಣೆಯನ್ನು ಸುಡುವಂತೆ ಏರ್ಪಡಿ ಸಿರುವ ಸ್ಥಳವು ಇದೇ. ಜನರನ್ನು ಪರಿಶುದ್ಧ ಮಾಡು ವದಕ್ಕೆ ಅವರು ಅವುಗಳನ್ನು ಹೊರಗಿನ ಅಂಗಳಕ್ಕೆ ತೆಗೆದುಕೊಂಡು ಹೋಗಬಾರದು ಎಂದು ಹೇಳಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ಅವನು ನನಗೆ - ಯಾಜಕರು ಹವಿಸ್ಸನ್ನು ಹೊರಗಣ ಪ್ರಾಕಾರಕ್ಕೆ ಒಯ್ದು ಜನರನ್ನು ಶುದ್ಧಿಮಾಡದ ಹಾಗೆ ಪ್ರಾಯಶ್ಚಿತ್ತಯಜ್ಞಪಶುವಿನ ಮತ್ತು ದೋಷಪರಿಹಾರಕಯಜ್ಞಪಶುವಿನ ಮಾಂಸವನ್ನು ಬೇಯಿಸುವದಕ್ಕೂ ಧಾನ್ಯನೈವೇದ್ಯವನ್ನು ಪಕ್ವಮಾಡುವದಕ್ಕೂ ಈ ಸ್ಥಳವು ಏರ್ಪಟ್ಟಿದೆ ಎಂದು ಹೇಳಿದನು.
Kannada Bible (KNCL) BSI 2016
ಆಗ ಅವನು ನನಗೆ, “ಯಾಜಕರು ಹವಿಸ್ಸನ್ನು ಹೊರಗಣ ಪ್ರಾಕಾರಕ್ಕೆ ಒಯ್ದು ಜನರನ್ನು ಶುದ್ಧಿಮಾಡದ ಹಾಗೆ, ಪ್ರಾಯಶ್ಚಿತ್ತ ಬಲಿಪಶುವಿನ ಮತ್ತು ದೋಷಪರಿಹಾರಕ ಬಲಿಪಶುವಿನ ಮಾಂಸವನ್ನು ಬೇಯಿಸುವುದಕ್ಕೂ ಧಾನ್ಯನೈವೇದ್ಯವನ್ನು ಪಕ್ವಮಾಡುವುದಕ್ಕೂ ಈ ಸ್ಥಳ ಏರ್ಪಟ್ಟಿದೆ,” ಎಂದು ಹೇಳಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಅವನು ನನಗೆ, “ಯಾಜಕರು ಅಪರಾಧ ಬಲಿಯನ್ನೂ ದೋಷಪರಿಹಾರ ಬಲಿಯನ್ನೂ ಬೇಯಿಸಿದ ಧಾನ್ಯ ಸಮರ್ಪಣೆಯನ್ನು ಸುಡುವಂತೆ ಏರ್ಪಡಿಸಿರುವ ಸ್ಥಳವು ಇದೇ. ಜನರನ್ನು ಪರಿಶುದ್ಧ ಮಾಡುವುದಕ್ಕೆ ಅವರು ಅವುಗಳನ್ನು ಹೊರಗಿನ ಅಂಗಳಕ್ಕೆ ತೆಗೆದುಕೊಂಡು ಹೋಗಬಾರದು,” ಎಂದು ಹೇಳಿದನು.