Ezekiel 46:21 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆಮೇಲೆ ಅವನು ಹೊರಗಿನ ಪ್ರಾಕಾರಕ್ಕೆ ಕರೆದುಕೊಂಡು ಹೋದನು. ಆ ಪ್ರಾಕಾರದ ನಾಲ್ಕು ಮೂಲೆಗಳಿಗೆ ನನ್ನನ್ನು ಕರೆದುಕೊಂಡು ಹೋದನು. ವಿಶಾಲವಾದ ಪ್ರಾಕಾರದ ಪ್ರತೀ ಮೂಲೆಗಳಲ್ಲಿ ಇನ್ನೊಂದು ಚಿಕ್ಕ ಪ್ರಾಕಾರವಿರುವದನ್ನು ಕಂಡೆನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ತರುವಾಯ ಅವನು ನನ್ನನ್ನು ಹೊರಗಿನ ಅಂಗಳಕ್ಕೆ ಬರಮಾಡಿ, ಅಲ್ಲಿನ ನಾಲ್ಕು ಮೂಲೆಗಳ ಮಾರ್ಗವಾಗಿ ಕರೆದುಕೊಂಡು ಹೋದನು. ಇಗೋ, ಅಂಗಳದ ಒಂದೊಂದು ಮೂಲೆಯಲ್ಲಿ ಒಂದೊಂದು ಒಳ ಅಂಗಳವು ಕಾಣಿಸಿತು.
Kannada BSI Bible 2016
ಆಗ ಅವನು ನನ್ನನ್ನು ಹೊರಗಿನ ಅಂಗಳಕ್ಕೆ ಕರೆದುಕೊಂಡು ಹೋಗಿ ಅಂಗಳದ ನಾಲ್ಕು ಮೂಲೆ ಗಳನ್ನು ಹಾದುಹೋಗುವಂತೆ ಮಾಡಿದನು; ಇಗೋ, ಅಂಗಳದ ಒಂದೊಂದು ಮೂಲೆಯಲ್ಲಿ ಒಂದು ಅಂಗಳ ಇತ್ತು.
Kannada BSI JV (ಕನ್ನಡ ಸತ್ಯವೇದವು J.V. (BSI))
ತರುವಾಯ ಅವನು ನನ್ನನ್ನು ಹೊರಗಣ ಪ್ರಾಕಾರಕ್ಕೆ ಬರಮಾಡಿ ಅಲ್ಲಿನ ನಾಲ್ಕು ಮೂಲೆಗಳ ಮಾರ್ಗವಾಗಿ ಕರಕೊಂಡು ಹೋದನು; ಇಗೋ, ಪ್ರಾಕಾರದ ಒಂದೊಂದು ಮೂಲೆಯಲ್ಲಿ ಒಂದೊಂದು ಒಳ ಅಂಗಳವು ಕಾಣಿಸಿತು.
Kannada Bible (KNCL) BSI 2016
ತರುವಾಯ ಅವನು ನನ್ನನ್ನು ಹೊರಗಿನ ಪ್ರಾಕಾರಕ್ಕೆ ಬರಮಾಡಿ ಅಲ್ಲಿನ ನಾಲ್ಕು ಮೂಲೆಗಳ ಮಾರ್ಗವಾಗಿ ಕರೆದುಕೊಂಡುಹೋದನು. ಇಗೋ, ಪ್ರಾಕಾರದ ಒಂದೊಂದು ಮೂಲೆಯಲ್ಲಿ ಒಂದೊಂದು ಒಳ ಅಂಗಳವು ಕಾಣಿಸಿತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಅವನು ನನ್ನನ್ನು ಹೊರಗಿನ ಅಂಗಳಕ್ಕೆ ಕರೆದುಕೊಂಡು ಹೋಗಿ ಅಂಗಳದ ನಾಲ್ಕು ಮೂಲೆಗಳನ್ನು ಹಾದುಹೋಗುವಂತೆ ಮಾಡಿದನು. ಅಂಗಳದ ಒಂದೊಂದು ಮೂಲೆಯಲ್ಲಿ ಒಂದು ಅಂಗಳವನ್ನು ನಾನು ಕಂಡೆನು.