Ezekiel 46:5 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಟಗರಿನೊಂದಿಗೆ ಒಂದು ಏಫಾ ಧಾನ್ಯಸಮರ್ಪಣೆಗಾಗಿ ಕೊಡಬೇಕು. ಕುರಿಗಳೊಂದಿಗೆ ಧಾನ್ಯಸಮರ್ಪಣೆಗಾಗಿ ರಾಜನು ತನ್ನ ಇಷ್ಟಘಂದ ಹಾಗೆ ಕೊಡಘಹುದು. ಆದರೆ ಪ್ರತೀ ಒಂದು ಏಫಾ ಧಾನ್ಯದೊಂದಿಗೆ ಒಂದು ಹಿನ್ ಆಲಿವ್ ಎಣ್ಣೆಯನ್ನು ಕೊಡಬೇಕು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಟಗರಿನೊಡನೆ ಮೂವತ್ತು ಸೇರು ಗೋದಿಹಿಟ್ಟನ್ನೂ, ಕುರಿಗಳೊಡನೆ ಕೈಯಲಾದಷ್ಟು ಗೋದಿಹಿಟ್ಟನ್ನೂ, ಮೂವತ್ತು ಸೇರು ಗೋದಿಹಿಟ್ಟಿಗೆ ಆರಾರು ಸೇರಿನಂತೆ ಎಣ್ಣೆಯನ್ನೂ ಧಾನ್ಯನೈವೇದ್ಯಕ್ಕಾಗಿ ಕೊಡಲಿ.
Kannada BSI Bible 2016
ಹೇಗಂದರೆ ಆಹಾರದ ಅರ್ಪಣೆಯಾಗಿ ಟಗರಿಗೆ ಒಂದು ಎಫ, ಕುರಿಮರಿಗೆ ತಕ್ಕ ಅವನ ಕೈಲಾದಂತ ಆಹಾರ ಅರ್ಪ ಣೆಯು ಒಂದಕ್ಕೆ ಎಣ್ಣೆಯ ಒಂದು ಹಿನ್ನನ್ನು ಅರ್ಪಿಸ ಬೇಕು;
Kannada BSI JV (ಕನ್ನಡ ಸತ್ಯವೇದವು J.V. (BSI))
ಟಗರಿನೊಡನೆ ಮೂವತ್ತು ಸೇರು [ಗೋದಿ ಹಿಟ್ಟನ್ನೂ] ಕುರಿಗಳೊಡನೆ ಶಕ್ತಿಯಿದ್ದಷ್ಟು [ಗೋದಿ ಹಿಟ್ಟನ್ನೂ] ಮೂವತ್ತು ಮೂವತ್ತು ಸೇರು [ಗೋದಿ ಹಿಟ್ಟಿಗೆ] ಆರಾರು ಸೇರಿನಂತೆ ಎಣ್ಣೆಯನ್ನೂ ಧಾನ್ಯನೈವೇದ್ಯಕ್ಕಾಗಿ ಕೊಡಲಿ.
Kannada Bible (KNCL) BSI 2016
ಟಗರಿನೊಡನೆ ಮೂವತ್ತು ಸೇರು ಗೋದಿಹಿಟ್ಟನ್ನೂ ಕುರಿಗಳೊಡನೆ ಸಾಧ್ಯವಿದ್ದಷ್ಟು ಗೋದಿಹಿಟ್ಟನ್ನೂ ಮೂವತ್ತು ಮೂವತ್ತು ಸೇರು ಗೋದಿಹಿಟ್ಟಿಗೆ ಆರಾರು ಸೇರಿನಂತೆ ಎಣ್ಣೆಯನ್ನೂ ಧಾನ್ಯನೈವೇದ್ಯಕ್ಕಾಗಿ ಕೊಡಲಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಟಗರಿನ ಜೊತೆಗೆ ಕೊಡುವ ಧಾನ್ಯ ಸಮರ್ಪಣೆಯು ಸುಮಾರು ಹದಿನಾರು ಕಿಲೋಗ್ರಾಂ ಆಗಿರಬೇಕು ಮತ್ತು ಕುರಿಮರಿಗಳ ಜೊತೆಗೆ ಕೊಡುವ ಧಾನ್ಯ ಸಮರ್ಪಣೆಯು ಅವನ ಕೈಲಾದಷ್ಟು ಆಗಿರಬೇಕು. ಇದರ ಜೊತೆಗೆ ಪ್ರತಿ ಎಫಾ ಪ್ರಮಾಣದ ಧಾನ್ಯ ಸಮರ್ಪಣೆಯಾಗಿ ಸುಮಾರು ಮೂರುವರೆ ಲೀಟರ್ ಎಣ್ಣೆಯನ್ನು ಅರ್ಪಿಸಬೇಕು.