Ezekiel 46:6 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ಅಮಾವಾಸ್ಯೆ ದಿವಸ ಅವನು ಒಂದು ಎಳೇ ಪೂರ್ಣಾಂಗವಾದ ಹೋರಿಯನ್ನು ಸಮರ್ಪಿಸಙೇಕು. ಅದರ ಜೊತೆಗೆ ಆರು ಪೂರ್ಣಾಂಗವಾದ ಕುರಿಗಳನ್ನೂ ಒಂದು ಪೂರ್ಣಾಂಗವಾದ ಟಗರನ್ನೂ ಸಮರ್ಪಿಸಬೇಕು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅಮಾವಾಸ್ಯೆಯಲ್ಲಿ ಅವನು ಪೂರ್ಣಾಂಗವಾದ ಒಂದು ಹೋರಿಯನ್ನೂ, ಆರು ಕುರಿಗಳನ್ನೂ, ಒಂದು ಟಗರನ್ನೂ ಒಪ್ಪಿಸತಕ್ಕದ್ದು. ಅವು ಪೂರ್ಣಾಂಗವಾಗಿಯೇ ಇರಬೇಕು.
Kannada BSI Bible 2016
ಅಮಾವಾಸ್ಯೆಯ ದಿನದಲ್ಲಿ ಪೂರ್ಣಾಂಗ ವಾದ ಒಂದು ಎಳೇ ಹೋರಿ, ಆರು ಕುರಿಮರಿಗಳು, ಒಂದು ಟಗರು ಇವು ದೋಷವಿಲ್ಲದ್ದಾಗಿರಬೇಕು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅಮಾವಾಸ್ಯೆಯಲ್ಲಿ ಅವನು ಪೂರ್ಣಾಂಗವಾದ ಒಂದು ಹೋರಿಯನ್ನೂ ಆರು ಕುರಿಗಳನ್ನೂ ಒಂದು ಟಗರನ್ನೂ ಒಪ್ಪಿಸತಕ್ಕದ್ದು; ಅದು ಪೂರ್ಣಾಂಗವಾಗಿಯೇ ಇರಬೇಕು;
Kannada Bible (KNCL) BSI 2016
ಅಮಾವಾಸ್ಯೆಯಲ್ಲಿ ಅವನು ಕಳಂಕರಹಿತವಾದ ಒಂದು ಹೋರಿಯನ್ನೂ ಆಡುಕುರಿಗಳನ್ನೂ ಒಂದು ಟಗರನ್ನೂ ಒಪ್ಪಿಸತಕ್ಕದ್ದು; ಅವು ಕಳಂಕರಹಿತವಾಗಿಯೇ ಇರಬೇಕು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅಮಾವಾಸ್ಯೆಯ ದಿನದಲ್ಲಿ ಪೂರ್ಣಾಂಗವಾದ ಒಂದು ಎಳೆಯ ಹೋರಿ, ಆರು ಕುರಿಮರಿಗಳು, ಒಂದು ಟಗರನ್ನು ಅರ್ಪಿಸಬೇಕು. ಇವು ದೋಷವಿಲ್ಲದ್ದಾಗಿರಬೇಕು.