Ezekiel 47:10 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಎಂಗೇದಿಯಿಂದ ಪ್ರಾರಂಭವಾಗಿ ಏನ್‌ಎಗ್ಲಯಿಮ್ ತನಕ ಬೆಸ್ತರು ಹೊಳೆಯ ದಡದಲ್ಲಿ ನಿಂತಿರುವದನ್ನು ನೀನು ನೋಡಘಹುದು. ಅವರು ತಮ್ಮ ಘಲೆಗಳನ್ನು ಬೀಸಿ ನಾನಾ ತರದ ಮೀನುಗಳನ್ನು ಹಿಡಿಯುವದನ್ನು ನೀನು ನೋಡಘಹುದು. ಭೂಮಧ್ಯ ಸಮುದ್ರದೊಳಗೆ ಎಷ್ಟು ವಿಧವಾದ ಮೀನುಗಳಿವೆಯೋ ಅಷ್ಟೇ ವಿಧವಾದ ಮೀನುಗಳು ಈ ಹೊಳೆಯಲ್ಲಿಯೂ ಇವೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಆ ಸಮುದ್ರದ ತೀರದಲ್ಲಿ ಬೆಸ್ತರು ನಿಂತಿರುವರು; ಏನ್ ಗೆದಿಯಿಂದ ಏನ್ ಎಗ್ಲಯಿಮಿನವರೆಗೆ ದಡವೆಲ್ಲಾ ಬಲೆ ಹಾಸುವ ಸ್ಥಳವಾಗುವುದು; ಬಗೆಬಗೆಯ ಮೀನುಗಳು ಮಹಾಸಾಗರದ ಮೀನುಗಳಂತೆ ಅವರಿಗೆ ರಾಶಿ ರಾಶಿಯಾಗಿ ಸಿಕ್ಕುವವು.
Kannada BSI Bible 2016
ಏನ್‌ಗೆದಿ ಮೊದಲುಗೊಂಡು ಏನ್‌ಎಗ್ಲಯಿಮಿನ ವರೆಗೂ ವಿಾನುಗಾರರು ಅದರ ಬಳಿಯಲ್ಲಿ ನಿಲ್ಲುವರು. ಅಲ್ಲಿ ಬಲೆಹಾಸುವ ಸ್ಥಳಗಳಿರುವವು. ಅದರ ವಿಾನು ಗಳು ಮಹಾಸಮುದ್ರದ ವಿಾನುಗಳಾಗಿ ಜಾತ್ಯಾನುಸಾರ ವಾಗಿ ಬಹಳವಾಗಿರುವವು,
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ಆ ಸಮುದ್ರದ ತೀರದಲ್ಲಿ ಬೆಸ್ತರು ನಿಂತಿರುವರು; ಏನ್‍ಗೆದಿಯಿಂದ ಏನ್ಎಗ್ಲಯಿವಿುನವರೆಗೆ ದಡವೆಲ್ಲಾ ಬಲೆಹಾಸುವ ಸ್ಥಳವಾಗುವದು; ಬಗೆಬಗೆಯ ಮೀನುಗಳು ಮಹಾಸಾಗರದ ಮೀನುಗಳಂತೆ ಅವರಿಗೆ ರಾಶಿರಾಶಿಯಾಗಿ ಸಿಕ್ಕುವವು.
Kannada Bible (KNCL) BSI 2016
ಆಗ ಆ ಸಮುದ್ರದ ತೀರದಲ್ಲಿ ಬೆಸ್ತರು ನಿಂತಿರುವರು; ಏನ್‍ಗೆದಿಯಿಂದ ಏನ್ಎಗ್ಲಯಿಮಿನವರೆಗೆ ದಡವೆಲ್ಲಾ ಬಲೆಹಾಸುವ ಸ್ಥಳವಾಗುವುದು; ಬಗೆಬಗೆಯ ಮೀನುಗಳು ಮಹಾಸಾಗರದ ಮೀನುಗಳಂತೆ ಅವರಿಗೆ ರಾಶಿರಾಶಿಯಾಗಿ ಸಿಕ್ಕುವುವು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಏನ್ಗೆದಿ ಮೊದಲುಗೊಂಡು ಎನ್ ಎಗ್ಲಯಿಮಿನವರೆಗೂ ಬೆಸ್ತರು ಅದರ ಬಳಿಯಲ್ಲಿ ನಿಲ್ಲುವರು. ಅಲ್ಲಿ ಬಲೆಹಾಸುವ ಸ್ಥಳಗಳಿರುವುವು. ಅದರ ಮೀನುಗಳು ಮಹಾಸಾಗರದ ಮೀನುಗಳಾಗಿ ಜಾತ್ಯಾನುಸಾರವಾಗಿ ಬಹಳವಾಗಿರುವುವು.