Ezekiel 47:12 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಎಲ್ಲಾ ತರಹದ ಹಣ್ಣಿನ ಮರಗಳು ನದಿಯ ಇಕ್ಕೆಡೆಗಳಲ್ಲಿಯೂ ಬೆಳೆಯುವವು. ಅವುಗಳ ಎಲೆಗಳು ಎಂದಿಗೂ ಒಣಗಿ ನೆಲಕ್ಕೆ ಉದುರವು. ಆ ಮರಗಳಲ್ಲಿ ಸದಾಕಾಲ ಹಣ್ಣುಗಳು ಇರುವವು. ಪ್ರತೀ ತಿಂಗಳಿಗೆ ಹಣ್ಣುಗಳನ್ನು ಕೊಡುವವು. ಯಾಕೆಂದರೆ ಆ ಮರಗಳಿಗೆ ನೀರು ಆಲಯದಿಂದ ಬರುತ್ತದೆ. ಅದರ ಹಣ್ಣುಗಳನ್ನು ಆಹಾರಕ್ಕಾಗಿಯೂ ಅದರ ಎಲೆಗಳಿಂದ ಔಷಊಯನ್ನೂ ತಯಾರಿಸಘಹುದು.”
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನದಿಯ ಎರಡು ದಡಗಳ ತನಕ ಸಕಲ ಫಲವೃಕ್ಷಗಳು ಬೆಳೆಯುವವು. ಅವುಗಳ ಎಲೆ ಬಾಡುವುದಿಲ್ಲ, ಹಣ್ಣು ತೀರುವುದಿಲ್ಲ; ನದಿಯ ನೀರು ಪವಿತ್ರಾಲಯದಿಂದ ಹೊರಟು ಬರುವ ಕಾರಣ ಅವು ತಿಂಗಳುಗಳ ಪ್ರಕಾರ ಹೊಸ ಫಲವನ್ನು ಫಲಿಸುವವು; ಅವುಗಳ ಹಣ್ಣು ಆಹಾರಕ್ಕೂ, ಸೊಪ್ಪು ಔಷಧಕ್ಕೂ ಉಪಯೋಗವಾಗುವುದು.”
Kannada BSI Bible 2016
ನದಿಯ ಬಳಿ ಅದರ ತೀರದಲ್ಲಿ ಆ ಕಡೆಯೂ ಈ ಕಡೆಯೂ ಆಹಾರಕ್ಕಾಗಿ ಎಲ್ಲಾ ಮರಗಳು ಬೆಳೆಯುವವು, ಅವುಗಳ ಎಲೆಗಳು ಬಾಡುವದಿಲ್ಲ ಹಣ್ಣು ಮುಗಿದು ಹೋಗುವದಿಲ್ಲ. ಅವು ತಿಂಗಳುಗಳ ಪ್ರಕಾರ ಹೊಸ ಫಲಗಳನ್ನು ಫಲಿಸು ವವು; ಅವುಗಳ ನೀರು ಪರಿಶುದ್ಧ ಸ್ಥಳದಿಂದ ಹೊರಟು ಬಂದದ್ದು, ಅವುಗಳ ಹಣ್ಣುಗಳು ಆಹಾರಕ್ಕೂ ಎಲೆಗಳು ಔಷಧಕ್ಕೂ ಆಗುವವು.
Kannada BSI JV (ಕನ್ನಡ ಸತ್ಯವೇದವು J.V. (BSI))
ತೊರೆಯ ಎರಡು ದಡಗಳಲ್ಲಿಯೂ ಸಕಲಫಲವೃಕ್ಷಗಳು ಬೆಳೆಯುವವು; ಅವುಗಳ ಎಲೆ ಬಾಡದು, ಹಣ್ಣು ತೀರದು; ತೊರೆಯ ನೀರು ಪವಿತ್ರಾಲಯದೊಳಗಿಂದ ಹೊರಟುಬರುವ ಕಾರಣ ಅವು ತಿಂಗಳುತಿಂಗಳಲ್ಲಿಯೂ ಹೊಸಹೊಸ ಫಲವನ್ನು ಕೊಡುತ್ತಲಿರುವವು; ಅವುಗಳ ಹಣ್ಣು ಆಹಾರಕ್ಕೂ ಸೊಪ್ಪು ಔಷಧಕ್ಕೂ ಅನುಕೂಲಿಸುವವು.
Kannada Bible (KNCL) BSI 2016
ತೊರೆಯ ಎರಡು ದಡಗಳಲ್ಲಿಯೂ ಸಕಲ ಫಲವೃಕ್ಷಗಳು ಬೆಳೆಯುವುವು. ಅವುಗಳ ಎಲೆ ಬಾಡದು, ಹಣ್ಣು ತೀರದು. ತೊರೆಯ ನೀರು ಪವಿತ್ರಾಲಯದೊಳಗಿಂದ ಹೊರಟುಬರುವ ಕಾರಣ ಅವು ತಿಂಗಳು ತಿಂಗಳಲ್ಲಿಯೂ ಹೊಸ ಹೊಸ ಫಲವನ್ನು ಕೊಡುತ್ತಲಿರುವುವು; ಅವುಗಳ ಹಣ್ಣು ಆಹಾರಕ್ಕೂ, ಸೊಪ್ಪು ಔಷಧಕ್ಕೂ ಅನುಕೂಲಿಸುವುವು.”
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನದಿಯ ಎರಡೂ ದಡಗಳಲ್ಲಿ ಆಹಾರಕ್ಕಾಗಿ ಎಲ್ಲಾ ತರಹದ ಮರಗಳು ಬೆಳೆಯುವುವು. ಅವುಗಳ ಎಲೆಗಳು ಬಾಡುವುದಿಲ್ಲ. ಅವುಗಳ ಹಣ್ಣು ಮುಗಿದುಹೋಗುವುದಿಲ್ಲ. ಅವು ತಿಂಗಳುಗಳ ಪ್ರಕಾರ ಹೊಸ ಫಲಗಳನ್ನು ಫಲಿಸುವುವು. ಏಕೆಂದರೆ ಅವುಗಳ ನೀರು ಪರಿಶುದ್ಧ ಸ್ಥಳದಿಂದ ಹೊರಟುಬಂದದ್ದು, ಅವುಗಳ ಹಣ್ಣುಗಳು ಆಹಾರಕ್ಕೂ ಅವುಗಳ ಎಲೆಗಳು ಔಷಧಕ್ಕೂ ಆಗುವುವು.”