Ezekiel 47:13 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನನ್ನ ಒಡೆಯನಾದ ಯೆಹೋವನು ಹೇಳುವುದೇನೆಂದರೆ, “ಇಸ್ರೇಲರ ಹನೆಐರಡು ಕುಲಗಳಿಗೆ ದೇಶವನ್ನು ವಿಂಗಡಿಸುವಾಗ ಅವುಗಳ ಮೇರೆ ಯಾವುವೆಂದರೆ, ಯೋಸೇಫನಿಗೆ ಎರಡು ಪಾಲು ಇರುವದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ನೀವು ಇಸ್ರಾಯೇಲಿನ ಹನ್ನೆರಡು ಕುಲಗಳಿಗೆ ದೇಶವನ್ನು ಬಾಧ್ಯವಾಗಿ ಹಂಚಿಕೊಡುವಾಗ ಮುಂದಿನ ಮೇರೆಗಳನ್ನು ಅನುಸರಿಸಬೇಕು. ಯೋಸೇಫಿಗೆ ಎರಡು ಪಾಲು ಸೇರಲಿ.
Kannada BSI Bible 2016
ದೇವರಾದ ಕರ್ತನು ಹೀಗೆ ಹೇಳುತ್ತಾನೆ--ನೀವು ಇಸ್ರಾಯೇಲಿನ ಹನ್ನೆರಡು ಗೋತ್ರಗಳ ಪ್ರಕಾರ ದೇಶ ವನ್ನು ಬಾಧ್ಯವಾಗಿ ಹೊಂದುವ ಹಾಗೆ ಇದು ಮೇರೆಯಾ ಗಿದೆ; ಯೋಸೇಫನಿಗೆ ಎರಡು ಪಾಲುಗಳು ಕೊಡಲ್ಪ ಟ್ಟಿದೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ನೀವು ಇಸ್ರಾಯೇಲಿನ ಹನ್ನೆರಡು ಕುಲಗಳಿಗೆ ದೇಶವನ್ನು ಬಾಧ್ಯವಾಗಿ ಹಂಚಿಕೊಡುವಾಗ ಮುಂದಿನ ಮೇರೆಗಳನ್ನು ಅನುಸರಿಸಬೇಕು. ಯೋಸೇಫಿಗೆ ಎರಡುಪಾಲು ಸೇರಲಿ.
Kannada Bible (KNCL) BSI 2016
ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ: “ನೀವು ಇಸ್ರಯೇಲಿನ ಹನ್ನೆರಡು ಕುಲಗಳಿಗೆ ನಾಡನ್ನು ಬಾಧ್ಯವಾಗಿ ಹಂಚಿಕೊಡುವಾಗ ಮುಂದಿನ ಮೇರೆಗಳನ್ನು ಅನುಸರಿಸಬೇಕು. ಜೋಸೆಫಿಗೆ ಎರಡು ಪಾಲು ಸೇರಲಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: “ನೀವು ಇಸ್ರಾಯೇಲಿನ ಹನ್ನೆರಡು ಗೋತ್ರಗಳ ಪ್ರಕಾರ ದೇಶವನ್ನು ಬಾಧ್ಯವಾಗಿ ಹೊಂದುವ ಹಾಗೆ ಇದು ಮೇರೆಯಾಗಿದೆ. ಯೋಸೇಫನಿಗೆ ಎರಡು ಪಾಲುಗಳು ಕೊಡಲಾಗಿದೆ.