Ezekiel 47:18 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ಪೂರ್ವ ಭಾಗದಲ್ಲಿ, ಮೇರೆಯು ಹವ್ರಾನ್ ಮತ್ತು ದಮಸ್ಕದ ಮಧ್ಯದಲ್ಲಿರುವ ಹಚರ್ ಐನೋನ್ ಇಲ್ಲಿಂದ ಹೊರಟು ಜೋರ್ಡನ್ ಹೊಳೆಯ ತೀರದಲ್ಲಿ ಮುಂದುವರಿದು ಗಿಲ್ಯಾದಿಗೂ ಇಸ್ರೇಲ್ ರಾಜ್ಯಕ್ಕೂ ಮಧ್ಯದಲ್ಲಿ ಹರಿದು ಪೂರ್ವದ ಸಮುದ್ರದ ಕಡೆಗೆ ಹೋಗುತ್ತದೆ. ಅಲ್ಲಿಂದ ತಾಮಾರಿಗೆ ಸೇರುತ್ತದೆ. ಇದು ಪೂರ್ವ ಕಡೆಯ ಮೇರೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ಇದು ಪೂರ್ವದಿಕ್ಕಿನ ಮೇರೆಯಾಗಿದೆ: ಹವ್ರಾನ್, ದಮಸ್ಕ, ಗಿಲ್ಯಾದ್ ಇವುಗಳಿಗೂ ಇಸ್ರಾಯೇಲ್ ದೇಶಕ್ಕೂ ಮಧ್ಯದಲ್ಲಿರುವ ಯೊರ್ದನ್ ಹೊಳೆಯು ಮೇರೆಯಾಗಿರುವುದು. ಉತ್ತರ ಮೇರೆಯಿಂದ ದಕ್ಷಿಣ ಸಮುದ್ರದವರೆಗೆ ನೀವು ಗುರುತು ಹಾಕಿಕೊಳ್ಳಬೇಕು.
Kannada BSI Bible 2016
ಪೂರ್ವದಲ್ಲಿ ಹವ್ರಾನ್, ದಮಸ್ಕ, ಗಿಲ್ಯಾದ್ ಇವು ಗಳಿಗೂ ಇಸ್ರಾಯೇಲ್ ದೇಶಕ್ಕೂ ಮಧ್ಯೆ ಯೊರ್ದನ್ ಹೊಳೆಯ ಮೇರೆಯಿಂದ ಮೂಡಣ ಸಮುದ್ರದಿಂದ ನೀವು ಅಳೆಯಬೇಕು; ಇದೇ ಮೂಡಣ ಮೇರೆಯಾ ಗಿದೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಮೂಡಲಲ್ಲಿ ಹವ್ರಾನ್, ದಮಸ್ಕ, ಗಿಲ್ಯಾದ್ ಇವುಗಳಿಗೂ ಇಸ್ರಾಯೇಲ್ ದೇಶಕ್ಕೂ ಮಧ್ಯೆ ಯೊರ್ದನ್ ಹೊಳೆಯು ಎಲ್ಲೆಯಾಗಿರುವದು; [ಬಡಗಣ] ಮೇರೆಯಿಂದ ಮೂಡಣ ಸಮುದ್ರದವರೆಗೆ ನೀವು ಗುರುತು ಹಾಕಿಕೊಳ್ಳಬೇಕು. ಇದು ಮೂಡಣ ಮೇರೆ.
Kannada Bible (KNCL) BSI 2016
“ಪೂರ್ವದಲ್ಲಿ ಹವ್ರಾನ್, ದಮಸ್ಕ, ಗಿಲ್ಯಾದ್ ಇವುಗಳಿಗೂ ಇಸ್ರಯೇಲ್ ನಾಡಿಗೂ ಮಧ್ಯೆ ಜೋರ್ಡನ್ ಹೊಳೆ ಎಲ್ಲೆಯಾಗಿರುವುದು; ಉತ್ತರದ ಮೇರೆಯಿಂದ ಪೂರ್ವದ ಸಮುದ್ರದವರೆಗೆ ನೀವು ಗುರುತುಹಾಕಿಕೊಳ್ಳಬೇಕು. ಇದು ಪೂರ್ವದಿಕ್ಕಿನ ಮೇರೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಪೂರ್ವದಲ್ಲಿ ಹವ್ರಾನ್, ದಮಸ್ಕ, ಗಿಲ್ಯಾದ್ ಇವುಗಳಿಗೂ ಇಸ್ರಾಯೇಲ್ ದೇಶಕ್ಕೂ ಮಧ್ಯೆ ಯೊರ್ದನ್ ಹೊಳೆಯ ಮೇರೆಯಿಂದ ಲವಣ ಸಮುದ್ರದಿಂದ ಮತ್ತು ತಾಮರ್ ನೀವು ಅಳೆಯಬೇಕು. ಇದೇ ಪೂರ್ವದಿಕ್ಕಿನ ಮೇರೆಯಾಗಿದೆ.