Ezekiel 47:19 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ದಕ್ಷಿಣ ಮೇರೆಯು ತಾಮಾರಿನಿಂದ ಹೊರಟು ಮೆರೀಬೋತ್-ಕಾದೇಶ್ ನಲ್ಲಿರುವ ನೀರಿನ ಬುಗ್ಗೆಯವರೆಗೂ ಹೋಗುವರು. ಬಳಿಕ ಅಲ್ಲಿಂದ ಹೊರಟು ಈಜಿಪ್ಟಿನ ನೀರಿನ ತೊರೆಯ ಮಾರ್ಗದಿಂದ ಭೂಮಧ್ಯ ಸಮುದ್ರವನ್ನು ಸೇರುವದು. ಇದು ದಕ್ಷಿಣದ ಮೇರೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇದು ದಕ್ಷಿಣದ ಮೇರೆಯಾಗಿದೆ: ದಕ್ಷಿಣದ ಮೇರೆಯು ತಾಮಾರಿನಿಂದ ಹೊರಟು, ಮೆರೀಬೋತ್ ಕಾದೇಶಿನ ಹಳ್ಳದ ಮೇಲೆ ಐಗುಪ್ತದವರೆಗೆ ಮುಂದುವರೆಯುವ ನದಿಯ ಮಾರ್ಗವಾಗಿ ಮಹಾ ಸಮುದ್ರವನ್ನು ಮುಟ್ಟಬೇಕು.
Kannada BSI Bible 2016
ದಕ್ಷಿಣದ ಕಡೆಗಿರುವ ದಕ್ಷಿಣದ ಮೇರೆಯೂ ತಾಮಾರ್ ಮೊದಲುಗೊಂಡು ಕಾದೇಶಿನ ವಾಗ್ವಾದದ ನೀರಿನ ವರೆಗೂ ನದಿ ಮೊದಲುಗೊಂಡು ಮಹಾಸಮು ದ್ರದ ವರೆಗೂ ಇರುವದು. ಇದೇ ದಕ್ಷಿಣ ಭಾಗದ ದಕ್ಷಿಣದ ಮೇರೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ತೆಂಕಣ ಮೇರೆಯು ತಾಮಾರಿನಿಂದ ಹೊರಟು ಮೆರೀಬೋತ್ ಕಾದೇಶಿನ ಹಳ್ಳದ ಮೇಲೆ [ಐಗುಪ್ತದ ಮುಂದಿರುವ] ತೊರೆಯ ಮಾರ್ಗವಾಗಿ ದೊಡ್ಡ ಸಮುದ್ರಕ್ಕೆ ಮುಟ್ಟಬೇಕು. ಇದು ತೆಂಕಣ ಮೇರೆಯು.
Kannada Bible (KNCL) BSI 2016
“ದಕ್ಷಿಣದ ಮೇರೆ ತಾಮಾರಿನಿಂದ ಹೊರಟು ಮೆರೀಬೋತ್‍ಕಾದೇಶಿನ ಹಳ್ಳದ ಮೇಲೆ, ಈಜಿಪ್ಟಿನ ಮುಂದಿರುವ, ತೊರೆಯ ಮಾರ್ಗವಾಗಿ ದೊಡ್ಡ ಸಮುದ್ರಕ್ಕೆ ಮುಟ್ಟಬೇಕು. ಇದು ದಕ್ಷಿಣದ ಮೇರೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ದಕ್ಷಿಣದ ಕಡೆಗಿರುವ ದಕ್ಷಿಣದ ಮೇರೆಯೂ ತಾಮಾರ್ ಮೊದಲುಗೊಂಡು ಮೆರೀಬಾ ಕಾದೇಶಿನ ಹಳ್ಳದ ಮೇಲೆ ಈಜಿಪ್ಟಿನ ಮುಂದಿರುವ, ತೊರೆಯ ಮಾರ್ಗವಾಗಿ ದೊಡ್ಡ ಸಮುದ್ರದವರೆಗೆ ಇರುವುದು. ಇದೇ ದಕ್ಷಿಣದ ಮೇರೆ.