Ezekiel 47:2 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅವನು ನನ್ನನ್ನು ಉತ್ತರದ ದ್ವಾರದಿಂದ ಹೊರಕ್ಕೆ ತಂದು, ದೇವಾಲಯದ ಹೊರ ಅಂಚಿನಲ್ಲಿಯೇ ಪೂರ್ವ ದ್ವಾರಕ್ಕೆ ತಂದನು. ಆ ದ್ವಾರದ ದಕ್ಷಿಣದ ಕಡೆಯಿಂದ ನೀರು ಹರಿದು ಬರುತ್ತಿತ್ತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಅವನು ನನ್ನನ್ನು ಉತ್ತರದಿಕ್ಕಿನ ಹೆಬ್ಬಾಗಿಲಿನಿಂದ ದೇವಾಲಯದ ಹೊರಗಿನ ಮಾರ್ಗವಾಗಿ ಸುತ್ತಿಕೊಂಡು ಪೂರ್ವದಿಕ್ಕಿನ ಹೆಬ್ಬಾಗಿಲಿಗೆ ಕರೆದು ತಂದನು. ಅಲ್ಲಿ ನೋಡಲು ಅದರ ಬಲಗಡೆ ಮೆಲ್ಲನೆ ಹರಿಯುವ ನೀರು ಕಾಣಿಸಿತು.
Kannada BSI Bible 2016
ಆ ಮೇಲೆ ಅವನು ನನ್ನನ್ನು ಬಾಗಲಿನ ಮಾರ್ಗವಾಗಿ ಉತ್ತರ ಕಡೆಗೆ ಕರೆದುಕೊಂಡು ಹೋಗಿ ನನ್ನನ್ನು ಹೊರಗಿನ ಬಾಗಲಿನ ವರೆಗೂ ಹೊರಗಿನ ಮಾರ್ಗವಾದ ಪೂರ್ವಕ್ಕೆ ಅಭಿಮುಖವಾದ ಮಾರ್ಗವನ್ನು ಸುತ್ತುವಂತೆ ಮಾಡಿದನು. ಇಗೋ, ಅಲ್ಲಿಯೂ ಬಲಗಡೆಯಲ್ಲಿಯೂ ನೀರು ಹರಿಯುತ್ತಿತ್ತು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ಅವನು ನನ್ನನ್ನು ಬಡಗಣ ಹೆಬ್ಬಾಗಿಲಿಂದ ದೇವಾಲಯದ ಹೊರಗಣ ಮಾರ್ಗವಾಗಿ ಸುತ್ತಿಸಿಕೊಂಡು ಮೂಡಲ ಹೆಬ್ಬಾಗಿಲಿಗೆ ಕರತಂದನು; ಅಲ್ಲಿ ನೋಡಲು ಅದರ ಬಲಗಡೆ ಮೆಲ್ಲಮೆಲ್ಲನೆ ಹರಿಯುವ ನೀರು ಕಾಣಿಸಿತು.
Kannada Bible (KNCL) BSI 2016
ಆಗ ಅವನು ನನ್ನನ್ನು ಉತ್ತರ ಹೆಬ್ಬಾಗಿಲಿನಿಂದ ದೇವಾಲಯದ ಹೊರಗಿನ ಮಾರ್ಗವಾಗಿ ಸುತ್ತಿಸಿಕೊಂಡು ಪೂರ್ವದ ಹೆಬ್ಬಾಗಿಲಿಗೆ ಕರೆದುತಂದನು. ಅಲ್ಲಿ ನೋಡಲು ಅದರ ಬಲಗಡೆ ಮೆಲ್ಲಮೆಲ್ಲನೆ ಹರಿಯುವ ನೀರು ಕಾಣಿಸಿತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಮೇಲೆ ಅವನು ನನ್ನನ್ನು ಬಾಗಿಲಿನ ಮಾರ್ಗವಾಗಿ ಉತ್ತರದ ಕಡೆಗೆ ಕರೆದುಕೊಂಡು ಹೋಗಿ ನನ್ನನ್ನು ಹೊರಗಿನ ಬಾಗಿಲಿನವರೆಗೂ ಹೊರಗಿನ ಮಾರ್ಗವಾದ ಪೂರ್ವಕ್ಕೆ ಅಭಿಮುಖವಾದ ಮಾರ್ಗವನ್ನು ಸುತ್ತುವಂತೆ ಮಾಡಿದನು. ಮತ್ತು ದಕ್ಷಿಣ ಭಾಗದಿಂದ ನೀರು ಜಿನುಗುತ್ತಿತ್ತು.